Engineers Day 2023: ಎಂಜಿನಿಯರಿಂಗ್ ಮಾಡಿ ಸಿನಿ ಕ್ಷೇತ್ರದಲ್ಲಿ ಮಿಂಚುತ್ತಿರುವ ತಾರೆಯರು

ಭಾರತದಲ್ಲಿ ಪ್ರತಿ ವರ್ಷ ಸೆಪ್ಟೆಂಬರ್ 15 ರಂದು ಎಂಜಿನಿಯರ್ ದಿನ ಆಚರಿಸಲಾಗುತ್ತದೆ. ಸಮಾಜಕ್ಕೆ ಎಂಜಿನಿಯರ್‌ಗಳ ಕೊಡುಗೆಗಳನ್ನು ಗೌರವಿಸಲು ಮತ್ತು ಎಂ ವಿಶ್ವೇಶ್ವರಯ್ಯ ಅವರ ಜನ್ಮದಿನವನ್ನು ಆಚರಿಸಲು ಎಂಜಿನಿಯರ್‌ಗಳ ದಿನವನ್ನು ಭಾರತದಾದ್ಯಂತ ಆಚರಿಸಲಾಗುತ್ತದೆ. ಭಾರತವಲ್ಲದೆ ಸೆಪ್ಟೆಂಬರ್ 15 ರಂದು ಶ್ರೀಲಂಕಾ ಮತ್ತು ತಾಂಜಾನಿಯಾದಲ್ಲಿಯೂ ಎಂಜಿನಿಯರ್ ದಿನವನ್ನು ಆಚರಿಸಲಾಗುತ್ತದೆ.

ಇನ್ನು, ಎಂಜಿನಿಯರಿಂಗ್ ಪದವಿ ಪಡೆದು ನಟನಾ ಕ್ಷೇತ್ರಕ್ಕೆ ಹಲವು ಮಂದಿ ನಟ ನಟಿಯರು ಕಾಲಿರಿಸಿದ್ದಾರೆ. ಬಾಲಿವುಡ್, ಸ್ಯಾಂಡಲ್‌ವುಡ್‌ ಸೇರಿದಂತೆ ಹಲವು ಸಿನಿರಂಗದಲ್ಲಿ ನಾಯಕ, ನಾಯಕಿ, ತಂತ್ರಜ್ಞರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇಲ್ಲಿ ಅಂತಹ ಕೆಲವು ಸೆಲಬ್ರಿಟಿಗಳನ್ನು ಪಟ್ಟಿ ಮಾಡಲಾಗಿದೆ.

National Engineers Day 2023: Indian cinema Celebrities Who Studied Engineering

ರಮೇಶ್ ಅರವಿಂದ್

ರಮೇಶ್ ಅರವಿಂದ್ ಅವರು ನಟ, ನಿರ್ದೇಶಕ, ಬರಹಗಾರ, ನಿರ್ಮಾಪಕ, ಟಿವಿ ಶೋ ನಿರೂಪಕ ಮತ್ತು ದಕ್ಷಿಣ ಭಾರತದ ಚಲನಚಿತ್ರೋದ್ಯಮದಲ್ಲಿ ಎಲ್ಲರ ಅಚ್ಚುಮೆಚ್ಚಿನ ವ್ಯಕ್ತಿ. ಸಿನಿಮಾ ಕ್ಷೇತ್ರದಲ್ಲಿ ತಮ್ಮ ಅದ್ಭುತ ನಟನೆ ಮತ್ತು ಸ್ನೇಹಪರ ಸ್ವಭಾವದ ಮೂಲಕ ಸಿನಿ ಪ್ರೇಕ್ಷಕರನ್ನು ರಂಜಿಸಿರುವ ಅವರು ಒಬ್ಬ ಎಂಜಿನಿಯರಿಂಗ್ ಪದವಿಧರರು.

ರಮೇಶ್ ಅರವಿಂದ್ ಅವರು ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್ (UVCE) ಅಂದರೆ ಬೆಂಗಳೂರಿನ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಎಂಜಿನಿಯರಿಂಗ್ ಪದವಿ ಪಡೆದಿದ್ದಾರೆ. ಈ ಬಾರಿಯು ಎಂಜಿನಿಯರಿಂಗ್ ದಿನದ ಶುಭಾಶಯಗಳನ್ನು ಹಂಚಿಕೊಂಡಿದ್ದಾರೆ.

National Engineers Day 2023: Indian cinema Celebrities Who Studied Engineering


ಕಿಚ್ಚ ಸುದೀಪ್

ತಮ್ಮ ಅಭಿಮಾನಿಗಳಿಂದ ಅಭಿನಯ ಚಕ್ರವರ್ತಿ ಎಂದು ಕರೆಸಿಕೊಳ್ಳುವ ನಟ ಸುದೀಪ್ ನಟನೆಯ ಜೊತೆಗೆ, ನಿರ್ಮಾಪಕ, ನಿರೂಪಕ ಮತ್ತು ನಿರ್ದೇಶಕರಾಗಿಯೂ ಸಿನಿಮಾರಂಗದಲ್ಲಿ ಕೆಲಸ ಮಾಡುತ್ತಾರೆ. ಕನ್ನಡ ಮಾತ್ರವಲ್ಲದೆ ಅವರು ತಮಿಳು, ತೆಲುಗು ಮತ್ತು ಹಿಂದಿ ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಸುದೀಪ್ ಬೆಂಗಳೂರಿನ ದಯಾನಂದ ಸಾಗರ್ ಕಾಲೇಜ್ ಆಫ್ ಇಂಜಿನಿಯರಿಂಗ್‌ನಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ.

ಶ್ರೀನಿಧಿ ಶೆಟ್ಟಿ

ಕೆಜಿಎಫ್‌ ಖ್ಯಾತಿಯ ನಟಿ ಶ್ರೀನಿಧಿ ಶೆಟ್ಟಿ ಮಂಗಳೂರು ಮೂಲದವರು. ಮಾಡೆಲ್ ಮತ್ತು ಸೌಂದರ್ಯ ಸ್ಪರ್ಧೆಯ ವಿಜೇತರಾಗಿರುವ ಅವರು, ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯದಿಂದ ಬ್ಯಾಚುಲರ್ ಆಫ್ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ಪದವಿಯನ್ನು ಪಡೆದಿದ್ದಾರೆ. ಎಂಜಿನಿಯರಿಂಗ್ ಪರೀಕ್ಷೆಯಲ್ಲಿ 85% ಗಳಿಸಿದ್ದ ಇವರು ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದರು.

National Engineers Day 2023: Indian cinema Celebrities Who Studied Engineering

ರಕ್ಷಿತ್ ಶೆಟ್ಟಿ

ಇತ್ತೀಚೆಗೆ ಸಪ್ತ ಸಾಗರದಾಚೇ ಎಲ್ಲೋ ಸಿನಿಮಾ ಮೂಲಕ ಕನ್ನಡಿಗರನ್ನು ರಂಜಿಸುತ್ತಿರುವ ನಟ, ನಿರ್ಮಾಪಕ ಮತ್ತು ನಿರ್ದೇಶಕ ರಕ್ಷಿತ್ ಶೆಟ್ಟಿ ಕೂಡ ಎಂಜಿನಿಯರಿಂಗ್ ಮಾಡಿದವರೆ. ನಿಟ್ಟೆ ಮಹಾಲಿಂಗ ಅಡ್ಯಂತಾಯ ಮೆಮೋರಿಯಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (N.M.A.M) ಕಾಲೇಜಿನಿಂದ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಮತ್ತು ಸಂವಹನದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

ಕೃತಿ ಸನೋನ್

ಬಾಲಿವುಡ್ ಮತ್ತು ತೆಲುಗು ಸಿನಿಮಾಗಳಲ್ಲಿ ಕಾಣಿಸಿಕೊಂಡಿರುವ ರಾಷ್ಟ್ರಪ್ರಶಸ್ತಿ ವಿಜೇತ ನಟಿ ಕೃತಿ ಸನನ್ ಮಾಡೆಲಿಂಗ್ ಮತ್ತು ಚಿತ್ರರಂಗಕ್ಕೆ ಬರುವ ಮುನ್ನ ನೋಯ್ಡಾದಲ್ಲಿರುವ ಜೆಪಿ ಇನ್‌ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿಯಿಂದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್‌ನಲ್ಲಿ ಬ್ಯಾಚುಲರ್ ಪದವಿಯನ್ನು ಗಳಿಸಿದ್ದಾರೆ.

ಡಾಲಿ ಧನಂಜಯ್

ನಟ, ನಿರ್ಮಾಪಕ ಮತ್ತು ನಿರ್ದೇಶಕ ಡಾಲಿ ಧನಂಜಯ್ ಸ್ಯಾಂಡಲ್‌ವುಡ್ ಚಿತ್ರರಂಗದ ಅದ್ಭುತ ನಟರಲ್ಲಿ ಒಬ್ಬರು. ರಂಗಭೂಮಿ, ನಟನೆಗೆ ಬರುವ ಮುನ್ನ ಧನಂಜಯ್ ಮೈಸೂರಿನ ಶ್ರೀ ಜಯಚಾಮರಾಜೇಂದ್ರ ಕಾಲೇಜ್ ಆಫ್ ಎಂಜಿನಿಯರಿಂಗ್‌ನಲ್ಲಿ ಕಂಪ್ಯೂಟರ್ ಪ್ರೋಗ್ರಾಮಿಂಗ್‌ನಲ್ಲಿ ಬ್ಯಾಚುಲರ್ ಆಫ್ ಆರ್ಟ್ಸ್ ಪದವಿ ಪಡೆದಿದ್ದಾರೆ.

ಆರ್ ಮಾಧವನ್

ಆರ್ ಮಾಧವನ್ ಹಲವಾರು ಬಾಲಿವುಡ್ ಮತ್ತು ದಕ್ಷಿಣ ಭಾರತದ ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿರುವ ಪ್ರಸಿದ್ಧ ನಟ. ಅವರು ಕೊಲ್ಲಾಪುರದ ರಾಜಾರಾಮ್ ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್

ದಿವಂಗತ ಸುಶಾಂತ್ ಸಿಂಗ್ ರಜಪೂತ್ ಪ್ರತಿಭಾವಂತ ನಟ ಮಾತ್ರವಲ್ಲದೆ ದೆಹಲಿ ಕಾಲೇಜ್ ಆಫ್ ಎಂಜಿನಿಯರಿಂಗ್ (ಈಗ ದೆಹಲಿ ಟೆಕ್ನಾಲಜಿಕಲ್ ಯೂನಿವರ್ಸಿಟಿ ಎಂದು ಕರೆಯಲಾಗುತ್ತದೆ) ನಿಂದ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಬ್ಯಾಚುಲರ್ ಪದವಿಯನ್ನು ಪಡೆದಿದ್ದಾರೆ.

ವಿಕ್ಕಿ ಕೌಶಲ್

2015 ರ ಚಿತ್ರ ಮಸಾಣ್‌ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದ ವಿಕ್ಕಿ ಕೌಶಲ್, 2009 ರಲ್ಲಿ ಮುಂಬೈನ ರಾಜೀವ್ ಗಾಂಧಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಶನ್‌ನಲ್ಲಿ ಪದವಿ ಪಡೆದಿದ್ದಾರೆ.

ಸೋನು ಸೂದ್

ಕೊರೊನಾ ಸಾಂಕ್ರಾಮಿಕದ ಸಮಯದಲ್ಲಿ ಜನರ ಕಷ್ಟಕ್ಕೆ ಹೆಗಲು ಕೊಟ್ಟ ನಟ ಸೋನು ಸೂದ್ ಭಾರತದ ಅತ್ಯಂತ ಪ್ರಸಿದ್ಧ ಸೆಲೆಬ್ರಿಟಿಗಳಲ್ಲಿ ಒಬ್ಬರು.ಇವರು ಕೂಡ ನಾಗ್ಪುರದ ಯಶವಂತರಾವ್ ಚವಾಣ್ ಕಾಲೇಜ್ ಆಫ್ ಎಂಜಿನಿಯರಿಂಗ್‌ನಲ್ಲಿ ಎಲೆಕ್ಟ್ರಾನಿಕ್ ಎಂಜಿನಿಯರಿಂಗ್‌ನಲ್ಲಿ ಬಿ.ಟೆಕ್ ಪದವಿ ಪಡೆದಿದ್ದಾರೆ.

More from Filmibeat

English summary
National Engineers Day 2023: Indian cinema Celebrities Who Studied Engineering.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X