ಇಂಜಿನಿಯರಿಂಗ್ ಪದವಿ ಪಡೆದ ಕನ್ನಡದ ಸ್ಟಾರ್ ನಟರಿವರು

Recommended Video

Engineers of Sandalwood | ಕನ್ನಡ ಸಿನಿರಂಗದ ಇಂಜಿನಿಯರಿಂಗ್ ಪದವೀಧರರು | FILMIBEAT KANNADA

ಕನ್ನಡ ಚಿತ್ರರಂಗದ ಸ್ಟಾರ್ ನಟರ ವಿದ್ಯಾಭ್ಯಾಸವೇನು ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇರುತ್ತೆ. ಸ್ಯಾಂಡಲ್ ವುಡ್ ನಲ್ಲಿ ನಾನಾವಿಭಾಗದಲ್ಲಿ ಪದವಿ ಪಡೆದ ಕಲಾವಿದರಿದ್ದಾರೆ. ಕಲೆಗೆ ವಿದ್ಯೆಯ ಹಂಗಿಲ್ಲ. ಓದು, ಸ್ಕೂಲ್, ಶಿಕ್ಷಣ ಬೇಕು. ಆದರೆ, ಅದು ಇಲ್ಲದಿದ್ದರೂ ಸಾಧನೆ ಮಾಡಬಹುದು. ಶಾಲೆಗೆ ಹೋಗದೆ ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡಿದ ಅನೇಕ ನಟರಿದ್ದಾರೆ.

ಇತ್ತೀಚಿಗೆ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಅನೇಕರು ಐಟಿ ಫೀಲ್ಡ್ ಯಿಂದ ಬಂದವರಾಗಿದ್ದಾರೆ. ಇಂಜಿನಿಯರಿಂಗ್ ಪದವಿ ಪಡೆದು ಚಿತ್ರರಂಗದಲ್ಲಿ ಸ್ಟಾರ್ ಆಗಿರುವ ಅನೇಕ ನಟರಿದ್ದಾರೆ. ಅಭಿಮಾನಿಗಳ ಕುತೂಹಲಕ್ಕಾಗಿ ಸ್ಯಾಂಡಲ್ ವುಡ್ ನಲ್ಲಿ ಇಂಜಿನಿಯರಿಂಗ್ ಮುಗಿಸಿದ ಕೆಲವು ಕಲಾವಿದರ ಬಗ್ಗೆ ಒಂದು ವಿವರ ಇಲ್ಲಿದೆ.

ರಮೇಶ್ ಅರವಿಂದ್

ರಮೇಶ್ ಅರವಿಂದ್

ನಟ ಮತ್ತು ನಿರ್ದೇಶಕ ರಮೇಶ್ ಅರವಿಂದ್ ಸಹ ಇಂಜಿನೀಯರಿಂಗ್ ಪದವಿ ಪಡೆದಿದ್ದಾರೆ. ಬೆಂಗಳೂರಿನ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನೀಯರಿಂಗ್ ಕಾಲೇಜ್ ನಲ್ಲಿ ರಮೇಶ್ ಒದಿ ಇಂಜಿನೀಯರಿಂಗ್ ಪದವಿ ಪಡೆದಿದ್ದಾರೆ. ರಮೇಶ್ ಅರವಿಂದ್ ಎಲೆಕ್ಟ್ರಿಕಲ್ ವಿಭಾಗದಲ್ಲಿ ಇಂಜಿನಿಯರಿಂಗ್ ಮಾಡಿದ್ದಾರೆ.

ಕಿಚ್ಚ ಸುದೀಪ್

ಕಿಚ್ಚ ಸುದೀಪ್

ಚಿತ್ರರಂಗದಲ್ಲಿ ಸಾಕಷ್ಟು ನಟರು ಇಂಜಿನೀಯರಿಂಗ್ ಮಾಡಿದ್ದಾರೆ. ಅದರಲ್ಲಿ ನಟ ಸುದೀಪ್ ಕೂಡ ಒಬ್ಬರು. ಬೆಂಗಳೂರಿನ ದಯಾನಂದ ಸಾಗರ್ ಕಾಲೇಜ್ ನಲ್ಲಿ Industrial and production engineering ವಿಭಾಗದಲ್ಲಿ ಸುದೀಪ್ ತಮ್ಮ ಇಂಜಿನೀಯರಿಂಗ್ ಪದವಿ ಮುಗಿಸಿದ್ದಾರೆ. ಶಿವಮೊಗ್ಗದಲ್ಲಿ ಹುಟ್ಟಿದ ಕಿಚ್ಚ ವಾಸವಿ ವಿದ್ಯಾಲಯದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಮಾಡಿದ್ದಾರೆ. ನಟನ ತರಬೇತಿಗಾಗಿ ಮುಂಬೈಗೆ ಹೋದ ಸುದೀಪ್ ನಂತರ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು.

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್

ಇಂಜಿನಿಯರಿಂಗ್ ಪದವಿ ಪಡೆದ ಸ್ಟಾರ ನಟರಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕೂಡ ಇದ್ದಾರೆ. ಕೆಮಿಕಲ್ ಇಂಜಿನಿಯರಿಂಗ್ ನಲ್ಲಿ ಪದವಿ ಪಡೆದಿದ್ದಾರೆ. ಮದ್ರಾಸ್ ವಿಶ್ವವಿದ್ಯಾಲಯ ನ್ಯೂವ್ ಕಾಲೇಜ್ ನಲ್ಲಿ ಶಿವಣ್ಣ ಇಂಜಿನಿಯರಿಂಗ್ ಮುಗಿಸಿದ್ದಾರೆ. ಅಂದ್ಹಾಗೆ ಶಿವಣ್ಣ ಹುಟ್ಟಿ ಬೆಳೆದಿದ್ದು ಚೆನ್ನೈನಲ್ಲಿ. ಶಿವಣ್ಣ ಪ್ರಾಥಮಿಕ ಮತ್ತು ಕಾಲೇಜು ಶಿಕ್ಷಣ ಎಲ್ಲಾ ಚೆನ್ನೈನಲ್ಲಿ ಮುಗಿಸಿದ್ದಾರೆ.

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ

ನಟ ರಕ್ಷಿತ್ ಶೆಟ್ಟಿ ಕೂಡ ಇಜಿನೀಯರಿಂಗ್ ಪದವಿ ಪಡೆದಿದ್ದಾರೆ. ಎಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದಲ್ಲಿ ಪದವಿ ಪಡೆದಿದ್ದಾರೆ. ನಿಟ್ಟೆಯ NMAM ನ್ಯಾಮ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ರಕ್ಷಿತ್ ಇಂಜಿನಿಯರಿಂಗ್ ಓದಿದ್ದಾರೆ. ಪ್ರಾಥಮಿಕ ಶಿಕ್ಷಣವನ್ನು ಉಡುಪಿಯಲ್ಲಿ ಮುಗಿಸಿದ್ದಾರೆ.

ನಟ ನಿರೂಪ್ ಭಂಡಾರಿ

ನಟ ನಿರೂಪ್ ಭಂಡಾರಿ

ರಂಗಿತರಂಗ ಚಿತ್ರದ ಮೂಲಕ ಕನ್ನಡ ಚಿತ್ರಾಭಿಮಾನಿಗಳನ್ನು ಮೋಡಿ ಮಾಡಿದ್ದ ನಟ ನಿರೂಪ್ ಭಂಡಾರಿ ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ. ಮೈಸೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿರುವ ನಿರೂಪ್ ವಿದ್ಯಾ ವಿಕಾಸ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ಮುಗಿಸಿದ್ದಾರೆ.

ನಟ ರಿಷಿ

ನಟ ರಿಷಿ

ಆಪರೇಷನ್ ಅಲಮೇಲಮ್ಮ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ನಟ ರಿಷಿ ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಪದವಿ ಪಡೆದಿದ್ದಾರೆ. ಪ್ರಾಥಮಿಕ ಮತ್ತು ಕಾಲೇಜು ಶಿಕ್ಷಣವನ್ನು ರಿಷಿ ಮೈಸೂರಿನಲ್ಲಿಯೆ ಮುಗಿಸಿದ್ದಾರೆ.

More from Filmibeat

English summary
Kannada Actors Sudeep, Shivarajkumar, Ramesh Aravind and others with engineering degrees.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X