ಕನ್ನಡ ಕಿರುತೆರೆ ಮತ್ತು ಚಿತ್ರರಂಗದಲ್ಲಿ ಸಕ್ರಿಯವಾಗಿದ್ದ ಉದಯೋನ್ಮುಖ ನಟ. ರೋಮ್ಯಾಂಟಿಕ್ ಸೀರಿಯಲ್ `ಅಂತಪುರ' ಧಾರಾವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ನಟಿಸಿದ್ದರು. ಹಾಗೇ ದುನಿಯಾ ವಿಜಯ್ ಅಭಿನಯದ ಸಲಗ ಚಿತ್ರದಲ್ಲಿ ಪೋಲಿಸ್ ಪಾತ್ರದಲ್ಲಿ ನಟಿಸಿದ್ದರು.
ಮಂಡ್ಯದ ವಿವಿ ಬಡಾವಣೆ ನಿವಾಸಿಯಾಗಿದ್ದ ಸುಶೀಲ್ ಬೆಂಗಳೂರಿನಲ್ಲಿ ಜಿಮ್ ಟ್ರೇನರ್ ಆಗಿದ್ದರು. ಲಾಕ್ ಡೌನ್ ಕಾರಣದಿಂದ ಕಳೆದ ಮೂರು ತಿಂಗಳಿನಿಂದ ಜಿಮ್ ಮುಚ್ಚಿದ್ದರಿಂದ ಮಂಡ್ಯಕ್ಕೆ ವಾಪಸಾಗಿದ್ದರು. ಇಂಡವಾಳು ಗ್ರಾಮದಲ್ಲಿರುವ ತಮ್ಮ ಸ್ನೇಹಿತನ ಮನೆಗೆ ತೆರಳಿದ್ದ ಅವರು ಜುಲೈ 8, 2020 ರಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡರು.