»   » ‘ಶಿವಾಜಿ’ಗೆ ತಡೆ : ರಜನಿ ಅಭಿಮಾನಿಗಳಿಗೆ ತೀವ್ರ ನಿರಾಸೆ

‘ಶಿವಾಜಿ’ಗೆ ತಡೆ : ರಜನಿ ಅಭಿಮಾನಿಗಳಿಗೆ ತೀವ್ರ ನಿರಾಸೆ

Subscribe to Filmibeat Kannada


ಬೆಂಗಳೂರು : ಕಾವೇರಿ ವಿವಾದದ ಹಿನ್ನೆಲೆಯಲ್ಲಿ ರಜನಿಕಾಂತ್‌ ಅಭಿನಯದ ತಮಿಳು ಚಿತ್ರ ‘ಶಿವಾಜಿ’ ಬಿಡುಗಡೆಗೆ ವಿರೋಧ ವ್ಯಕ್ತವಾಗಿದೆ.

ಶುಕ್ರವಾರ ಚಿತ್ರಪ್ರದರ್ಶನಕ್ಕೆ ಸಿದ್ಧತೆಗಳು ನಡೆದಿವೆ. ಆದರೆ ಯಾವುದೇ ಕಾರಣಕ್ಕೂ ‘ಶಿವಾಜಿ’ ಪ್ರದರ್ಶನಗೊಳ್ಳಲು ಅವಕಾಶ ನೀಡುವುದಿಲ್ಲ . ಹೀಗಾಗಿ ಪ್ರದರ್ಶನ ಮಾಡುವ ಪ್ರಯತ್ನವನ್ನು ಕೈಬಿಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸಲಹೆ ನೀಡಿದೆ.

ಕಾವೇರಿ ನ್ಯಾಯಮಂಡಳಿ ತೀರ್ಪಿನಿಂದ ಕನ್ನಡಿಗರಿಗೆ ಅನ್ಯಾಯವಾಗಿದೆ. ನ್ಯಾಯ ಸಿಗುವ ತನಕ, ಹೋರಾಟ ನಿಲ್ಲಿಸುವುದಿಲ್ಲ. ತಮಿಳು ಚಿತ್ರಗಳ ಪ್ರದರ್ಶನಕ್ಕೆ ಅವಕಾಶ ನೀಡುವುದಿಲ್ಲ ಎಂದು ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಹೇಳಿದ್ದಾರೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಗಂಗರಾಜು, ಚಿತ್ರ ವಿತರಣೆಯ ಹೊಣೆ ಹೊತ್ತಿದ್ದಾರೆ.

(ದಟ್ಸ್‌ ಕನ್ನಡ ವಾರ್ತೆ)

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada