Just In
- 33 min ago
ಪ್ರಶಾಂತ್ ನೀಲ್ 'ಸಲಾರ್' ಸಿನಿಮಾಗೆ ನಾಯಕಿ ಫಿಕ್ಸ್; ಪ್ರಭಾಸ್ ಜೊತೆ ಶ್ರುತಿ ಹಾಸನ್ ರೊಮ್ಯಾನ್ಸ್
- 34 min ago
ಆರ್ಆರ್ಆರ್, ಅಣ್ಣಾತ್ತೆ ಬಳಿಕ ಪುಷ್ಪ ಚಿತ್ರದ ಬಿಡುಗಡೆ ದಿನಾಂಕವೂ ಘೋಷಣೆ
- 2 hrs ago
ಬಾಯ್ ಫ್ರೆಂಡ್ ನನ್ನು ತಬ್ಬಿಕೊಂಡಿದ್ದಾರಾ ಕತ್ರಿನಾ ಕೈಫ್; ಇದು ಆ ಸ್ಟಾರ್ ನಟನೇ ಎನ್ನುತ್ತಿದ್ದಾರೆ ನೆಟ್ಟಿಗರು
- 3 hrs ago
ತಮನ್ನಾ ಮತ್ತು ವಿರಾಟ್ ಕೊಹ್ಲಿಗೆ ಕೇರಳ ಹೈಕೋರ್ಟ್ ನೋಟಿಸ್
Don't Miss!
- Education
Indian Postal Circle Recruitment 2021: 3679 ಗ್ರಾಮೀಣ ದಖ್ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ
- Finance
ಸಂಸತ್ ಕ್ಯಾಂಟೀನ್ ಸಸ್ತಾ ಆಹಾರಗಳು ಇನ್ನು ಮುಂದೆ ದುಬಾರಿ
- News
ಮುಂಬೈ ಅನ್ನು ಕರ್ನಾಟಕಕ್ಕೆ ಸೇರಿಸಿ: ಉದ್ಧವ್ ಠಾಕ್ರೆಗೆ ಲಕ್ಷ್ಮಣ ಸವದಿ ತಿರುಗೇಟು
- Sports
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ ಇಂದು ಮತ್ತೊಂದು ಚಿಕಿತ್ಸೆ
- Automobiles
ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಮೊದಲ ಬಾರಿಗೆ ಪ್ರದರ್ಶನಗೊಂಡ ಟಾಟಾ ನೆಕ್ಸಾನ್ ಇವಿ
- Lifestyle
ಕರ್ನಾಟಕ ಶೈಲಿಯ ಅವರೆಕಾಳು ಚಿತ್ರಾನ್ನ ನಿಮಗಾಗಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಕಾಫಿ ಶಾಪ್ ಚಿತ್ರದ ವಿರುದ್ಧ ಏ.20ರಂದು ಬೃಹತ್ ಪ್ರತಿಭಟನೆ
ಕಳೆದ ಕೆಲ ತಿಂಗಳಿಂದತಣ್ಣಗಿದ್ದ ಡಬ್ಬಿಂಗ್ ವಿವಾದ ಈಗ ಮತ್ತೆ ಭುಗಿಲೆದ್ದಿದೆ. ಪರಭಾಷಾ ಚಿತ್ರಗಳನ್ನು ಕನ್ನಡಕ್ಕೆ ಡಬ್ ಮಾಡುವ ಸಂಸ್ಕೃತಿ ವಿರುದ್ಧ ಚಲನಚಿತ್ರ ಕಾರ್ಮಿಕರ, ಕಲಾವಿದರ ಹಾಗೂ ತಂತ್ರಜ್ಞರ ಒಕ್ಕೂಟ(ಕಚಕಾಂತಕ) ತಿರುಗಿ ಬಿದ್ದಿದೆ. ಯಾವುದೇ ಕಾರಣಕ್ಕೂ ಡಬ್ಬಿಂಗ್‌ಗೆ ಅವಕಾಶ ಕೊಡುವುದಿಲ್ಲ ಎಂದು ಕಚಕಾಂತಕ ಒಕ್ಕೂಟ ಅಧ್ಯಕ್ಷ ಅಶೋಕ್ ಗುಡುಗಿದ್ದಾರೆ.
ಕಳೆದ 50 ವರ್ಷಗಳಿಂದ ಕನ್ನಡ ಚಿತ್ರರಂಗ ಡಬ್ಬಿಂಗ್ ಪಿಡುಗಿಲ್ಲದೆ ಇತ್ತು. ಆದರೆ ಈಗ 'ಕಾಫಿ ಶಾಪ್' ಚಿತ್ರ ಕನ್ನಡಕ್ಕೆ ಡಬ್ ಮಾಡಲಾಗಿದೆ. ಈ ಚಿತ್ರದ ವಿರುದ್ಧ ವ್ಯಾಪಕ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಈ ಚಿತ್ರವನ್ನು ಯಾವುದೇ ಕಾರಣಕ್ಕೂ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವುದಿಲ್ಲ ಎಂದು ಅಶೋಕ್ ಇಂದು(ಏ.18) ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಡಬ್ಬಿಂಗ್ ವಿರೋಧಿಸಿ ಏ.20ರಂದು ಬೆಳಗ್ಗೆ 10 ಗಂಟೆಗೆ ಚಲನಚಿತ್ರ ವಾಣಿಕ್ಯ ಮಂಡಳಿ ಎದುರು ಬೃಹತ್ ಪ್ರತಿಭಟನೆ ನಡೆಯಲಿದೆ. ರೈತ ಚಳವಳಿ ಮುಖಂಡರು, ಸಾಹಿತಿಗಳು, ಕನ್ನಡಪರ ಹೋರಾಟಗಾರರು, ಕಲಾವಿದರ ಸಂಘದ ಅಧ್ಯಕ್ಷ ಅಂಬರೀಷ್, ಶಿವರಾಜ್ ಕುಮಾರ್ ಸೇರಿದಂತೆ ಕನ್ನಡ ಚಿತ್ರರಂಗದ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಅಶೋಕ್ ವಿವರ ನೀಡಿದರು.
'ಕಾಫಿ ಶಾಪ್' ಚಿತ್ರ ಏ.22ರಂದು ಬಿಡುಗಡೆ ಮಾಡಲು ಉದ್ದೇಶಿಸಲಾಗಿದೆ. ಚಿತ್ರಮಂದಿರಗಳ ಮಾಲೀಕರು ಹಾಗೂ ಮಲ್ಟಿಫ್ಲೆಕ್ಸ್ ಮಾಲೀಕರಿಗೆ ಮನವಿ ಮಾಡಿ ಚಿತ್ರವನ್ನು ಬಿಡುಗಡೆ ಮಾಡದಂತೆ ಕೋರಲಾಗುವುದು. ಒಂದು ವೇಳೆ ಚಿತ್ರವನ್ನು ಬಿಡುಗಡೆ ಮಾಡಿದರೆ ಮುಂದೆ ಆಗಬಹುದಾದ ಅನಾಹುತಗಳಿಗೆ ನೀವೇ ಕಾರಣರು ಎಂದು ಎಚ್ಚರಿಸಿದ್ದಾರೆ.
ಡಬ್ಬಿಂಗ್ ಸಂಸ್ಕೃತಿ ವಿರುದ್ಧ ಈಗಾಗಲೆ ಹಿರಿಯ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಬೀದಿಗಿಳಿಯುವುದಾಗಿ ಎಚ್ಚರಿಸಿದ್ದರು. ಅವರ ಆರೋಗ್ಯ ಸರಿಇಲ್ಲದ ಕಾರಣ ಅವರು ಪ್ರತಿಭಟನೆಯಲ್ಲಿ ಭಾಗವಹಿಸುತ್ತಿಲ್ಲ. ಚಲನಚಿತ್ರ ಕಾರ್ಮಿಕರು, ಕಲಾವಿದರು, ತಂತ್ರಜ್ಞರು, ವಿತರಕರು, ನಿರ್ಮಾಪಕರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
'ಕಾಫಿ ಶಾಪ್' ಚಿತ್ರದ ನಿರ್ದೇಶಕ ಗೀತಾಕೃಷ್ಣ ನ್ಯಾಯಾಲಯಕ್ಕೆ ಸುಳ್ಳು ಪ್ರಮಾಣ ಪತ್ರ ನೀಡಿ ಡಬ್ಬಿಂಗ್ ಚಿತ್ರವಲ್ಲವೆಂದು ಪ್ರಮಾಣ ಪತ್ರ ಸಲ್ಲಿಸಿದ್ದಾರೆ. ಅದೇ ರೀತಿ ಸರ್ಕಾರದಿಂದ ಶೇ.100ರಷ್ಟು ತೆರಿಗೆ ವಿನಾಯ್ತಿ ಪಡೆದಿದ್ದಾರೆ ಎಂದು ಆರೋಪಿಸಿದ ಅವರು, ತೆರಿಗೆ ವಿನಾಯಿತಿ ಹಿಂಪಡೆಯುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದರು.
ಕೆಲವು ಹಣದಾಹಿಗಳು ಡಬ್ಬಿಂಗ್ ಸಂಸ್ಕೃತಿಯನ್ನು ನಮ್ಮ ಮೇಲೆ ಹೇರಿ ನಮ್ಮ ಉದ್ಯೋಗ, ನೆಮ್ಮದಿ, ಭಾಷೆ, ಸಂಸ್ಕೃತಿಯನ್ನು ನಾಶ ಮಾಡಲು ಹೊರಟಿದ್ದಾರೆ. ಇಂತಹ ಪ್ರಯತ್ನಕ್ಕೆ ಅವಕಾಶ ಮಾಡಿಕೊಡದೆ ಇದರ ವಿರುದ್ಧ ಚಲನಚಿತ್ರ ವಾಣಿಜ್ಯ ಮಂಡಳಿ ಸೂಕ್ತ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಆದರೆ ತನ್ನ ಕಾಫಿ ಶಾಪ್ ಚಿತ್ರ ಡಬ್ಬಿಂಗ್ ಚಿತ್ರ ಅಲ್ಲ ಎಂದು ಗೀತಾ ಈಗಾಗಲೆ ಕೃಷ್ಣ ಸ್ಪಷ್ಟಪಡಿಸಿದ್ದಾರೆ.