Salaar: ಬಹುನಿರೀಕ್ಷಿತ 'ಸಲಾರ್' ಟ್ರೈಲರ್‌ ರಿಲೀಸ್ ಡೇಟ್ ಫಿಕ್ಸ್: ಮುಖ್ಯ ಅತಿಥಿಯಾಗಿ ಯಶ್?

ಬಾಹುಬಲಿ ಪ್ರಭಾಸ್ ಹಾಗೂ ಪ್ರಶಾಂತ್ ನೀಲ್ ಡೆಡ್ಲಿ ಕಾಂಬಿನೇಷನ್ 'ಸಲಾರ್' ಸಿನಿಮಾ ಬಿಡುಗಡೆಗೆ ಇನ್ನೊಂದು ತಿಂಗಳು ಬಾಕಿಯಿದೆ. ಹೊಂಬಾಳೆ ಸಂಸ್ಥೆ ಪ್ರಮೋಷನ್ ವಿಚಾರದಲ್ಲಿ ಸೈಲೆಂಟ್ ಆಗಿದೆ. ಆದರೆ ಟ್ರೈಲರ್ ಸಮೇತ ಭರ್ಜರಿ ಸದ್ದು ಮಾಡುವ ಪ್ಲ್ಯಾನ್ ನಡೀತಿದೆ. 2 ಭಾಗಗಳಾಗಿ ಈ ಆಕ್ಷನ್‌ ಎಂಟರ್‌ಟೈನರ್ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗಪ್ಪಳಿಸಲಿದೆ.

ಹೊಂಬಾಳೆ ಸಂಸ್ಥೆ ಬಹಳ ಅದ್ಧೂರಿಯಾಗಿ ಸಿನಿಮಾ ನಿರ್ಮಾಣ ಮಾಡುತ್ತಿದೆ. ಘಟಾನುಘಟಿ ಕಲಾವಿದರು ಚಿತ್ರದಲ್ಲಿ ನಟಿಸಿದ್ದಾರೆ. ಆಗಸ್ಟ್ ಕೊನೆ ವಾರದಲ್ಲಿ ಟ್ರೈಲರ್ ರಿಲೀಸ್ ಮಾಡುವುದಾಗಿ ಹೊಂಬಾಳೆ ಸಂಸ್ಥೆ ಹೇಳಿತ್ತು. ಆದರೆ ಇನ್ನು ರಿಲೀಸ್ ಆಗಿಲ್ಲ. ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಯಾವಾಗ ಟ್ರೈಲರ್ ರಿಲೀಸ್ ಮಾಡ್ತೀರಾ? ಯಾವಾಗ ಪ್ರಮೋಷನ್ ಮಾಡ್ತೀರಾ? ಸೆಪ್ಟೆಂಬರ್ 28ಕ್ಕೆ ಸಿನಿಮಾ ರಿಲೀಸ್ ಆಗುತ್ತಾ? ಇಲ್ವಾ? ಎಂದು ಹೇಳುತ್ತಿದ್ದಾರೆ. ದಿನದಿಂದ ದಿನಕ್ಕೆ ಸಿನಿಮಾ ನೋಡಬೇಕು ಎನ್ನುವ ಅಭಿಮಾನಿಗಳ ಕಾತರ ಹೆಚ್ಚಾಗುತ್ತಿದೆ.

Buzz: Prabhas Starrer Salaar Trailer Date Locked

'ಸಲಾರ್' ಚಿತ್ರದಲ್ಲಿ ಪ್ರಭಾಸ್ ಜೋಡಿಯಾಗಿ ಶ್ರುತಿ ಹಾಸನ್ ಮಿಂಚಿದ್ದಾರೆ. ಇನ್ನುಳಿದಂತೆ ಪೃಥ್ವಿರಾಜ್ ಸುಕುಮಾರನ್, ಜಗಪತಿ ಬಾಬು, ದೇವರಾಜ್, ಈಶ್ವರಿ ಸೇರಿದಂತೆ ದೊಡ್ಡ ತಾರಾಗಣ ಚಿತ್ರದಲ್ಲಿದೆ. 'KGF' ಸರಣಿಗೆ ಕೆಲಸ ಮಾಡಿದ ಬಹುತೇಕ ತಂತ್ರಜ್ಞರು ಈ ಚಿತ್ರಕ್ಕೂ ಕೆಲಸ ಮಾಡಿದ್ದಾರೆ. ಭುವನ್ ಗೌಡ ಛಾಯಾಗ್ರಹಣ, ರವಿ ಬಸ್ರೂರು ಸಂಗೀತ, ಶಿವಕುಮಾರ್ ಕಲಾ ನಿರ್ದೇಶನ ಚಿತ್ರಕ್ಕಿದೆ. ಈಗಾಗಲೇ ಚಿತ್ರದ ಪೋಸ್ಟರ್ಸ್, ಟೀಸರ್ ರಿಲೀಸ್ ಆಗಿ ಸೂಪರ್ ಹಿಟ್ ಆಗಿದೆ.

ಕೆಲ ದಿನಗಳ ಹಿಂದೆ ರಿಲೀಸ್ ಆಗಿದ್ದ ಟೀಸರ್ ಭಾರೀ ಸದ್ದು ಮಾಡಿತ್ತು. ಆದರೆ ಸರಿಯಾಗಿ ಪ್ರಭಾಸ್ ದರ್ಶನವಾಗದೇ ಅಭಿಮಾನಿಗಳು ಬೇಸರಗೊಂಡಿದ್ದರು. ಹಾಗಾಗಿ ಟ್ರೈಲರ್ ಬೇಗ ರಿಲೀಸ್ ಮಾಡಿ ಎಂದು ಪಟ್ಟು ಹಿಡಿದಿದ್ದಾರೆ. ಚಿತ್ರತಂಡ ಹಗಲು ರಾತ್ರಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ. ಸತತ ಸೋಲುಗಳಿಂದ ಕಂಗೆಟ್ಟ ಪ್ರಭಾಸ್ 'ಸಲಾರ್' ಆಗಿ ಕಂಬ್ಯಾಕ್ ಮಾಡುವ ನಿರೀಕ್ಷೆಯಲ್ಲಿದ್ದಾರೆ. ದೇಶ ವಿದೇಶಗಳಲ್ಲಿ ಏಕಕಾಲಕ್ಕೆ ಬಹಳ ದೊಡ್ಡಮಟ್ಟದಲ್ಲಿ ಸಿನಿಮಾ ರಿಲೀಸ್ ಆಗಲಿದೆ.

'ಸಲಾರ್' ಸಿನಿಮಾದಲ್ಲಿ ಹೆಚ್ಚು ಹಾಡುಗಳಿಲ್ಲ. ಹಾಗಾಗಿ ಈವರೆಗೆ ಯಾವುದೇ ಹಾಡು ರಿಲೀಸ್ ಮಾಡಿಲ್ಲ. ಇನ್ನು ಈಗಾಗಲೇ ಟ್ರೈಲರ್ ಸೆನ್ಸಾರ್ ಆಗಿದೆಯಂತೆ. 2 ನಿಮಿಷ 37 ಸೆಕೆಂಡ್‌ಗಳ ಟ್ರೈಲರ್‌ ಕಟ್ ಮಾಡಿದ್ದಾರೆ ಎನ್ನಲಾಗ್ತಿದೆ. ಅದಕ್ಕೆ ರವಿಬಸ್ರೂರು ಕಿಕ್ ಕೊಡುವ ಬಿಜಿಎಂ ಕೊಟ್ಟಿದ್ದಾರೆ. 'ಸಲಾರ್' ಕತೆ ಬಗ್ಗೆ ಚಿತ್ರತಂಡ ಯಾವುದೇ ಸುಳಿವು ಬಿಟ್ಟುಕೊಟ್ಟಿಲ್ಲ. ಒಟ್ನಲ್ಲಿ ಪ್ರಭಾಸ್ ಡೈನೋಸಾರ್ ರೀತಿ ಅಬ್ಬರಿಸುತ್ತಾರೆ ಎನ್ನಲಾಗ್ತಿದೆ. ಚಿತ್ರದಲ್ಲಿ ಡಾರ್ಲಿಂಗ್ ಡಬಲ್ ರೋಲ್ ಮಾಡಿದ್ದಾರೆ ಎನ್ನುವ ಊಹಾಪೋಹ ಕೂಡ ಇದೆ.

ಸೆಪ್ಟೆಂಬರ್ 6ಕ್ಕೆ 'ಸಲಾರ್' ಟ್ರೈಲರ್ ರಿಲೀಸ್ ಆಗುತ್ತದೆ ಎನ್ನಲಾಗ್ತಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ ನಡೀತಿದೆ. ಆದರೆ ಚಿತ್ರತಂಡ ಮಾತ್ರ ಇನ್ನು ಈ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ಇನ್ನು ಬೆಂಗಳೂರು ಅಥವಾ ಹೈದರಾಬಾದ್‌ನಲ್ಲಿ ಟ್ರೈಲರ್ ರಿಲೀಸ್ ಕಾರ್ಯಕ್ರಮ ನಡೆಯುವ ಸಾಧ್ಯತೆಯಿದೆ. ರಾಕಿಂಗ್ ಸ್ಟಾರ್ ಯಶ್ ಮುಖ್ಯ ಅತಿಥಿಯಾಗಿ ಕಾರ್ಯಕ್ರಮಕ್ಕೆ ಬರುತ್ತಾರೆ ಎನ್ನುವ ಮಾತುಗಳು ಕೇಳಿಬರ್ತಿದೆ. ಒಟ್ನಲ್ಲಿ 'ಸಲಾರ್' ಟ್ರೈಲರ್ ಇನ್ನಿಲ್ಲದ ನಿರೀಕ್ಷೆ ಹುಟ್ಟಾಕ್ಕಿದೆ.

ಇನ್ನು ಈಗಾಗಲೇ 'ಸಲಾರ್' ಓವರ್‌ಸೀನ್ ಅಡ್ವಾನ್ಸ್ ಟಿಕೆಟ್ ಬುಕ್ಕಿಂಗ್ ಶುರುವಾಗಿದ್ದು ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ. ಈ ಬಾರಿ ಇಂಗ್ಲೀಷ್‌ ಭಾಷೆಗೂ ಸಿನಿಮಾ ಡಬ್ ಮಾಡಿ ರಿಲೀಸ್ ಮಾಡುತ್ತಾರೆ ಎನ್ನಲಾಗ್ತಿದೆ. ಆದರೆ ಇನ್ನಷ್ಟೇ ಕಾದು ನೋಡಬೇಕಿದೆ.

More from Filmibeat

English summary
Prabhas, Prashanth Neel's Salaat Trailer Release On September 6th.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X