ವಿನಯ ಬಾಲಾಜಿ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಿರ್ದೇಶಕ. BESIT ಕಾಲೇಜಿನಲ್ಲಿ ಪದವಿ ಪಡೆದಿರುವ ಇವರು ಜೀ ಇನ್ಸ್ಟಿಟ್ಯೂಟ್ ಆಫ್ ಕ್ರಿಯೇಟಿವ್ ಆರ್ಟ್ಸ್ ನಲ್ಲಿ ಚಿತ್ರ ನಿರ್ದೇಶನ ಮತ್ತು ವಿಷ್ಯುಲ್ ಎಫೆಕ್ಟ್ಸನಲ್ಲಿ ತರಬೇತಿ ಪಡೆದಿದ್ದಾರೆ.
ಪ್ರಿಯಾಮಣಿ,ಮಯೂರಿ ಮುಖ್ಯಪಾತ್ರದಲ್ಲಿ ನಟಿಸುತ್ತಿರುವ ಕ್ರೈಮ್ ಥ್ರಿಲ್ಲರ್ ಕಥಾನಕ ಹೊಂದಿರುವ `ನನ್ನ ಪ್ರಕಾರ' ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈ ಚಿತ್ರದ ಮೂಲಕ ಕನ್ನಡ ಸಿನಿರಂಗ ಪ್ರವೇಶಿಸುತ್ತಿದ್ದಾರೆ.