Don't Miss!
- Finance
Jio, Airtel 5G: ಕಳೆದ 4 ತಿಂಗಳಲ್ಲಿ ಎಷ್ಟು ಗ್ರಾಹಕರನ್ನು ಆಕರ್ಷಿಸಿವೆ ಟೆಲಿಕಾಂ ಕಂಪನಿಗಳು? ಇಲ್ಲಿದೆ ಮಾಹಿತಿ
- News
Jio, Airtel 5G: ಕೇವಲ 4 ತಿಂಗಳಲ್ಲಿ ಎಷ್ಟು ಕೋಟಿ ಗ್ರಾಹಕರು ಗೊತ್ತೇ? ದಾಖಲೆ ಅಂಕಿಅಂಶ- ಮಾಹಿತಿ ಇಲ್ಲಿದೆ
- Sports
KCC Cup 2023: ಯಾವ ತಂಡಕ್ಕೆ ಯಾರು ನಾಯಕ?; ಸುದೀಪ್ ತಂಡದಲ್ಲಿ ಯೂನಿವರ್ಸಲ್ ಬಾಸ್!
- Technology
ವಾಟ್ಸಾಪ್ನ ಈ ಹೊಸ ಫೀಚರ್ಸ್ನಲ್ಲಿ ಏನೆಲ್ಲಾ ಅನುಕೂಲ ಇದೆ ಗೊತ್ತಾ!?
- Automobiles
ಭಾರತದಲ್ಲಿ ದಾಖಲೆ ಮಟ್ಟದ ಬುಕ್ಕಿಂಗ್ ಪಡೆದುಕೊಳ್ಳುತ್ತಿವೆ ಮಾರುತಿ ಜಿಮ್ನಿ, ಫ್ರಾಂಕ್ಸ್
- Lifestyle
ಸಂಗಾತಿ ಸುಮ್-ಸಮ್ಮನೇ ಸಂಶಯ ಪಡುತ್ತಾರಾ? ಅವರ ಸಂಶಯ ಹೋಗಲಾಡಿಸಲು ಏನು ಮಾಡಬೇಕು?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಕಮಲ್ ಹಾಸನ್ ಸಿನಿಮಾ ಅತಿಥಿಯಾಗಿ ಕಾಣಿಸಿಕೊಳ್ತಾರಾ ಕಿಚ್ಚ ಸುದೀಪ್? ಹರಿದಾಡುತ್ತಿರೋ ಸುದ್ದಿಯೇನು?
'ವಿಕ್ರಾಂತ್ ರೋಣ' ಯಶಸ್ಸಿನ ಬಳಿಕ ಕಿಚ್ಚ ಸುದೀಪ್ ಹೊಸ ಸಿನಿಮಾ ಯಾವುದು? ಅನ್ನೋದನ್ನು ಇನ್ನೂ ಘೋಷಣೆ ಮಾಡಿಲ್ಲ. ಬಿಗ್ ಬಾಸ್ ಸೀಸನ್ 9 ನಿರೂಪಣೆಯಲ್ಲಿ ಬ್ಯುಸಿಯಾಗಿದ್ದಾರೆ. ಈ ರಿಯಾಲಿಟಿ ಶೋ ಮುಗಿದ ಬಳಿಕ ಹೊಸ ಸಿನಿಮಾ ಅನೌನ್ಸ್ ಆಗಬಹುದು ಅನ್ನೋ ನಿರೀಕ್ಷೆ ಇದೆ.
ಅಷ್ಟರಲ್ಲೇ ಕಿಚ್ಚ ಸುದೀಪ್ ಹೊಸ ಸಿನಿಮಾದ ಬಗ್ಗೆ ಹಲವು ಸುದ್ದಿಗಳು ಗಾಂಧಿನಗರದಲ್ಲಿ ಹರಿದಾಡುತ್ತಿವೆ. 'ವಿಕ್ರಾಂತ್ ರೋಣ' ಬಳಿಕ ಕಿಚ್ಚ ಬಿಗ್ ಪ್ರಾಜೆಕ್ಟ್‌ಗೆ ಕೈ ಹಾಕಿದ್ದು, ಈಗಾಗಲೇ ಲೈಕಾ ಸಂಸ್ಥೆ ಜೊತೆ ಸಿನಿಮಾ ಮಾಡುತ್ತಿದ್ದಾರೆ ಅನ್ನೋ ಸುದ್ದಿಯಂತೂ ಹರಿದಾಡಿತ್ತು.
ಕಟೀಲು
ದೇವಾಲಯದಲ್ಲಿ
ಅಭಿಮಾನದ
ಅಲೆಯಲ್ಲಿ
ಮಿಂದೆದ್ದ
ಕಿಚ್ಚ
ಸುದೀಪ
ಈ ಬೆನ್ನಲ್ಲೇ ಕಿಚ್ಚ ಸುದೀಪ್ ಉಳಗನಾಯಗನ್ ಕಮಲ್ ಹಾಸನ್ ಅವರ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಪುಕಾರು ಹಬ್ಬಿದೆ. ಅಸಲಿಗೆ ಕಿಚ್ಚ ಸುದೀಪ್ ಹೊಸ ಸಿನಿಮಾದ ಮ್ಯಾಟರ್ ಏನು? ಗೊಂದಲವೇನು? ಅನ್ನೋದನ್ನು ತಿಳಿಯಲು ಮುಂದೆ ಓದಿ.

ಕಮಲ್ ಹಾಸನ್ ಸಿನಿಮಾಗೆ ಸುದೀಪ್ ಅತಿಥಿ
ಕಳೆದೊಂದು ವಾರದಿಂದ ಕಿಚ್ಚ ಸುದೀಪ್ ಹೊಸ ಸಿನಿಮಾದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿತ್ತು. ಈಗ ಮತ್ತೊಂದು ಸುದ್ದಿ ಹೊರಬಿದ್ದಿದ್ದು, ತಮಿಳು ನಟ ಕಮಲ್ ಹಾಸನ್ ಸಿನಿಮಾದಲ್ಲಿ ಅಭಿನಯದ ಚಕ್ರವರ್ತಿ ಗೆಸ್ಟ್ ರೋಲ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ. ಶಂಕರ್ ನಿರ್ದೇಶಿಸುತ್ತಿರುವ 'ಇಂಡಿಯನ್ 2' ಸಿನಿಮಾದಲ್ಲಿ ಕಿಚ್ಚ ಸುದೀಪ್ ನಟಿಸಲಿದ್ದಾರೆ ಅನ್ನೋ ಸುದ್ದಿ ಹರಿದಾಡುತ್ತಿದೆ. ಆದರೆ, ಈ ಬಗ್ಗೆ ಅಧಿಕೃತ ಮಾಹಿತಿ ಇನ್ನೂ ಸಿಕ್ಕಿಲ್ಲ.

ಲೈಕಾ ಪ್ರೊಡಕ್ಷನ್ ಸಿನಿಮಾ ಇದೇನಾ?
ಕೆಲವು ದಿನಗಳ ಹಿಂದಷ್ಟೆ ಕಿಚ್ಚ ಸುದೀಪ್ ಹೊಸ ಸಿನಿಮಾವನ್ನು ಲೈಕಾ ಪ್ರೊಡಕ್ಷನ್ಸ್ ನಿರ್ಮಾಣ ಮಾಡುತ್ತಿದೆ. 'ವಿಕ್ರಾಂತ್ ರೋಣ' ಯಶಸ್ಸಿನ ಬಳಿಕ ಲೈಕಾ ಸಂಸ್ಥೆ ಕಿಚ್ಚನ ಮೇಲೆ ಕಣ್ಣಿಟ್ಟಿದ್ದು, ಪ್ಯಾನ್ ಇಂಡಿಯಾ ಸಿನಿಮಾ ನಿರ್ಮಾಣ ಮಾಡುವುದಕ್ಕೆ ತುದಿಗಾಲಲ್ಲಿ ನಿಂತಿದೆ ಎನ್ನಲಾಗಿತ್ತು. ಈಗ ಓಡಾಡುತ್ತಿರೋ ಹೊಸ ಸುದ್ದಿ ಗೊಂದಲ ಸೃಷ್ಟಿಸಿದೆ. ಯಾಕಂದ್ರೆ, 'ಇಂಡಿಯನ್ 2' ಸಿನಿಮಾವನ್ನು ಲೈಕಾ ಸಂಸ್ಥೆಯೇ ನಿರ್ಮಾಣ ಮಾಡುತ್ತಿದೆ. ಹೀಗಾಗಿ ಕೆಲವು ದಿನಗಳ ಹಿಂದೆ ಓಡಾಡುತ್ತಿದ್ದ ಸುದ್ದಿ ಇದೇನಾ? ಅಥವಾ ಕಿಚ್ಚನಿಗಾಗಿ ಲೈಕಾ ಪ್ರೊಡಕ್ಷನ್ ಹೊಸ ಸಿನಿಮಾ ನಿರ್ಮಾಣ ಮಾಡುತ್ತಿದೆಯಾ? ಅನ್ನೋ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳಬೇಕಿದೆ.

ಹೊಂಬಾಳೆ ಫಿಲ್ಮ್ಸ್ ಅಥವಾ ಲೈಕಾ ಮೀಡಿಯಾ?
ಸುದೀಪ್ ಮುಂದಿನ ಸಿನಿಮಾ ಯಾವುದು? ಅನ್ನೋದು ಅಭಿಮಾನಿಗಳಿಗೆ ದೊಡ್ಡ ಪ್ರಶ್ನೆಯಾಗಿದೆ. 'ವಿಕ್ರಾಂತ್ ರೋಣ' ಯಶಸ್ಸು ಕಂಡ ದಿನದಿಂದ ಹೊಸ ಸಿನಿಮಾ ಯಾವಾಗ ಅನೌನ್ಸ್ ಆಗುತ್ತೆ ಅಂತ ತುದಿಗಾಲಲ್ಲಿ ನಿಂತಿದ್ದಾರೆ. ಕೆಲವು ದಿನಗಳ ಹಿಂದೆ ಕಿಚ್ಚ ಸುದೀಪ್ ಹೊಸ ಸಿನಿಮಾವನ್ನು ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡುತ್ತೆ ಅನ್ನೋ ಗುಲ್ಲೆದ್ದಿತ್ತು. ಈಗ ಲೈಕಾ ಸಂಸ್ಥೆ ಜೊತೆ ಸಿನಿಮಾ ಅನ್ನೋ ಟಾಕ್ ಶುರುವಾಗಿದೆ. ಈ ಎರಡೂ ಸಂಸ್ಥೆಗಳಲ್ಲಿ ಕಿಚ್ಚನ ಆಯ್ಕೆ ಯಾವುದು? ಅನ್ನೋದು ಸದ್ಯಕ್ಕೆ ಕುತೂಹಲ ಹುಟ್ಟಿಸಿದೆ. ಆದರ ಎರಡೂ ಸಂಸ್ಥೆಗಳೂ ಈ ಸುದ್ದಿಯ ಬಗ್ಗೆ ಅಧಿಕೃತ ಮಾಹಿತಿ ನೀಡಿಲ್ಲ.

'ಕಬ್ಜ' ಮೇಲೆ ಎಲ್ಲರ ಕಣ್ಣು
ಕಿಚ್ಚ ಸುದೀಪ್ ಹಾಗೂ ಉಪೇಂದ್ರ ಕಾಂಬಿನೇಷನ್ ಸಿನಿಮಾ 'ಕಬ್ಜ' ಬಿಡುಗಡೆಗೆ ರೆಡಿಯಾಗುತ್ತಿದೆ. 'ವಿಕ್ರಾಂತ್ ರೋಣ' ಐದು ಭಾಷೆಗಳಲ್ಲಿ ರಿಲೀಸ್ ಆಗಿದ್ದರೆ, 'ಕಬ್ಜ' ಸಿನಿಮಾ ಸುಮಾರು 7 ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಹೀಗಾಗಿ 'ಕೆಜಿಎಫ್ 2', '777 ಚಾರ್ಲಿ', 'ವಿಕ್ರಾಂತ್ ರೋಣ', 'ಕಾಂತಾರ' ಬಳಿಕ 'ಕಬ್ಜ' ಮೇಲೆ ಎಲ್ಲರೂ ಕಣ್ಣಿಟ್ಟಿದ್ದಾರೆ. ಈ ಮಧ್ಯೆ ಕಿಚ್ಚ ಸುದೀಪ್ ಮುಂದಿನ ಸಿನಿಮಾ ಅಭಿಮಾನಿಗಳ ನಿದ್ದೆ ಕೆಡಿಸಿರೋದಂತೂ ನಿಜ.