ಕೆಎಫ್ ಸಿಸಿ ಕರ್ಮಕಾಂಡ: ಬೇಲಿಯೇ ಎದ್ದು ಹೊಲ ಮೇಯ್ದಂತೆ

By * ಮಹೇಶ್ ಎಂ.ಆರ್. ಬೆಂಗಳೂರು
<ul id="pagination-digg"><li class="next"><a href="/gossips/07-non-kannada-film-release-dubbing-artists-kfcc-rules-aid0039.html">Next »</a></li></ul>

KFCC violates rules
ನಿಯಮಗಳು ಮಾಡುವುದೇ ಮುರಿಯೋದಕ್ಕೆ ಎಂಬ ಮಾತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಒಪ್ಪುತ್ತದೆ. ಅನೇಕ ಬಾರಿ ಕರ್ನಾಟಕ ಚಲನಚಿತ್ರ ಮಂಡಳಿ ವಿಧಿಸಿದ ನಿಯಮಗಳನ್ನು ಪರಭಾಷೆ ಚಿತ್ರಗಳ ವಿತರಕರು ಗಾಳಿಗೆ ತೂರಿರುವುದನ್ನು ನಾವು ಕಾಣಬಹುದು.

ಈ ಹಿಂದೆ ಹಿಂದಿಯ ರಾವಣ, ಕೈಟ್ಸ್, ತೆಲುಗಿನ ದೂಕುಡು, ಊಸರವಳ್ಳಿ ಚಿತ್ರ ಬಿಡುಗಡೆ ಸಮಯದಲ್ಲಿ ಈ ನಿಯಮಗಳನ್ನು ಪಾಲಿಸಲಾಗಿಲ್ಲ. ಅದೇ ಪರಿಪಾಠ ಈ ಸಲದ ದೀಪಾವಳಿ ಸಮಯದಲ್ಲೂ ಮುಂದುವರೆದಿದೆ.

ಆದರೆ ಈ ಬಾರಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯೇ ಮುಂದೆ ನಿಂತು, ತಾನು ಸ್ವತ: ಮಾಡಿದ ನಿಯಮಗಳನ್ನು ಹಿಂದಿಯ ರಾ ಒನ್, ತಮಿಳಿನ ವೆಲಾಯುಧಂ, 7 ಅಮ್ ಅರಿವು ಚಿತ್ರಗಳ ಮೂಲಕ ಕಸದ ಬುಟ್ಟಿಗೆ ಎಸೆದಿದೆ.

ಮಂಡಳಿಯ ಸಲಹಾ ಸಮಿತಿ ಸದಸ್ಯರು ಈ ಮೂರು ಚಿತ್ರಗಳನ್ನು ಕರ್ನಾಟಕದಲ್ಲಿ ನಿಯಮ ಮೀರಿ ಬಿಡುಗಡೆಗೊಳಿಸಲು ಅನುಮತಿ ನೀಡಿದ್ದಾರೆ ಎಂಬ ಸುದ್ದಿ ಇತ್ತೀಚಿಗೆ ಡೆಕ್ಕನ್ ಹೆರಾಲ್ಡಿನಲ್ಲಿ ಪ್ರಕಟವಾಗಿತ್ತು. (The members of the advisory board of the Karnataka Film Chamber of Commerce (KFCC) have consented to the release of Ra. One, Velayudham, and 7 Aum Arivu during Deepavali this week. And because of this no Kannada films are releasing this week.) ಇದು ಆಶ್ಚರ್ಯವಾದರೂ ಸತ್ಯ.

ಕನ್ನಡ ಚಿತ್ರರಂಗದ ಏಳಿಗೆಗೆ ಸಲಹೆಗಳನ್ನು ನೀಡಬೇಕಾದ ಮಂಡಳಿಯ ಸಲಹಾ ಸಮಿತಿ ಸದಸ್ಯರು ಪರಭಾಷೆ ಚಿತ್ರಗಳನ್ನು ನಿಯಮ ಮೀರಿ ಬಿಡುಗಡೆ ಮಾಡುವಂತೆ ಸಲಹೆ ಮಾಡಿದ್ದಾರೆ.!

ಕನ್ನಡ ಚಿತ್ರಗಳ ಮಾರುಕಟ್ಟೆ ಬೆಳೆಸುವ ಬಗ್ಗೆ ಸಲಹೆ ನೀಡಬೇಕಾದವರಲ್ಲಿ ಕೆಲವರು ಪರಭಾಷೆ ಚಿತ್ರ ವಿತರಣೆ ಹಕ್ಕನ್ನು ಪಡೆದುಕೊಂಡು, ಕನ್ನಡ ಚಿತ್ರಗಳು ಬಿಡುಗಡೆ ಆಗದ ಹಾಗೆ, ಈಗಾಗಲೇ ಬಿಡುಗಡೆ ಆದ ಚಿತ್ರಗಳಿಗೆ ಚಿತ್ರಮಂದಿರ ಸಿಗದ ಹಾಗೆ ಪರಿಸ್ಥಿತಿ ನಿರ್ಮಿಸಿ ಕನ್ನಡ ಚಿತ್ರರಂಗದ ಬಗೆಗಿನ ತಮ್ಮ ಇಚ್ಛಾಶಕ್ತಿಯನ್ನು ಪ್ರದರ್ಶಿಸಿದ್ದಾರೆ. ಇದು ಚಲನಚಿತ್ರ ಮಂಡಳಿಯ ಕರ್ಮಕಾಂಡ.

ಇದರಿಂದ ಕಲಾವಿದರ ಹೊಟ್ಟೆಪಾಡಿಗೆ ಕತ್ತರಿ ಹೇಗೆ..? ಮುಂದೆ ನೋಡಿ

<ul id="pagination-digg"><li class="next"><a href="/gossips/07-non-kannada-film-release-dubbing-artists-kfcc-rules-aid0039.html">Next »</a></li></ul>

More from Filmibeat

English summary
Non-Kannada movie are violating rules of KFCC. It is in turn affecting low budget Kannada movies. KFCC is in turn supporting many producers and distributors in Kannada Film Industry to release more non Kannada films release there by breaking all rules and regulations.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X