twitter
    Celebs»Tamannaah Bhatia»Biography

    ತಮನ್ನಾ ಭಾಟಿಯಾ ಜೀವನಚರಿತ್ರೆ

    ಮಿಲ್ಕಿ ಬ್ಯೂಟಿ ಎಂದೇ ಖ್ಯಾತಿ ಪಡೆದಿರುವ ತಮನ್ನಾ ಭಾಟಿಯಾ ದಕ್ಷಿಣ ಚಿತ್ರರಂಗದ ಬಹುಬೇಡಿಕೆಯ ನಟಿ. ಪ್ರಮುಖವಾಗಿ ತೆಲಗು ಮತ್ತು ತಮಿಳು ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಇವರು ಕೆಲ ಹಿಂದಿ ಚಿತ್ರಗಳಲ್ಲಿ ಕೂಡ ನಟಿಸಿದ್ದಾರೆ. ಕನ್ನಡದಲ್ಲಿ `ಜಾಗ್ವಾರ್' ಮತ್ತು `ಕೆಜಿಎಫ್' ಚಿತ್ರಗಳ ಐಟೆಮ್ ಹಾಡುಗಳಿಗೆ ನೃತ್ಯ ಮಾಡಿದ್ದಾರೆ.

    1989 ಡಿಸೆಂಬರ್ 21 ರಂದು ಮುಂಬೈನಲ್ಲಿ ಸಿಂಧಿ ಕುಟುಂಬದಲ್ಲಿ ಜನಿಸಿದರು.ತಂದೆ ಸಂತೋಷ್ ಭಾಟಿಯಾ ವಜ್ರ ವ್ಯಾಪಾರಿ. ಮುಂಬೈನಲ್ಲಿಯೇ ವಿಧ್ಯಾಭ್ಯಾಸ ಮುಗಿಸಿದ ತಮನ್ನಾ ತಮ್ಮ 13 ನೇ ವಯಸ್ಸಿನಲ್ಲಿಯೇ ನಟನೆಗೆ ಇಳಿದರು.2005 ರಲ್ಲಿ ತಮ್ಮ ಹದಿನೈದನೇ ವಯಸ್ಸಿನಲ್ಲಿ `ಚಾಂದ್ ಸಾ ರೋಷನ್ ಚೆಹರಾ' ಚಿತ್ರದಲ್ಲಿ ನಾಯಕಿಯಾಗಿ ನಟಿಸಿದರು. ಈ ಚಿತ್ರ ಯಶಸ್ವಿಯಾಗಲಿಲ್ಲ. ಅದೇ ವರ್ಷ ತೆಲುಗಿನ ಶ್ರೀ ಮತ್ತು ಮುಂದಿನ ವರ್ಷ ತಮಿಳಿನ ಕೇಡಿ ಚಿತ್ರಗಳಲ್ಲಿ ನಟಿಸಿದರು. ಈ ಚಿತ್ರಗಳ ನಟನೆಗೆ ಪ್ರಶಂಸೆ ಪಡೆದರು. ನಂತರ ತೆರೆಕಂಡ ಹ್ಯಾಪಿ ಡೇಸ್, ಕಲ್ಲೂರಿ ಚಿತ್ರಗಳು ತಮನ್ನಾಗೆ ಇನ್ನಷ್ಟು ಖ್ಯಾತಿ ನೀಡಿದವು.

    'ಕೊಂಚಂ ಇಷ್ಟಂ ಕೊಂಚಂ ಕಷ್ಟಂ', ಪೈಯ್ಯ, 100 %  ಲವ್, ಬದ್ರಿನಾಥ್  ಮುಂತಾದ ಚಿತ್ರಗಳು ತಮಿಳು ಮತ್ತು ತೆಲಗು ಚಿತ್ರರಂಗದಲ್ಲಿ ತಮನ್ನಾಗೆ ಭದ್ರವಾದ ತಳಪಾಯ ಹಾಕಿದವು. ಹಿಂದಿಯಲ್ಲಿ ಹಿಮ್ಮತ್ತವಾಲಾ, ಎಂಟರ್ಟೇನಮೆಂಟ್ ಮುಂತಾದ ಚಿತ್ರಗಳಲ್ಲಿ ನಟಿಸಿದರು. ಎರಡು ಭಾಗಗಳಲ್ಲಿ ತೆರೆಕಂಡ ಬಾಹುಬಲಿ ಚಿತ್ರ ತಮನ್ನಾ ಭಾರತದಾದ್ಯಂತ ಜನಪ್ರಿಯತೆ ತಂದು ಕೊಟ್ಟಿತು.

     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X