X
ಸಿದ್ದೇಶ್ವರ ಸ್ವಾಮೀಜಿ

ಸಿದ್ದೇಶ್ವರ ಸ್ವಾಮೀಜಿ ಜೀವನ ಚರಿತ್ರೆ

ಸಿದ್ದೇಶ್ವರ ಶ್ರೀಗಳು ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದ ಸಾಮಾನ್ಯ ರೈತ ಕುಟುಂಬದಲ್ಲಿ 1940 ಸೆಪ್ಟೆಂಬರ್ 5ರಂದು ಜನಿಸಿದರು. ಇವರು ತಮ್ಮ ಗ್ರಾಮದಲ್ಲಿ ಎರಡನೇ ವಿವೇಕಾನಂದ ಎಂದೇ ಗುರುತಿಸಿಕೊಂಡಿದ್ದಾರೆ. 

ವಿದ್ಯಾಭ್ಯಾಸ 

ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದ ಶಾಲೆಯಲ್ಲಿಯೇ ಏಳನೇ ತರಗತಿಯವರೆಗೆ ಓದಿದ ನಂತರ ಅವರು ಮಲ್ಲಿಕಾರ್ಜುನ ಸ್ವಾಮಿಗಳ ಬಳಿ ಬಂದರ. ಬೆಳೆಯುವ ಪೈರು ಮೊಳಕೆಯಲ್ಲಿ ಎಂಬ ಮಾತಿನಂತೆ ಬಾಲಕ ಸಿದ್ದೇಶ್ವರನ ಚುರುಕುತನ ಮಲ್ಲಿಕಾರ್ಜುನ ಸ್ವಾಮಿಗಳ ಗಮನಕ್ಕೆ ಬಂದಿತ್ತು. ತಾವು ಪ್ರವಚನ ಮಾಡುವ ಸ್ಥಳಗಳಿಗೆ ಅವರು ಸಿದ್ದೇಶ್ವರರನ್ನು ಕರೆದುಕೊಂಡು ಹೋಗುತ್ತಿದ್ದರು. ಇದರ ಜೊತೆಗೆ ಶಾಲಾ-ಕಾಲೇಜು ವಿದ್ಯಾಭ್ಯಾಸ ಮುಂದುವರೆಯುವಂತೆ ನೋಡಿಕೊಂಡರು. ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪದವಿ ನಂತರ ಸ್ನಾತಕೋತ್ತರ ವಿದ್ಯಾಭ್ಯಾಸವನ್ನು ಕೊಲ್ಹಾಪುರ ವಿಶ್ವವಿದ್ಯಾಲಯಯದಿಂದ ತತ್ವಶಾಸ್ತ್ರ ವಿಷಯದಲ್ಲಿ ಪದವಿಯನ್ನು ಉನ್ನತ ಶ್ರೀನಿಯಲ್ಲಿ ಪಾಸು ಮಾಡಿದರು. 

ಆಧ್ಯಾತ್ಮ 

ವಿಜಯಪುರ ಜ್ಞಾನಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಆಧ್ಯಾತ್ಮದ ಬಗ್ಗೆ ಬಹಳ ಆಳವಾಗಿ ಅಧ್ಯಯನ, ಚಿಂತನೆಗಳನ್ನು ನಡೆಸಿರುವ ಶ್ರೇಷ್ಠ ಅನುಭವಿಗಳಾಗಿದ್ದರು. ಇವರು ಕನ್ನಡ, ಸಂಸ್ಕೃತ, ಇಂಗ್ಲೀಷ್, ಮಾರಾಠಿ ಮತ್ತು ಹಿಂದಿ ಭಾಷೆಗಳಲ್ಲಿ ನಿಷ್ಣಾತರಾಗಿದ್ದರು. ಮಹಾಬಲೇಶ್ವರ ಆರ್ ಕ್ಯಾಸನೂರು ಇವರ ಹೊಸ ಜ್ಙಾನ-ತತ್ವಗಳನ್ನು ಬಹುದಾಗಿ ಮೆಚ್ಚಿಕೊಂಡರು. 


ವಿಜಯಪುರ ಜ್ಞಾನಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳು ಆಧ್ಯಾತ್ಮದ ಬಗ್ಗೆ ತುಂಬ ಆಳವಾದ ಅಧ್ಯಯನ ಚಿಂತನೆಗಳನ್ನು ನಡೆಸಿರುವ ಶ್ರೇಷ್ಠ ಅನುಭಾವಿಗಳೂ ಮಧುರ ಸ್ವಭಾವದವರೂ ಆಗಿದ್ದು ಕನ್ನಡ, ಸಂಸ್ಕೃತ,ಇಂಗ್ಲಿಷ್, ಮರಾಠಿ ಮತ್ತು ಹಿಂದಿ ಭಾಷೆಗಳಲ್ಲಿ ನಿಷ್ಣಾತರು. ಮಹಾಬಲೇಶ್ವರ ಆರ್ ಕ್ಯಾಸನೂರು ಇವರ ಹೊಸ ಜ್ಞಾನ - ತತ್ವಗಳನ್ನ ಬಹುವಾಗಿ ಮೆಚ್ಚಿಕೊಂಡಿದ್ದರು. ಅತ್ಯಂತ ಸರಳ ಸಜ್ಜನಿಕೆಯ ಸಾಕಾರ ಮೂರ್ತಿ. ನನ್ನದು-ತನ್ನದೆಂಬ ಮಮಕಾರ ತೊರೆದ ಮಹಾಪುರುಷರೇ ಸಿದ್ಧೇಶ್ವರ ಸ್ವಾಮೀಜಿ. ಇವರು ಸಂತರಷ್ಟೇ ಅಲ್ಲ, ಜ್ಞಾನೋಪಾಸಕರು ಕೂಡ. ಸಂತರು ನಾಡಿನಲ್ಲಿ ಬಹಳ ಜನರಿದ್ದರು. ಈಗಲೂ ಇದ್ದಾರೆ. ಆದರೆ, ಜನಯೋಗಿಗಗಳು ಬಹಳ ಅಪರೂಪ. ಅತಂಹಬರೊಲ್ಲೊಬ್ಬರು ಶ್ರೀ ಸಿದ್ಧೇಶ್ವರ ಸ್ವಾಮೀಜಿ.  ವಿಜಯಪುರದ ಜ್ಞಾನಯೋಗಾಶ್ರಮ ಜನತೆಗೆ ಜ್ಞಾನದಾಸೋಹ ನೀಡುವ ವಿಶಿಷ್ಟ ಕೇಂದ್ರ. ಗದುಗಿನ ಶಿವಾನಂದ ಶ್ರೀಗಳ ಪರಂಪರೆಯಲ್ಲಿ ಬಂದ ಈ ಆಶ್ರಯ ಇವರ ಗುರುಗಳಾದ ವೇದಾಂತ ಕೇಸರಿ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳ ಕಾಲದಲ್ಲಿ ಅತ್ಯಂತ ಪ್ರವರ್ಧಮಾನಕ್ಕೆ ಬಂತು. ಉತ್ತರ ಕರ್ನಾಟಕದ ಜನಮಾನಸದಲ್ಲಿ ಬಹಳ ಮಹತ್ವ ಪಡೆಯಿತು. 
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+