ಸುಹಾಸಿನಿ ಮಣಿ ರತ್ನಂ ಇವರು ಕನ್ನಡ, ತಮಿಳು, ಮಲಯಾಳಂ, ತೆಲುಗು ಭಾಷೆಯ ಪ್ರಸಿದ್ಧ ನಟಿಯಾಗಿದ್ದಾರೆ. ಇವರು ಜನಿಸಿದ್ದು ಅಗಸ್ಟ್ 15, 1961 ಚೆನ್ನೈ ನಲ್ಲಿ. ಇವರು ಮದ್ರಾಸ್ ನ ಫಿಲ್ಮ್ ಇನ್ಸ್ ಟ್ಯೂಟ್ ನಲ್ಲಿ ತರಬೇತಿ ಪಡೆದುಕೊಂಡು ಅಶೋಕ್ ಕುಮಾರ್ ಎನ್ನುವರ ಕೆಳಗೆ ಅಸಿಸ್ಟೆಂಟ್ ಆಗಿ ಚಿತ್ರರಂಗದಲ್ಲಿ ಕಾರ್ಯನಿರ್ವಹಿಸಿದರು.
ನಂತರ 1980 ರಲ್ಲಿ ತಮಿಳು ಚಿತ್ರದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡು ತಮ್ಮ ಸಿನಿಮಾ ಪಯಣ ಪ್ರಾರಂಭಿಸಿದರು. ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ತೆರೆಕಂಡಿರುವ ಕನ್ನಡದ ಪಾಪುಲರ್ ಚಿತ್ರವಾದ "ಬಂಧನ" ಸಿನಿಮಾದಲ್ಲಿ ನಟಿಸಿ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡರು.
1990 ರಲ್ಲಿ ರಾಜೇಂದ್ರ ಸಿಂಗ್ ಬಾಬು ಅವರು ನಿರ್ದೇಶನ ಮಾಡಿರುವ ಡಾ. ವಿಷ್ಣುವರ್ಧನ್ ಅಭಿನಹಿಸಿದ "ಮುತ್ತಿನ ಹಾರ" ಸೇರಿದಂತೆ ಇನ್ನು ಹಲವು ಕನ್ನಡ ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಇವರು ಕೇವಲ ಕನ್ನಡ ಅಷ್ಟೇ ಅಲ್ಲದೆ ತೆಲುಗು, ತಮಿಳು, ಮಲಯಾಳಂ, ಸೇರಿದಂತೆ ಇತರ ಬಾಷೆಗಳ ಚಿತ್ರಗಳಲ್ಲಿ ನಟಿಸಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.
1988 ರಲ್ಲಿ ಖ್ಯಾತ ನಿರ್ದೇಶಕ ಮಣಿ ರತ್ನಂ ಅವರ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.