Don't Miss!
- Sports
ಬಾರ್ಡರ್-ಗವಾಸ್ಕರ್ ಟ್ರೋಫಿ: ರೋಹಿತ್ ಬಳಗದ ಅಭ್ಯಾಸಕ್ಕೆ ಭಾನುವಾರ ರಜೆ ನೀಡಿದ ಕೋಚ್ ದ್ರಾವಿಡ್
- Lifestyle
Horoscope Today 6 Feb 2023: ಸೋಮವಾರ : ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- News
ರಾಜ್ಯ ರಾಜಕೀಯದ ಮುಂದಿನ ರಹಸ್ಯವೊಂದನ್ನು ಬೇಧಿಸಿದ ಎಚ್ಡಿಕೆ
- Finance
ಆಧಾರ್ ಕಾರ್ಡ್ ಸಂಖ್ಯೆಯಿಂದ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಪರಿಶೀಲಿಸಿ, ಹೇಗೆ ಇಲ್ಲಿ ತಿಳಿಯಿರಿ
- Automobiles
ಹೆಚ್ಚಿನ ಮೈಲೇಜ್ ನೀಡುವ ಬಹುನಿರೀಕ್ಷಿತ ಟಾಟಾ ಆಲ್ಟ್ರೊಜ್ iCNG ಕಾರಿನ ವಿಶೇಷತೆಗಳು...
- Technology
ಇನ್ಮುಂದೆ ಟ್ವಿಟ್ಟರ್ನಲ್ಲೂ ಹಣ ಗಳಿಸಬಹುದು; ಮಸ್ಕ್ರ ಹೊಸ ನಿರ್ಧಾರ ಏನು!?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಪ್ರಭಾಸ್ ಸಿನಿಮಾದಲ್ಲಿ ಸಾಯಿ ಪಲ್ಲವಿ: ಪುಷ್ಪ ಡೈರೆಕ್ಟರ್ ಸುಕುಮಾರ್ ಡೈರೆಕ್ಷನ್ ಅಂತೆ!
ಪ್ಯಾನ್ ಇಂಡಿಯಾ ಸೂಪರ್‌ಸ್ಟಾರ್ ಪ್ರಭಾಸ್‌ಗೆ ಒಂದು ಬ್ಲಾಕ್ ಬಸ್ಟರ್ ಸಿನಿಮಾ ಬೇಕಿದೆ. ಅವರ ಡೈ ಹಾರ್ಡ್ ಫ್ಯಾನ್ಸ್ ಕೂಡ ಅಂತಹದ್ದೊಂದು ಸಿನಿಮಾ ನೋಡುವುದಕ್ಕೆ ತುದಿಗಾಲಲ್ಲಿ ನಿಂತಿದ್ದಾರೆ. ಯಾರಾದ್ರೂ ಒಬ್ಬ ಸ್ಟಾರ್ ಡೈರೆಕ್ಟರ್ ಸಿನಿಮಾ ಒಪ್ಪಿಕೊಳ್ಳಬಾರದ ಅಂತ ಕನವರಿಸುತ್ತಿದ್ದಾರೆ. ಈ ಮಧ್ಯೆನೇ ಒಂದು ಗಾಳಿ ಸುದ್ದಿ ಟಾಲಿವುಡ್‌ನಲ್ಲಿ ಹರಿದಾಡುತ್ತಿದೆ.
'ಪುಷ್ಪ' ಸಿನಿಮಾ ನಿರ್ದೇಶಕ ಸುಕುಮಾರ್ ಪ್ರಭಾಸ್‌ಗೆ ಆಕ್ಷನ್ ಕಟ್ ಹೇಳುತ್ತಾರೆ. 'ಪುಷ್ಪ 2' ಮುಗಿಯುತ್ತಿದ್ದಂತೆ ಪ್ರಭಾಸ್ ಸಿನಿಮಾ ಶುರು ಅನ್ನೋ ಮ್ಯಾಟರ್ ಟಾಲಿವುಡ್‌ನಲ್ಲಿ ಬಿಸಿ ಬಿಸಿ ಚರ್ಚೆಗೆ ಗ್ರಾಸವಾಗಿದೆ.
ಸಾಲದಲ್ಲಿ
ಮುಳುಗಿದ್ದ
ಪ್ರಭಾಸ್:
ಬಾಲಯ್ಯನ
ಮುಂದೆ
ಗುಟ್ಟು
ರಟ್ಟು
ಅಷ್ಟಕ್ಕೂ ಪ್ರಭಾಸ್ ಸಿನಿಮಾ ಸುಕುಮಾರ್ ಆಕ್ಷನ್ ಕಟ್ ಹೇಳುತ್ತಿರೋದು ನಿಜವೇ? ಪ್ರಭಾಸ್ ಜೊತೆ ಸಾಯಿ ಪಲ್ಲವಿ ರೊಮ್ಯಾನ್ಸ್ ಮಾಡುತ್ತಾರಾ? ಇಂತಹದ್ದೇ ಒಂದಿಷ್ಟು ಸುದ್ದಿ ಟಾಲಿವುಡ್‌ನಲ್ಲಿ ಹರಿದಾಡುತ್ತಿದೆ. ಆ ಬಗ್ಗೆ ಒಂದಿಷ್ಟು ಡಿಟೈಲ್ಸ್ ಇಲ್ಲಿದೆ.

ಪ್ರಭಾಸ್ ಹಾಗೂ ಸುಕುಮಾರ್ ಸಿನಿಮಾ
ಟಾಲಿವುಡ್ ಮೂಲಗಳ ಪ್ರಕಾರ, 'ಪುಷ್ಪ 2' ಸಿನಿಮಾ ಮುಗಿಯುತ್ತಿದ್ದಂತೆ ಸುಕುಮಾರ್ ಹೊಸ ಸಿನಿಮಾಗೆ ಕೈ ಹಾಕುತ್ತಿದ್ದಾರೆ. ಪ್ಯಾನ್ ಇಂಡಿಯಾ ಸೂಪರ್ ಸ್ಟಾರ್ ಪ್ರಭಾಸ್‌ಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ ಅನ್ನೋ ಸುದ್ದಿ ಬಲವಾಗಿಯೇ ಓಡಾಡುತ್ತಿದೆ. ಎಲ್ಲಕ್ಕಿಂತ ಹೆಚ್ಚಾಗಿ ಇದೊಂದು ಗ್ಯಾಂಗ್‌ಸ್ಟರ್ ಸಿನಿಮಾ ಆಗಿದ್ದು, ಸಿನಿಮಾಗೆ ಭವಾನಿ ಅಂತಲೂ ಹೆಸರಿಡಲಾಗಿದೆ ಎನ್ನಲಾಗುತ್ತಿದೆ. ಮತ್ತೊಮ್ಮೆ ಸುಕುಮಾರ್ ರಗಡ್ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಅನ್ನೋ ಮಾತು ಕೇಳಿ ಬರುತ್ತಿದೆ.

ಪ್ರಭಾಸ್‌ಗೆ ಸಾಯಿ ಪಲ್ಲವಿ ಜೋಡಿ
ಗ್ಯಾಂಗ್‌ಸ್ಟರ್ ಸಿನಿಮಾದಲ್ಲಿ ಇದೇ ಮೊದಲಬಾರಿಗೆ ಸುಕುಮಾರ್ ಜೊತೆ ಪ್ರಭಾಸ್ ಕೈ ಜೋಡಿಸಿದ್ದಾರೆ ಎನ್ನಲಾಗಿದೆ. ಈ ಸಿನಿಮಾ ಕಥೆ ಆಂಧ್ರದ ರಾಯಲಸೀಮಾದಲ್ಲಿ ನಡೆಯಲಿದ್ಯಂತೆ. ವಿಶೇಷ ಅಂದ್ರೆ, ದಕ್ಷಿಣ ಭಾರತದ ಟ್ಯಾಲೆಂಟೆಡ್ ನಟಿ ಸಾಯಿ ಪಲ್ಲವಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಪ್ರಭಾಸ್‌ಗೆ ಹೀರೊಯಿನ್ ಆಗಿ ನಟಿಸುವುದಕ್ಕೆ ಗ್ರೀನ್ ಸಿಗ್ನಲ್ ಕೂಡ ಕೊಟ್ಟಿದ್ದಾರೆ ಅನ್ನೋ ಮಾತು ಕೇಳಿಬರುತ್ತಿದೆ. ಆದರೆ, ಈ ಬಗ್ಗೆ ಪ್ರಭಾಸ್ ಹಾಗೂ ಸುಕುಮಾರ್ ಅಧಿಕೃತವಾಗಿ ಎಲ್ಲೂ ಹೇಳಿಕೊಂಡಿಲ್ಲ.

ಕಾಶ್ಮೀರ್ ಫೈಲ್ಸ್ ನಿರ್ಮಾಪಕ ಹೇಳಿದ್ದೇನು?
ಪ್ರಭಾಸ್ ಹಾಗೂ ಸುಕುಮಾರ್ ಕಾಂಬಿನೇಷನ್ ಸಿನಿಮಾ ಬಗ್ಗೆ ಸುದ್ದಿ ಹರಡುತ್ತಿದ್ದಂತೆ ಮತ್ತೊಂದು ಹೆಸರು ಕೇಳಿ ಬಂದಿತ್ತು. 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾದ ನಿರ್ಮಾಪಕ ಅಭಿಷೇಕ್ ಅಗರ್ವಾಲ್ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ ಎನ್ನಲಾಗಿತ್ತು. ಆದರೆ, ನಾನು ಯಾವುದೇ ಹೊಸ ಸಿನಿಮಾವನ್ನು ನಿರ್ಮಾಣ ಮಾಡುತ್ತಿಲ್ಲವೆಂದು ಅಭಿಷೇಕ್ ಅಗರ್ವಾಲ್ ಬಹಿರಂಗ ಪತ್ರ ಬರೆದಿದ್ದಾರೆ. ಹಾಗಂತ ಬೇರೆ ನಿರ್ಮಾಪಕರ ಈ ಸಿನಿಮಾವನ್ನು ಮಾಡುತ್ತಿರುವುದನ್ನೂ ತಳ್ಳಿ ಹಾಕುವಂತಿಲ್ಲ.

ಪ್ರಭಾಸ್ ಕೈಯಲ್ಲಿ ಬಿಗ್ ಸಿನಿಮಾ
ಪ್ರಭಾಸ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಮಾಡುತ್ತಲೇ ಇದ್ದಾರೆ. ಆ ಸಿನಿಮಾಗಳು ಅದ್ಧೂರಿಯಾಗಿ ನಿರ್ಮಾಣ ಆಗುತ್ತಲೇ ಇದೆ. ಸದ್ಯ 'ಆದಿಪುರುಷ್' ಸಿನಿಮಾ ರಿಲೀಸ್ ಆಗಬೇಕಿದೆ. ಆದರೆ, ಗ್ರಾಫಿಕ್ಸ್ ವಿಚಾರವಾಗಿ ಈಗಾಗಲೇ ಟೀಕೆಗೆ ಗುರಿಯಾಗಿದೆ. ಇನ್ನೊಂದು ಕಡೆ ಪ್ರಶಾಂತ್ ನೀಲ್ ನಿರ್ದೇಶನದ 'ಸಲಾರ್' ಸಿನಿಮಾ ಮೇಲೆ ಎಲ್ಲರ ಕಣ್ಣು ಇದೆ. ಈ ಎರಡೂ ಸಿನಿಮಾಗಳೂ ಇದೇ ವರ್ಷ ರಿಲೀಸ್ ಆಗುತ್ತಿದೆ. ಇನ್ನುಳಿದಂತೆ ನಾಗ ಅಶ್ವಿನ್ ನಿರ್ದೇಶನದ ಸಿನಿಮಾ ಹಾಗೂ ಮಾರುತಿ ನಿರ್ದೇಶನದ ಸಿನಿಮಾದಲ್ಲೂ ನಟಿಸುತ್ತಿದ್ದಾರೆ.