Celebs » Ravichandran » Biography
ಜೀವನಚರಿತ್ರೆ

ವಿ. ರವಿಚಂದ್ರನ್ ಇವರು ಜನಿಸಿದ್ದು ಮೇ 30, 1961ರಲ್ಲಿ. ಇವರೊಬ್ಬ  ಭಾರತೀಯ ನಟ, ನಿರ್ಮಾಪಕ, ನಿರ್ದೇಶಕ, ಸಂಗೀತಗಾರರಾಗಿದ್ದಾರೆ. ರವಿಂಚಂದ್ರನ್ ಅವರ ತಂದೆ ಕನ್ನಡದ ಖ್ಯಾತ ನಿರ್ಮಾಪಕರಾದ ಎನ್.ವೀರಾಸ್ವಾಮಿಯವರು ಸ್ಥಾಪಿಸಿದ ಈಶ್ವರಿ ಸಂಸ್ಥೆಯ ಮೂಲಕ ಅನೇಕ ಉತ್ತಮ ಚಿತ್ರಗಳನ್ನು ರವಿಚಂದ್ರನ್ ನಿರ್ಮಿಸಿದ್ದಾರೆ. ರವಿಚಂದ್ರನ್ ನಟಿಸಿ, ನಿರ್ಮಿಸಿರುವ ಸಿಪಾಯಿ ಚಿತ್ರದೊಡನೆ ಈಶ್ವರಿ ಸಂಸ್ಥೆ ತನ್ನ ಬೆಳ್ಳಿ ಹಬ್ಬವನ್ನು ಆಚರಿಸಿಕೊಂಡಿತು.

ನಿರ್ದೇಶಕನ ರೂಪದಲ್ಲಿ ರವಿಚಂದ್ರನ್ ಅವರನ್ನು ಕಡೆಗಣಿಸಲಿಕ್ಕೆ ಸಾದ್ಯವೇ ಇಲ್ಲ ತಾಂತ್ರಿಕತೆಯ ಪರಿಪೂರ್ಣ ಜ್ಞಾನ ಹೊಂದಿರುವ ಹಾಗೂ ತಂತ್ರಜ್ಞಾನದ ವಿನೂತನ ರೀತಿಯ ಪ್ರಯೋಗ ಇವರ ನಿರ್ದೇಶನದ ಚಿತ್ರಗಳಲ್ಲಿ ಕಾಣಬಹುದು. ಇನ್ನೊಂದು ಇವರ ಚಿತ್ರಗಳಲ್ಲಿ ಕಂಡುಬರುವ ಪ್ರಮುಖ ಅಂಶವೆಂದರೆ ಸಂಗೀತ ಪ್ರತಿಯೊಂದು ಚಿತ್ರದಲ್ಲಿ ಹೊಸತು. ಉದಾಹರಣೆಗೆ ಭಾರೀ ಯಶಸ್ಸು ಕಂಡ ರಾಮಾಚಾರಿ ಹಾಗೂ ಪ್ರೇಮಲೋಕದ ಹಾಡುಗಳು. 

ಈಶ್ವರ್, ಅಭಿಮಾನಿ, ಕನಸುಗಾರ, ಏಕಾಂಗಿ,ಮಲ್ಲ, ಮನೆದೇವ್ರು,ರಾಮಾಚಾರಿ,ಸ್ವಾಭಿಮಾನಿ, ಯುಗಪುರುಷ, ಯುದ್ದಕಾಂಡ, ಸ್ವಾಭಿಮಾನ,ಶಾಂತಿಕ್ರಾಂತಿ, ರಣಧೀರ,ಅಂಜದ ಗಂಡು ಪ್ರೇಮಲೋಕ ಮುಂತಾದ ಚಿತ್ರಗಳು ಯಶಸ್ಸು ಕಂಡಿವೆ.

ಕನ್ನಡ ಚಿತ್ರರಂಗಕ್ಕೆ ರವಿಂಚಂದ್ರನ್ ಅವರ ಕೊಡುಗೆ ಅಪಾರವಾಗಿದೆ. ರವಿಚಂದ್ರನ್ ಅವರದು ಬಹುಮುಖ ಪ್ರತಿಭೆ. ನಟನೆ, ನಿರ್ಮಾಣ, ನಿರ್ದೇಶನ, ಸಾಹಿತ್ಯ, ಸಂಗೀತ, ಸಂಕಲನ ಮುಂತಾದ ಚಿತ್ರರಂಗದ ವಿವಿಧ ಪ್ರಕಾರಗಳಲ್ಲಿ ಕೆಲಸ ಮಾಡಿದ್ದಾರೆ.
    

 

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada