»   » ಚಲನಚಿತ್ರ ವಾಣಿಜ್ಯ ಮಂಡಳಿ ಕಾರ್ಯಕಾರಿ ಸಮಿತಿ ಸದಸ್ಯರ ರಾಜೀನಾಮೆ

ಚಲನಚಿತ್ರ ವಾಣಿಜ್ಯ ಮಂಡಳಿ ಕಾರ್ಯಕಾರಿ ಸಮಿತಿ ಸದಸ್ಯರ ರಾಜೀನಾಮೆ

Subscribe to Filmibeat Kannada

ಬೆಂಗಳೂರು : ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರು ಮಂಗಳವಾರ ರಾಜೀನಾಮೆ ನೀಡಿದ್ದಾರೆ. ಈ ಬೆಳವಣಿಗೆಯಿಂದ ಕನ್ನಡ ಚಿತ್ರೋದ್ಯಮದಲ್ಲಿನ ಬಿಕ್ಕಟ್ಟು ಹೊಸ ರೂಪ ಪಡೆದಿದೆ.

ಏಳು ವಾರಗಳ ನಂತರ ಪರಭಾಷಾ ಚಿತ್ರಗಳನ್ನು ರಾಜ್ಯದಲ್ಲಿ ಪ್ರದರ್ಶಿಸುವ ನೀತಿಯನ್ನು ಚಿತ್ರಮಂದಿರಗಳು ಗಾಳಿಗೆ ತೂರಿವೆ. ಇದನ್ನು ತಪ್ಪಿಸುವಲ್ಲಿ ವಾಣಿಜ್ಯ ಮಂಡಳಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಅರೋಪಿಸಿ ಸದಸ್ಯರು ಸಾಮೂಹಿಕವಾಗಿ ರಾಜೀನಾಮೆ ಸಲ್ಲಿಸಿದ್ದಾರೆ.

ನಗರದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿರ್ದೇಶಕ ಎಸ್‌.ವಿ.ರಾಜೇಂದ್ರ ಸಿಂಗ್‌ ಬಾಬು, ನಿರ್ಮಾಪಕರ ಸಂಘದ ಅಧ್ಯಕ್ಷ ಬಸಂತ್‌ ಕುಮಾರ್‌ ಪಾಟೀಲ್‌, ಜಗ್ಗೇಶ್‌ ಮತ್ತಿತರರು ಕರ್ನಾಟಕ ಚಲನಚಿತ್ರ ಪ್ರದರ್ಶಕರ ಮಹಾ ಮಂಡಳದ ಅಧ್ಯಕ್ಷ ಓದುಗೌಡರ ರಾಜೀನಾಮೆಗೆ ಒತ್ತಾಯಿಸಿದರು.

ಕನ್ನಡ ಸಂಸ್ಕೃತಿಯ ಉಳಿವಿಗಾಗಿ ಎಂತಹ ಹೋರಾಟಕ್ಕೂ ಸಿದ್ಧ. ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಭಾರತೀಯ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ದಕ್ಷಿಣ ಭಾರತ ಚಲನಚಿತ್ರ ವಾಣಿಜ್ಯ ಮಂಡಳಿಯಾಂದಿಗೆ ಚರ್ಚೆಗೆ ಪ್ರಯತ್ನಗಳು ನಡೆದಿದ್ದವು. ಮಾತುಕತೆ ಮೂಲಕ ಸೌಹಾರ್ದಯುತವಾಗಿ ಸಮಸ್ಯೆ ಬಗೆಹರಿಯುವ ಸಾಧ್ಯತೆಗಳಿದ್ದವು. ಆದರೆ ಈ ನಡುವೆ ಚಿತ್ರಮಂದಿರಗಳು ಪರಭಾಷಾ ಚಿತ್ರಗಳನ್ನು ಪ್ರದರ್ಶಿಸಿ, ಹಿಂಸೆ ಹಾಗೂ ಗೊಂದಲಕ್ಕೆ ದಾರಿ ಮಾಡಿವೆ. ಕರ್ನಾಟಕ ಚಲನ ಚಿತ್ರ ವಾಣಿಜ್ಯ ಮಂಡಳಿ ನಿಷ್ಕಿೃಯ ವಾಗಿದೆ ಎಂದು ಆರೋಪಿಸಿದರು.

ಪತ್ರಕರ್ತರು ಹಾಗೂ ಕನ್ನಡಪರ ಚಳುವಳಿಗಾರರ ಮೇಲೆ ಹಲ್ಲೆ ನಡೆಸಿದ ಪ್ರಕರಣವನ್ನು ಸಿಓಡಿ ತನಿಖೆಗೆ ಒಪ್ಪಿಸಬೇಕು. ಹಲ್ಲೆಗೆ ಕಾರಣರಾದ ಚಿತ್ರಮಂದಿರಗಳ ಮಾಲೀಕರ ಮೇಲೆ ಕ್ರಮ ಜರುಗಿಸುವುದರೊಂದಿಗೆ, ಚಿತ್ರಮಂದಿರಗಳನ್ನು ಮುಚ್ಚಿಸಬೇಕು ಎಂದು ಸರಕಾರವನ್ನು ರಾಜೇಂದ್ರ ಸಿಂಗ್‌ ಬಾಬು ಒತ್ತಾಯಿಸಿದರು.

ನಿರ್ಮಾಪಕರ ಸಂಘದ ಅಧ್ಯಕ್ಷ ಬಸಂತ್‌ ಕುಮಾರ್‌ ಸರಕಾರದ ಉನ್ನತ ಸಮಿತಿಯ ಅಧ್ಯಕ್ಷ ಕೆ.ಪಿ.ಪಾಂಡೆಯವರಿಗೆ ಪತ್ರ ಬರೆದಿದ್ದು, ಕನ್ನಡ ಚಿತ್ರೋದ್ಯಮದ ಉಳಿವಿಗಾಗಿ ಸೂಕ್ತ ನಿರ್ದೇಶವನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನೀಡಬೇಕೆಂದು ಆಗ್ರಹಿಸಿದ್ದಾರೆ.

(ಪಿಟಿಐ)

Post your views

ಮುಖಪುಟ / ಸ್ಯಾಂಡಲ್‌ವುಡ್‌

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada