Anushka Shetty: ಅನುಷ್ಕಾ ಶೆಟ್ಟಿ ಮದುವೆ ಅಸಲಿಯತ್ತೇನು? ಮತ್ತೆ ಟ್ರೆಂಡಿಂಗ್‌ನಲ್ಲಿದೆ 'ಸ್ವೀಟಿ' ಮ್ಯಾರೇಜ್

ಕರಾವಳಿ ಸುಂದರಿ ಅನುಷ್ಕಾ ಶೆಟ್ಟಿ ಇತ್ತೀಚೆಗೆ ಸಿನಿಮಾಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿಲ್ಲ. ಕಥೆಯನ್ನು ಆಯ್ಕೆ ಮಾಡಿ ಒಪ್ಪಿಕೊಳ್ಳುತ್ತಿದ್ದಾರೆ. ಆದ್ರೀಗ ಅನುಷ್ಕಾ ಶೆಟ್ಟಿ ಸಿನಿಮಾಗಳಿಗಿಂತ ಹೆಚ್ಚಾಗಿ ಮದುವೆ ಬಗ್ಗೆನೇ ಹೆಚ್ಚು ಸುದ್ದಿಯಾಗುತ್ತಿದೆ. ಕಳೆದ ಕೆಲವು ವರ್ಷಗಳಿಂದ ಮಾಧ್ಯಮಗಳಲ್ಲಿ ಇವರ ಮದುವೆ ವದಂತಿಗಳು ಹರಿದಾಡುತ್ತಲೇ ಇವೆ. ಆದರೆ, ಈ ಬಗ್ಗೆ ಸ್ವೀಟಿ ಎಲ್ಲಿಯೂ ಪ್ರತಿಕ್ರಿಯೆ ನೀಡಿಲ್ಲ.

ಮದುವೆ ವಿಷಯ ಬಂದಾಗ ಅನುಷ್ಕಾ ಶೆಟ್ಟಿ ತಮ್ಮ ಮೌನವನ್ನೇ ಉತ್ತರವಾಗಿಸಿಕೊಂಡಿದ್ದಾರೆ. ಆದರೆ, 'ಬಾಹುಬಲಿ' ಬಳಿಕ ಅನುಷ್ಕಾ ಶೆಟ್ಟಿ ಸಿನಿಮಾಗಳಲ್ಲಿ ನಟಿಸುವುದನ್ನೇ ಕಡಿಮೆ ಮಾಡಿದ್ದಾರೆ. ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದನ್ನೂ ಕಡಿಮೆ ಮಾಡಿದ್ದಾರೆ. ಖಾಸಗಿ ಕಾರ್ಯಕ್ರಮಗಳಿಂದಲೂ ದೂರ ಉಳಿದಿರುವ ಸ್ವೀಟಿ ಶೀಘ್ರದಲ್ಲೇ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆಂಬ ಸುದ್ದಿ ಮತ್ತೆ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದು ಅವರ ಅಭಿಮಾನಿ ವಲಯದಲ್ಲಿ ಸಾಕಷ್ಟು ಚರ್ಚೆಯನ್ನು ಹುಟ್ಟಾಕಿದೆ.

Anushka Shetty wedding news trending in social media that she will marry her relative

ಅನುಷ್ಕಾ ಶೆಟ್ಟಿ ಮದುವೆ ಬಗ್ಗೆ ಆಗಾಗ ಚರ್ಚೆ ಆಗುತ್ತಲೇ ಇರುತ್ತೆ. ಪ್ರಭಾಸ್, ಅನುಷ್ಕಾ ಶೆಟ್ಟಿ ಮದುವೆ ಬಗ್ಗೆ ಚರ್ಚೆ ಆದಷ್ಟು ದಕ್ಷಿಣ ಭಾರತದಲ್ಲಿ ಮತ್ಯಾರದ್ದೂ ಆಗಿಯೇ ಇಲ್ಲ. ಅಷ್ಟೇ ಇಲ್ಲದೇ, ಇವರಿಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆಂಬ ಸುದ್ದಿ ಕೂಡ ಹಬ್ಬಿತ್ತು. ಆದರೆ, ಈ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದ್ದಂತೆ ಕೆಲವು ಸಂದರ್ಶನಗಳಲ್ಲಿ ಪ್ರಭಾಸ್ ಹಾಗೂ ಅನುಷ್ಕಾ ಇಬ್ಬರು ಮದುವೆ ಬಗ್ಗೆ ಹಬ್ಬಿರುವ ವದಂತಿಗಳನ್ನು ತಳ್ಳಿ ಹಾಕಿದ್ದರು.

ಇನ್ನೊಂದು ಕಡೆ ಅನುಷ್ಕಾ ಶೆಟ್ಟಿ ಸಿನಿಮಾಗಳಲ್ಲಿ ಹೆಚ್ಚು ನಟಿಸದೇ ಇರುವುದಕ್ಕೂ ಸುದ್ದಿಗಳು ಹಬ್ಬಿದ್ದವು. ಅನುಷ್ಕಾ ಆರೋಗ್ಯ ಸಮಸ್ಯೆಯಿಂದಾಗಿ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲವೆಂದು ಸುದ್ದಿ ಹಬ್ಬಿತ್ತು. ಆನಂತರ ಅನುಷ್ಕಾ ತಮ್ಮ ವೃತ್ತಿಜೀವನದಲ್ಲಿ ವೈಯಕ್ತಿಕ ಕಾರಣಗಳಿಂದಾಗಿ ಸಿನಿಮಾಗಳನ್ನು ಕಡಿಮೆ ಮಾಡಿದ್ದಾರೆ ಎನ್ನಲಾಗಿತ್ತು. ಇದ್ಯಾವುದಕ್ಕೂ ಸ್ವೀಟ್ ಪ್ರತಿಕ್ರಿಯೆ ನೀಡುವುದಕ್ಕೆ ಹೋಗಿಲ್ಲ.

Also Read
ಸೂಪರ್ ಹಿಟ್ ಸಿನಿಮಾ ಹಿಂದಿ ರೀಮೆಕ್‌ನಲ್ಲಿ ಶ್ರೀಲೀಲಾ? ಪ್ಲ್ಯಾನ್ ಹೇಗಿದೆ ಗೊತ್ತಾ?
ಸೂಪರ್ ಹಿಟ್ ಸಿನಿಮಾ ಹಿಂದಿ ರೀಮೆಕ್‌ನಲ್ಲಿ ಶ್ರೀಲೀಲಾ? ಪ್ಲ್ಯಾನ್ ಹೇಗಿದೆ ಗೊತ್ತಾ?

ಅನುಷ್ಕಾ ಶೆಟ್ಟಿ ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಿದ್ದಾರೆ. ಇದರಿಂದ ಭಾರಿ ಆದಾಯಗಳಿಸಿದ್ದಾರೆ. ಅಲ್ಲದೆ ಹಲವೆಡೆ ಆಸ್ತಿಗಳನ್ನು ಗಳಿಸಿ ಆರ್ಥಿಕವಾಗಿ ಸದೃಢವಾಗಿದ್ದಾರೆ. ಈ ಕಾರಣಕ್ಕೆ ಸಿನಿಮಾಗಳಿಂದ ದೂರ ಉಳಿದ್ದಾರೆಂದು ಟಾಲಿವುಡ್‌ನಲ್ಲಿ ಚರ್ಚೆಯಾಗುತ್ತಿದೆ. ಹೀಗೇ ಒಂದಲ್ಲ ಒಂದು ಕಾರಣಕ್ಕೆ ಅನುಷ್ಕಾ ಶೆಟ್ಟಿ ಸದಾ ಸುದ್ದಿಯಲ್ಲಿ ಇದ್ದಾರೆ.

Anushka Shetty wedding news trending in social media that she will marry her relative

ಇನ್ನು ಇತ್ತೀಚೆಗೆ ಅನುಷ್ಕಾ ಶೆಟ್ಟಿ ಮದುವೆ ಬಗ್ಗೆ ಮತ್ತೆ ಚರ್ಚೆ ಶುರುವಾಗಿದೆ. ಅನುಷ್ಕಾ ಈ ವರ್ಷವೇ ಮದುವೆಯಾಗಲು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಕುಟುಂಬದ ಒತ್ತಡ ಬಂದಿರುವ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಂಡಿದ್ದು, ಕುಟುಂಬ ಸಂಬಂಧಿಯೊಂದಿಗೆ ಅನುಷ್ಕಾ ಶೆಟ್ಟಿಯ ಮದುವೆ ಮಾತುಕತೆ ನಡೆಯುತ್ತಿದೆ ಎಂದು ಎಂಬ ಸುದ್ದಿ ಓಡಾಡುತ್ತಿದೆ. ಅದೇ ಇನ್ನೊಂದು ಕಡೆ ಸೋಶಿಯಲ್ ಮೀಡಿಯಾದಲ್ಲಿ ಓರ್ವ ಉದ್ಯಮಿಯೊಂದಿಗೆ ವಿವಾಹವಾಗಲಿದ್ದಾರೆ ಎಂಬ ಸುದ್ದಿಯೂ ಹರಿದಾಡುತ್ತಿದೆ. ಕುಟುಂಬದವರೇ ಈ ಮದುವೆಯನ್ನು ಆಯೋಜಿಸುತ್ತಿದ್ದಾರೆಂದಯ ಎಂಬ ಸುದ್ದಿ ಇನ್ನೊಂದು ಕಡೆ ಹರಿದಾಡುತ್ತಿದೆ.

ಅನುಷ್ಕಾ ಶೆಟ್ಟಿ ಮದುವೆ ಬಗ್ಗೆ ಹಲವು ಸುದ್ದಿಗಳು ಹರಿದಾಡುತ್ತಿವೆ. ಆದರೆ, ಈ ಸುದ್ದಿಗಳು ನಿಖರವಾಗಿ ಇನ್ನೂ ತಿಳಿದಿಲ್ಲ. ಅನುಷ್ಕಾ ಹಾಗೂ ಅವರ ಕುಟುಂಬದ ಸದಸ್ಯರು ಈ ಬಗ್ಗೆ ಅಧಿಕೃತ ಹೇಳಿಕೆಗಳನ್ನು ಎಲ್ಲೂ ಕೊಟ್ಟಿಲ್ಲ. 'ಮಿಸ್ ಶೆಟ್ಟಿ ಮಿಸ್ಟರ್ ಪೊಲಿಶೆಟ್ಟಿ' ಸಿನಿಮಾ ಬಳಿಕ ಇತ್ತೀಚೆಗೆ 'ಘಾಟಿ' ಸಿನಿಮಾದಲ್ಲಿ ನಟಿಸಿದ್ದರು. ಆದರೆ, ಆ ಸಿನಿಮಾ ಬಾಕ್ಸಾಫೀಸ್‌ನಲ್ಲಿ ಆ ಮಟ್ಟಿಗೆ ಸದ್ದು ಮಾಡಿಲ್ಲ. ಸದ್ಯಕ್ಕೀಗ ಮಲಯಾಳಂನ 'ಕಥನಾರ್' ಸಿನಿಮಾ ರಿಲೀಸ್ ಆಗಬೇಕಿದೆ. ಅದು ಸದ್ಯ ಪೋಸ್ಟ್-ಪ್ರೊಡಕ್ಷನ್ ಹಂತದಲ್ಲಿದೆ. ಇನ್ನು ಕೆಲವು ಹೊಸ ಪ್ರಾಜೆಕ್ಟ್‌ಗಳ ಬಗ್ಗೆ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ.

More from Filmibeat

English summary
Anushka Shetty wedding news trending in social media that she will marry her relative.
Read more about: anushka shetty actress marriage
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X