ಕರೀನಾ ಕಪೂರ್, ನಯನತಾರಾ ಅಲ್ಲ, 'ಟಾಕ್ಸಿಕ್' ಚಿತ್ರದಲ್ಲಿ ಯಶ್ ಪಕ್ಕ ಐಶ್ವರ್ಯಾ ರೈ?

ಸೆಟ್ಟೇರುವುದಕ್ಕು ಮುನ್ನ 'ಟಾಕ್ಸಿಕ್' ಸಿನಿಮಾ ಸಖತ್ ಸದ್ದು ಮಾಡ್ತಿದೆ. ಶೀಘ್ರದಲ್ಲೇ ಚಿತ್ರದ ಬಗ್ಗೆ ಬಿಗ್ ಅಪ್‌ಡೇಟ್ ಸಿಗುವ ಸೂಚನೆ ಸಿಕ್ಕಿದೆ. ಈಗಾಗಲೇ ಬೆಂಗಳೂರಿನಲ್ಲಿ ಸೆಟ್ ಹಾಕಿ ಚಿತ್ರದ ಚಿತ್ರೀಕರಣ ಶುರು ಮಾಡಿದ್ದಾರೆ ಎನ್ನಲಾಗ್ತಿದೆ. ಇನ್ನು 'ಟಾಕ್ಸಿಕ್' ಸ್ಟಾರ್‌ಕಾಸ್ಟ್ ಬಗ್ಗೆ ಕೂಡ ದಿನಕ್ಕೊಂದು ಸುದ್ದಿ ವೈರಲ್ ಆಗುತ್ತಿದೆ.

ಗೀತು ಮೋಹನ್ ದಾಸ್ ನಿರ್ದೇಶನದ 'ಟಾಕ್ಸಿಕ್' ಚಿತ್ರವನ್ನು ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆ ನಿರ್ಮಾಣ ಮಾಡುತ್ತಿದೆ. ಯಶ್ ಕೂಡ ಜಂಟಿಯಾಗಿ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಬಹುಕೋಟಿ ವೆಚ್ಚದಲ್ಲಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ. ಮುಂದಿನ ವರ್ಷ ಏಪ್ರಿಲ್ 10ಕ್ಕೆ ಸಿನಿಮಾ ತೆರೆಗಪ್ಪಳಿಸಲಿದೆ. ಇನ್ನು ಚಿತ್ರದಲ್ಲಿ ಯಶ್ ಸಹೋದರಿ ಪಾತ್ರದಲ್ಲಿ ಯಾರು ನಟಿಸುತ್ತಾರೆ? ಎನ್ನುವ ಬಗ್ಗೆ ಭಾರೀ ಚರ್ಚೆ ನಡೀತಿದೆ.

Aishwarya Rai was first choice to play as Yash Sister Role in Toxic Film

ಯಶ್ ಜೊತೆ ಕರೀನಾ ಕಪೂರ್ ನಟಿಸುತ್ತಾರೆ ಎಂದು ಇತ್ತೀಚೆಗೆ ಸುದ್ದಿಯಾಗಿತ್ತು. ಯಶ್ ಸಹೋದರಿ ಪಾತ್ರದಲ್ಲಿ ಆಕೆ ಕಾಣಿಸಿಕೊಳ್ಳುತ್ತಾರೆ ಎನ್ನಲಾಗಿತ್ತು. ಬೆಬೋ ಕೂಡ ಸೌತ್ ಸಿನಿಮಾದಲ್ಲಿ ನಟಿಸುವ ಬಗ್ಗೆ ಸುಳಿವು ನೀಡಿದ್ದರು. 'ಟಾಕ್ಸಿಕ್' ಚಿತ್ರದಲ್ಲಿ ಸಹೋದರ-ಸಹೋದರಿ ಕಥೆ ಇದೆ. ಸಹೋದರಿ ಪಾತ್ರಕ್ಕೆ ಕರೀನಾ ಕಪೂರ್ ಆಯ್ಕೆ ಆಗಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿತ್ತು. ಆದರೆ ಚಿತ್ರತಂಡ ಮಾತ್ರ ಈ ಬಗ್ಗೆ ಪ್ರತಿಕ್ರಿಯಿಸಲಿಲ್ಲ.

ಕರೀನಾ ಕಪೂರ್ 'ಟಾಕ್ಸಿಕ್' ಚಿತ್ರದಿಂದ ಹೊರ ಬಂದಿದ್ದಾರೆ ಎನ್ನುವ ಗುಸುಗುಸು ಕಳೆದ ಮೂರ್ನಾಲ್ಕು ದಿನಗಳಿಂದ ಕೇಳಿಬರ್ತಿದೆ. ಕರೀನಾ ಬದಲು ಲೇಡಿ ಸೂಪರ್ ಸ್ಟಾರ್ ನಯನತಾರಾ ಆ ಪಾತ್ರ ಮಾಡುತ್ತಾರೆ ಎನ್ನುವ ಊಹಾಪೋಹ ಶುರುವಾಗಿದೆ. ಯಶ್ ಡೇಟ್ಸ್ ಜೊತೆಗೆ ಕರೀನಾ ತಮ್ಮ ಡೇಟ್ಸ್ ಹೊಂದಾಣಿಕೆ ಮಾಡಲು ಸಾಧ್ಯವಾಗದ ಕಾರಣ 'ಟಾಕ್ಸಿಕ್' ಚಿತ್ರಕ್ಕೆ ನೋ ಎಂದಿದ್ದಾರೆ ಎಂದು ವರದಿಯಾಗಿತ್ತು.

Aishwarya Rai was first choice to play as Yash Sister Role in Toxic Film

'ಟಾಕ್ಸಿಕ್' ಚಿತ್ರದಲ್ಲಿ ಯಶ್ ಸಹೋದರಿ ಪಾತ್ರಕ್ಕೆ ಮೊದಲ ಆಯ್ಕೆ ಐಶ್ವರ್ಯ ರೈ ಆಗಿದ್ದರಂತೆ. ಕರಾವಳಿ ಮೂಲದ ಐಶ್ವರ್ಯ ರೈ ಯಾವುದೇ ಕನ್ನಡ ಚಿತ್ರದಲ್ಲಿ ಕೂಡ ನಟಿಸಿಲ್ಲ. ಈ ಹಿಂದೆ ಕೂಡ ಆಕೆಯನ್ನು ಸ್ಯಾಂಡಲ್‌ವುಡ್‌ಗೆ ಕರ್ಕೊಂಡ್ ಬರುವ ಪ್ರಯತ್ನಗಳು ನಡೆದಿತ್ತು. ಆದರೆ ಯಾರೂ ಕೂಡ ಸಫಲರಾಗಿರಲಿಲ್ಲ. 'H20', 'ಸೂಪರ್' ಸಿನಿಮಾಗಳಿಗೆ ಮಾಜಿ ವಿಶ್ವಸುಂದರಿ ಹೆಸರು ಕೇಳಿಬಂದಿತ್ತು. ಆದರೆ ಅದು ನಿಜವಾಗಲಿಲ್ಲ.

ವರದಿಗಳ ಪ್ರಕಾರ 'ಟಾಕ್ಸಿಕ್' ಚಿತ್ರಕ್ಕಾಗಿ ಚಿತ್ರತಂಡ ಐಶ್ವರ್ಯ ರೈ ಅವರನ್ನು ಸಂಪರ್ಕಿಸಿತ್ತಂತೆ. ಆಕೆ ಕೂಡ ಯೋಚಿಸುವುದಾಗಿ ಹೇಳಿದ್ದರಂತೆ. ಆದರೆ ಆಕೆ ಮತ್ತೆ ಪ್ರತಿಕ್ರಿಯಿಸಲಿಲ್ಲ ಎನ್ನಲಾಗ್ತಿದೆ. ಇನ್ನು 'ಟಾಕ್ಸಿಕ್' ಚಿತ್ರದಿಂದ ಕರೀನಾ ಹೊರಬರಲು ಡೇಟ್ಸ್ ಕಾರಣ ಅಲ್ಲ ಎನ್ನಲಾಗ್ತಿದೆ. ಕೈರಾ ಅದ್ವಾನಿ, ಶ್ರುತಿ ಹಾಸನ್ ಚಿತ್ರದಲ್ಲಿ ನಟಿಸುತ್ತಾರೆ ಎನ್ನಲಾಗ್ತಿದೆ. ಹಾಗಾಗಿ ತಮ್ಮ ಪಾತ್ರಕ್ಕೆ ಹೆಚ್ಚಿನ ಮಹತ್ವ ಇರಲ್ಲ ಎನ್ನುವ ಕಾರಣಕ್ಕೆ ಆಕೆ ಹೊರಬಂದಿದ್ದಾರೆ ಎನ್ನುವ ಊಹಾಪೋಹ ಶುರುವಾಗಿದೆ.

ನಯನತಾರಾ 'ಟಾಕ್ಸಿಕ್' ಸಿನಿಮಾ ಕಥೆ ಮೆಚ್ಚಿಕೊಂಡಿದ್ದಾರೆ. ಆಕೆ ನಟಿಸುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಚಿತ್ರದಲ್ಲಿದೆ ನಾಯಕ ಸಹೋದರಿ ಪಾತ್ರಕ್ಕೂ ಬಹಳ ಮಹತ್ವ ಇದೆಯಂತೆ. ಬಹಳ ಪವರ್‌ಫುಲ್ ಪಾತ್ರ ಅದು ಎನ್ನುವ ಊಹಾಪೋಹ ಇದೆ. ಆದರೆ ಚಿತ್ರತಂಡ ಮಾತ್ರ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಬೆಂಗಳೂರಿನಿಂದಲೇ 'ಟಾಕ್ಸಿಕ್' ಸಿನಿಮಾ ಚಿತ್ರೀಕರಣ ಆರಂಭವಾಗಲಿದೆ. ಬಳಿಕ ಗೋವಾ, ಶ್ರೀಲಂಕಾದಲ್ಲಿ ಚಿತ್ರೀಕರಣ ನಡೆಸಲು ಚಿತ್ರತಂಡ ಪ್ಲ್ಯಾನ್ ಮಾಡುತ್ತಿದೆ. ಕೆಲ ದಿನಗಳ ಹಿಂದೆ ಗೋವಾದಲ್ಲಿ ಬೀಡುಬಿಟ್ಟು ಚಿತ್ರತಂಡ ಪ್ರೀ ಪ್ರೊಡಕ್ಷನ್ ಕೆಲಸಗಳನ್ನು ಮುಗಿಸಿದೆ. ಚಿತ್ರೀಕರಣಕ್ಕಾಗಿ ಬೆಂಗಳೂರಿನ ಹೆಚ್‌ಎಂಟಿ ಫ್ಯಾಕ್ಟರಿ ಆವರಣದಲ್ಲಿ ದೊಡ್ಡ ಸೆಟ್ ನಿರ್ಮಾಣವಾಗಿದೆ.

More from Filmibeat

English summary
Did Makers of Toxic approach Aishwarya Rai for Yash's Sister Role?;
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X