X
ಹೋಮ್ » ಸೆಲಬ್ರಿಟಿಗಳು » ಎಸ್ ಪಿ ಬಾಲಸುಬ್ರಹ್ಮಣ್ಯಂ
ಎಸ್ ಪಿ ಬಾಲಸುಬ್ರಹ್ಮಣ್ಯಂ

ಎಸ್ ಪಿ ಬಾಲಸುಬ್ರಹ್ಮಣ್ಯಂ

Singer/Actor
ಜೀವನ ಚರಿತ್ರೆ :  ಭಾರತ ಚಿತ್ರರಂಗ ಕಂಡ ಮಹಾನ್ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಇವರು ಜೂನ್ 4, 1946 ರಂದು ಆಂಧ್ರಪ್ರದೇಶದ ಚಿತ್ತೂರಿನ ಕೊನೇಟಮ್ಮಪೇಟಾ ನಲ್ಲಿ ಜನಿಸಿದ್ದಾರೆ.  ಹರಿಕಥೆ ಹೇಳುತ್ತಿದ್ದ ಇವರ ತಂದೆ ಎಸ್.ಪಿ.ಸಾಂಬಮೂರ್ತಿಯವರೇ ಇವರಿಗೆ ಪ್ರೇರಣೆ. ಹಾಡುವುದನ್ನು, ಹಾರ್ಮೋನಿಯಂ, ಕೊಳಲುಗಳನ್ನು ತಮ್ಮಷ್ಟಕ್ಕೆ ತಾವು ನುಡಿಸುತ್ತಾ ಸಂಗೀತದ ಪರ್ವತವೇ ಆದರು. ಮುಂದೆ ಮೇರು ಪ್ರಸಿದ್ಧಿ ಪಡೆದ ನಂತರದಲ್ಲಿ ವಿಧೇಯ ವಿದ್ಯಾರ್ಥಿಯಂತೆ ಶಾಸ್ತ್ರೀಯ ಸಂಗೀತವನ್ನೂ ಅಭ್ಯಾಸ ಮಾಡಿದರು. ಲಿಂಕ್‌ -->   ಎಸ್.ಪಿ.ಬಾಲಸುಬ್ರಹ್ಮಣ್ಯಂ - ವಿಷ್ಣುವರ್ಧನ್ ಟಾಪ್ 10 ಸಾಂಗ್ಸ್ ಲಿಂಕ್ -->   ಎಸ್.ಪಿ.ಬಾಲಸುಬ್ರಹ್ಮಣ್ಯಂ ಕನ್ನಡ ರಾಜ್ಯೋತ್ಸವ ಗೀತೆಗಳು   ಒಮ್ಮೆ ಇವರು ತಮಿಳು ತೆಲುಗಿನಲ್ಲಿ ಒಂದೇ ದಿನದಲ್ಲಿ 19ಗೀತೆಗಳನ್ನು ಧ್ವನಿಮುದ್ರಿಸಿದ್ದರು. ಕನ್ನಡದಲ್ಲಿ ಒಂದೇ ದಿನ 17 ಗೀತೆಗಳನ್ನು ಧ್ವನಿಮುದ್ರಿಸಿದ್ದರು, ಹಿಂದಿಯಲ್ಲಿ ಒಂದೇ ದಿನ 16 ಹಾಡುಗಳನ್ನು ಧ್ವನಿಮುದ್ರಿಸಿದ್ದರು. ಇದು ಎಸ್ ಪಿ ಬಿ ಅವರ ಸಾಮರ್ಥ್ಯ, ಅವರಿಗಿದ್ದ ಬೇಡಿಕೆ, ಅವರಿಗಿರುವ ವೈಶಾಲ್ಯತೆಗಳಿಗಿರುವ ನಿದರ್ಶನ. ಸಂಗೀತ ಪ್ರಧಾನವಾದ ಭಾರತೀಯ ಚಿತ್ರರಂಗದಲ್ಲಿ ಒಂದು ರೀತಿಯಲ್ಲಿ ಹಿನ್ನೆಲೆ ಗಾಯಕರು ಅಭಿನಯಿಸುವವರ ಆತ್ಮವಿದ್ದಂತೆ. "ಹಾವಿನ ದ್ವೇಷ ಹನ್ನೆರಡು ವರುಷ" ಎಂದು ಎಸ್. ಪಿ. ಹಾಡಿದಾಗ ವಿಷ್ಣುವರ್ಧನ್ ರಾಮಾಚಾರಿಯಾಗಿಬಿಟ್ಟರು. "ಸ್ನೇಹದ ಕಡಲಲ್ಲಿ" ಎಂದು ಹಾಡಿದಾಗ ಶ್ರೀನಾಥ್ ಗರಿಗೆದರಿಬಿಟ್ಟರು. "ಎಲ್ಲಿರುವೇ ಮನವ ಕಾಡುವ ರೂಪಸಿಯೇ" ಎಂದು ಅನಂತ್ ನಾಗ್ ಆಕಾಶಕ್ಕೆ ಹಾರಿದರು."ನಲಿವಾ ಗುಲಾಬಿ ಹೂವೆ" ಎಂದು ಶಂಕರ್ ಭಾವಸ್ಥರಾದರು. ದಕ್ಷಿಣ ಭಾರತದ ರಜನೀಕಾಂತ್, ಕಮಲಹಾಸನ್, ಚಿರಂಜೀವಿ ಹೀಗೆ ಎಪ್ಪತ್ತು ಎಂಭತ್ತರ ದಶಕದಿಂದ ಎರಡು ಸಾವಿರದ ದಶಕದವರೆಗಿನ ಬಹುತೇಕ ಹೀರೋಗಳ ಅಂತರ್ಧ್ವನಿ ಶಕ್ತಿ ಇವರದ್ದು. ಇವರ ಧ್ವನಿಯ ಮೋಡಿ ಎಂ.ಜಿ. ಆರ್, ಶಿವಾಜಿ ಗಣೇಶನ್, ಎನ್ ಟಿ ರಾಮರಾವ್, ರಾಜ್ ಕುಮಾರ್, ಅಕ್ಕಿನೇನಿ ಅಂತಹ ಹಿರಿಯರಿಗೆ ಕೂಡಾ ಆಗಾಗ ಇಣುಕಿತ್ತು. "ಹಿಂದಿಯಲ್ಲಿ ಏಕ್ ದೂಜೇ ಕೆ ಲಿಯೇ ಬಂದಾಗ ಬಾಲು ಹಿಂದಿ ಚಿತ್ರರಂಗವನ್ನೂ ತಮ್ಮ ಮೋಡಿಗೆ ಸೆಳೆದುಕೊಂಡರು. ಸಾಜನ್, ಮೈ ನೇ ಪ್ಯಾರ್ ಕಿಯಾ ಮುಂತಾದ ಚಿತ್ರಗಳು ಬಂದಾಗ ರಫಿ, ಕಿಶೋರ್ ಅವರನ್ನು ಕಳೆದುಕೊಂಡು ಕಂಗಾಲಾಗಿದ್ದ ಹಿಂದಿ ಚಿತ್ರರಂಗಕ್ಕೆ ಇವರು ಬೆನ್ನೆಲುಬಾಗಿದ್ದರು. "ಶಂಕರಾಭರಣಂ, ಪಂಚಾಕ್ಷರಿ ಗವಾಯಿ, ಸಾಗರ ಸಂಗಮಂ, ಸ್ವಾತಿ ಮುತ್ಯಂ, ರುದ್ರವೀಣ, ಏಕ್ ದೂಜೇ ಕೇಲಿಯೇ" ಚಿತ್ರಗಳ ಹಾಡುಗಳಿಗೆ  ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ. ಪದ್ಮಶ್ರೀ, ಪದ್ಮಭೂಷಣ, ಹಲವು ಡಾಕ್ಟರೇಟ್ ಪದವಿಗಳು, ಸಾವಿರಾರು ಇನ್ನಿತರ ಗೌರವ ಪ್ರಶಸ್ತಿಗಳು ಅವರನ್ನು ಹುಡುಕಿಕೊಂಡು ಬಂದಿವೆ. ಎಸ್ ಪಿ ಬಿ ಅವರು ಹಾಡಿರುವ ಹಾಡುಗಳ ಸಂಖ್ಯೆ 45000 ಕ್ಕೂ ಹೆಚ್ಚು.ವಿವಿಧ ಭಾಷೆಗಳ ಪರಿಧಿಯಲ್ಲಿ ಇಷ್ಟೊಂದು ಗೀತೆಗಳನ್ನು ಹಾಡಿರುವವರು ಇವರೊಬ್ಬರೇ. ಸಂಗೀತ ನಿರ್ದೇಶಕರಾಗಿ, ಹಲವಾರು ನಾಯಕರಿಗೆ ಮಾತುಗಾರರಾಗಿ, ನಟರಾಗಿ, ನಿರ್ಮಾಪಕರಾಗಿ ಕೂಡಾ ಬಾಲು ಚಿತ್ರರಂಗದಲ್ಲಿ ಅಪಾರ ಸಾಧನೆ ಮಾಡಿದ್ದಾರೆ. ಹಾಸ್ಯ ಪಾತ್ರಗಳಿಗೆ ಹೇಳಿ ಮಾಡಿಸಿದಂತಹ ಶಾರೀರಿಕ ಭಾಷಾಭಿವ್ಯಕ್ತಿ ಅವರಲ್ಲಿರುವುದನ್ನು ಸುಲಭವಾಗಿ ಕಾಣಬಹುದಾಗಿದೆ. ದಕ್ಷಿಣ ಭಾರತದ ತೆಲುಗು, ತಮಿಳು ಮತ್ತು ತೆಲುಗು ಚಿತ್ರರಂಗಗಳಲ್ಲಿ ಅವರದ್ದು ಅದ್ವಿತೀಯ ಸಾಧನೆ. ಗಾಯನದಲ್ಲಷ್ಟೇ ಅಲ್ಲದೆ, ನಟನೆ, ಸಂಗೀತ ಸಂಯೋಜನೆ, ಚಲನಚಿತ್ರ ನಿರ್ಮಾಣ, ಧ್ವನಿದಾನ, ಸಂಗೀತ ಕಾರ್ಯಕ್ರಮಗಳ ನಿರ್ವಹಣೆ ಮುಂತಾದವುಗಳಲ್ಲಿ ಅವರು ನಿರಂತರವಾದ ಸಾಧನೆ ಮಾಡುತ್ತಿದ್ದಾರೆ.ವಿವಿಧ ಭಾಷೆಗಳ ಪರಿಧಿಯಲ್ಲಿ 45ಸಾವಿರಕ್ಕೂ ಹೆಚ್ಚು ಹಾಡಿರುವ ಎಸ್.ಪಿ.ಬಿ ಅವರಿಗೆ ನಾಲ್ಕು ಭಾಷೆಗಳಲ್ಲಿ ಒಟ್ಟು 6 ರಾಷ್ಟ್ರ ಪ್ರಶಸ್ತಿಗಳು ಪದ್ಮಶ್ರೀ, ಪದ್ಮಭೂಷಣ ಪ್ರಶಸ್ತಿಗಳು 25 ಬಾರಿ ಆಂಧ್ರಪ್ರದೇಶ ಸರ್ಕಾರದ 'ನಂದಿ' ಪ್ರಶಸ್ತಿ. 4 ಭಾಷೆಗಳಿಗಾಗಿ ರಾಷ್ಟ್ರ ಪ್ರಶಸ್ತಿ ಪಡೆದ ಏಕೈಕ ವ್ಯಕ್ತಿ. ಎದೆ ತುಂಬಿ ಹಾಡಿದೆನು: ದೂರದರ್ಶನದಲ್ಲಿ ಒಂದು ದಶಕದಿಂದ ‘ಎದೆ ತುಂಬಿ ಹಾಡಿದೆನು’ ಕಾರ್ಯಕ್ರಮವನ್ನು ನಡೆಸಿಕೊಡುತ್ತಿರುವಂತೆ, ಇತರ ಭಾಷೆಗಳಲ್ಲೂ ಅಂತದೇ ಕಾರ್ಯಕ್ರಮಗಳನ್ನು ಬಾಲು ನಡೆಸುತ್ತಿದ್ದಾರೆ. ಅವರು ಪುಟ್ಟ ಮಕ್ಕಳಿಂದ ಹಿಡಿದು ಸಂಗೀತದ ದಿಗ್ಗಜಗಳವರೆಗೆ ಹಿರಿಯರು ಕಿರಿಯರು ಎಲ್ಲರನ್ನೂ ಗೌರವಪೂರ್ಣವಾಗಿ ನಡೆಸಿಕೊಳ್ಳುವುದನ್ನು ಕಾಣುವುದೇ ಒಂದು ಚೆಂದ ಎಂಬುದು ಅವರ ಅಭಿಮಾನಿ ವೀಕ್ಷಕರುಗಳ ನುಡಿ.  ಇವರ ಒಟ್ಟಾರೆ ಪ್ರಮುಖ ಸಾಧನೆಗಳನ್ನು ಹೇಳುವುದಾದರೆ ಅದು ಅಪರಿಮಿತವಾದುದು. ನಿಧನ ಕೋವಿಡ್ 19 ಗೆ ತುತ್ತಾಗಿದ್ದ ಎಸ್‌ಪಿಬಿ ಚೆನ್ನೈನ ಎಂಜಿಎಮ್ ಆಸ್ಪತ್ರೆಗೆ ದಾಖಲಾಗಿದ್ದರು. ಸೆಪ್ಟೆಂಬರ್ 25, 2020 ರ ಮಧ್ಯಾಹ್ನ ಸುಮಾರು ಒಂದು ಗಂಟೆಗೆ ನಿಧನರಾದರು.
ಮುಂದೆ ಓದಿ

ಎಸ್ ಪಿ ಬಾಲಸುಬ್ರಹ್ಮಣ್ಯಂ ಚಲಚಿತ್ರಗಳು

ಎಸ್ ಪಿ ಬಾಲಸುಬ್ರಹ್ಮಣ್ಯಂ: ವಯಸ್ಸು, ನಿವ್ವಳ ಮೌಲ್ಯ, ಚಲನಚಿತ್ರಗಳು, ಕುಟುಂಬ ಮತ್ತು ವೈಯಕ್ತಿಕ ವಿವರಗಳು

ಎಸ್ ಪಿ ಬಾಲಸುಬ್ರಹ್ಮಣ್ಯಂ

ಹೆಸರು ಎಸ್ ಪಿ ಬಾಲಸುಬ್ರಹ್ಮಣ್ಯಂ
ಹುಟ್ಟಿದ ದಿನ 04 Jun 1946
ವಯಸ್ಸು 80
ಹುಟ್ಟಿದ ಸ್ಥಳ Konetammapeta near Nellore, Andhra Pradesh.
ಪ್ರಸ್ತುತ ನಿವಾಸ
ಧರ್ಮ
ರಾಷ್ಟ್ರೀಯತೆ
ಎತ್ತರ
ಜನ್ಮ ರಾಶಿ
ಹವ್ಯಾಸಗಳು

ಎಸ್ ಪಿ ಬಾಲಸುಬ್ರಹ್ಮಣ್ಯಂ ಆಸ್ತಿ

ಆಸ್ತಿ
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+