ಹೊಂಬಾಳೆ- ಹೃತಿಕ್ ಕಾಂಬಿನೇಷನ್ ಚಿತ್ರಕ್ಕೆ ಮಲಯಾಳಂ ನಿರ್ದೇಶಕ ಆಕ್ಷನ್ ಕಟ್?

ಅಂತೂ ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ಬಾಲಿವುಡ್ ಅಂಗಳಕ್ಕೆ ಲಗ್ಗೆ ಇಟ್ಟಿದೆ. ಶಾರುಖ್ ಖಾನ್ ನಟನೆಯ ಚಿತ್ರವನ್ನು ಸಂಸ್ಥೆ ನಿರ್ಮಾಣ ಮಾಡುತ್ತದೆ ಎನ್ನುವ ಊಹಾಪೋಹ ಹಿಂದೆ ಶುರುವಾಗಿತ್ತು. ಅಚ್ಚರಿ ಎನ್ನುವಂತೆ ಹೃತಿಕ್ ರೋಷನ್ ಕಾಂಬಿನೇಷನ್‌ನಲ್ಲಿ ಸಿನಿಮಾ ಘೋಷಣೆ ಆಗಿದೆ. ಅಧಿಕೃತವಾಗಿ ಈ ಬಗ್ಗೆ ಮಾಹಿತಿ ಸಿಕ್ಕಿದೆ.

ಸದ್ಯ 'ವಾರ್- 2' ಚಿತ್ರದಲ್ಲಿ ಹೃತಿಕ್ ರೋಷನ್ ನಟಿಸುತ್ತಿದ್ದಾರೆ. ಆಗಸ್ಟ್ 14ಕ್ಕೆ ಈ ಸ್ಪೈ ಥ್ರಿಲ್ಲರ್ ಸಿನಿಮಾ ತೆರೆಗೆ ಬರಲಿದೆ. ಅಯಾನ್ ಮುಖರ್ಜಿ ನಿರ್ದೇಶನದ ಚಿತ್ರದಲ್ಲಿ ತೆಲುಗು ನಟ ಜ್ಯೂ. ಎನ್‌ಟಿಆರ್ ಸಹ ಬಣ್ಣ ಹಚ್ಚಿದ್ದಾರೆ. ಇತ್ತೀಚೆಗೆ ಚಿತ್ರದ ಟೀಸರ್ ರಿಲೀಸ್ ಆಗಿ ಧೂಳೆಬ್ಬಿಸಿತ್ತು. ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ದೊಡ್ಡ ದೊಡ್ಡ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿದೆ. ಅದೇ ಸಾಲಿಗೆ ಇದೀಗ ಹೃತಿಕ್ ಸಿನಿಮಾ ಸೇರಿಕೊಳ್ಳುತ್ತಿದೆ.

Buzz Prithviraj Sukumaran is going to direct the Hrithik Roshan and Hombale Films Movie

ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸುತ್ತಿರುವ 'ಕಾಂತಾರ-1' ಸಿನಿಮಾ ಚಿತ್ರೀಕರಣ ಮುಕ್ತಾಯದ ಹಂತ ತಲುಪಿದೆ. ಅಕ್ಟೋಬರ್ 2ಕ್ಕೆ ಈ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿದೆ. ಬಳಿಕ 'ಮಹಾವತಾರ್ ನರಸಿಂಹ' ಎಂದು ಆನಿಮೇಷನ್ ಸಿನಿಮಾ ಕೂಡ ಬಿಡುಗಡೆ ಆಗಲಿದೆ. ರಕ್ಷಿತ್ ಶೆಟ್ಟಿ ನಿರ್ದೇಶಿಸಿ ನಟಿಸಲಿರುವ 'ರಿಚರ್ಡ್ ಆಂಟನಿ' ಚಿತ್ರವನ್ನು ಸಂಸ್ಥೆ ನಿರ್ಮಿಸಲಿದೆ. 'ಸಲಾರ್- 2' ಹಾಗೂ 'KGF ಚಾಪ್ಟರ್'-3 ಚಿತ್ರಗಳು ಘೋಷಣೆಯಾಗಿದೆ.

ಪ್ರಭಾಸ್ ಜೊತೆ ಒಂದಲ್ಲ ಎರಡಲ್ಲ ಮೂರು ಸಿನಿಮಾ ನಿರ್ಮಾಣ ಮಾಡಲು ಒಪ್ಪಂದ ಮಾಡಿಕೊಳ್ಳಲಾಗಿದೆ. ಇದೆಲ್ಲದರ ನಡುವೆ ಹೃತಿಕ್ ರೋಷನ್ ನಟನೆಯ ಚಿತ್ರಕ್ಕೆ ಬಂಡವಾಳ ಹೂಡಲು ಹೊಂಬಾಳೆ ಫಿಲ್ಮ್ಸ್ ಸಿದ್ಧತೆ ನಡೆಸಿದೆ. ಮತ್ತಷ್ಟು ಕತೆಗಳನ್ನು ಕೇಳುತ್ತಿದ್ದು ಮುಂದೆ ಇಂಟ್ರೆಸ್ಟಿಂಗ್ ಕಾಂಬಿನೇಷನ್‌ ಸಿನಿಮಾಗಳು ಶುರುವಾಗಲಿದೆ. ಹೃತಿಕ್ ಜೊತೆ ಸಿನಿಮಾ ಘೋಷಿಸುತ್ತಿದ್ದಂತೆ 'KGF ಚಾಪ್ಟರ್'-3 ಯಾವಾಗ ಎಂದು ಕನ್ನಡ ಸಿನಿರಸಿಕರು ಕೇಳುತ್ತಿದ್ದಾರೆ.

Buzz Prithviraj Sukumaran is going to direct the Hrithik Roshan and Hombale Films Movie

ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಚಿತ್ರದಲ್ಲಿ ಹೃತಿಕ್ ರೋಷನ್ ನಟಿಸೋದು ಸರಿ. ಯಾರು ಆಕ್ಷನ್ ಕಟ್ ಹೇಳುತ್ತಾರೆ ಎನ್ನುವ ಚರ್ಚೆ ಶುರುವಾಗಿದೆ. ಈ ಮೆಗಾ ಪ್ರಾಜೆಕ್ಟ್‌ಗೆ ಮಲಯಾಳಂ ನಟ, ನಿರ್ದೇಶಕ ಪೃಥ್ವಿರಾಜ್ ಸುಕುಮಾರನ್ ಕೈ ಜೋಡಿಸಬಹುದು ಎನ್ನುವ ಊಹಾಪೋಹ ಶುರುವಾಗಿದೆ. ಹೊಂಬಾಳೆ ಫಿಲ್ಮ್ಸ್ ಜೊತೆ ಪೃಥ್ವಿರಾಜ್‌ಗೆ ಆತ್ಮೀಯ ಒಡನಾಟವಿದೆ. 'ಲೂಸಿಫರ್', 'ಬ್ರೋ ಡ್ಯಾಡಿ' ಹಾಗೂ 'ಎಂಪುರಾನ್' ರೀತಿಯ ಬ್ಲಾಕ್‌ಬಸ್ಟರ್ ಸಿನಿಮಾಗಳನ್ನು ಸುಕುಮಾರ್ ನಿರ್ದೇಶಿಸಿ ಗೆದ್ದಿದ್ದಾರೆ.

ಈ ಹಿಂದೆ ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಸುಕುಮಾರ್ ಸಾರಥ್ಯದಲ್ಲಿ 'ಟೈಸನ್' ಎಂಬ ಸಿನಿಮಾ ಘೋಷಣೆ ಆಗಿತ್ತು. ಆದರೆ ಕಾರಣಾಂತರಗಳಿಂದ ಅದು ತಡವಾಗುತ್ತಿದೆ. ಅದರ ಬದಲು ಹೃತಿಕ್ ರೋಷನ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಬಹುದು ಎಂದು ಸೋಶಿಯಲ್ ಮೀಡಿಯಾದಲ್ಲಿ ಗುಲ್ಲಾಗಿದೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಸಿಕ್ಕಿಲ್ಲ.

ಅಂದಹಾಗೆ ಪೃಥ್ವಿರಾಜ್ ಸುಕುಮಾರನ್ ಅವರಿಗೆ ಬಾಲಿವುಡ್ ಹೊಸದಲ್ಲ. ಈಗಾಗಲೇ ಎರಡ್ಮೂರು ಹಿಂದಿ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಹೊಂಬಾಳೆ, ಹೃತಿಕ್, ಪೃಥ್ವಿರಾಜ್ ಕಾಂಬಿನೇಷನ್‌ನಲ್ಲಿ ಸಿನಿಮಾ ಫಿಕ್ಸ್ ಆದರೆ ಚೆನ್ನಾಗಿರುತ್ತದೆ ಎಂದು ಕೆಲವರು ಕಾಮೆಂಟ್ ಮಾಡುತ್ತಿದ್ದಾರೆ. ಹೃತಿಕ್ ಸಿನಿಮಾ ಎಂದೇ ಮೇಲೆ ಭಾರೀ ಬಜೆಟ್ ಪ್ರಾಜೆಕ್ಟ್ ಎನ್ನುವುದನ್ನು ಬಿಡಿಸಿ ಹೇಳಬೇಕಿಲ್ಲ. ಬಜೆಟ್ 300 ಕೋಟಿ ರೂ. ದಾಟುವ ನಿರೀಕ್ಷೆಯಿದೆ.

ತೆಲುಗು ನಿರ್ದೇಶಕ ಪ್ರಶಾಂತ್ ವರ್ಮಾ ಕಾಂಬಿನೇಷನ್‌ನಲ್ಲಿ ಹೊಂಬಾಳೆ ಸಂಸ್ಥೆ ಚಿತ್ರ ನಿರ್ಮಾಣ ಮಾಡುತ್ತದೆ ಎನ್ನುವ ಮಾತುಗಳು ಕೇಳಿಬರ್ತಿದೆ. ಪ್ರಶಾಂತ್ ಹುಟ್ಟುಹಬ್ಬಕ್ಕೆ ತನ್ನ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಸಂಸ್ಥೆ ಶುಭಾಶಯ ಕೋರಿದೆ. ಪ್ರಭಾಸ್ ಹಾಗೂ ಪ್ರಶಾಂತ್ ಜೋಡಿಯ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ನಿರ್ಮಾಣ ಮಾಡುತ್ತದೆ ಎಂದು ಫಿಲ್ಮ್ ನಗರ್‌ನಲ್ಲಿ ಗುಲ್ಲಾಗಿದೆ. ಆ ಸಿನಿಮಾ ಯಾವುದು ಎಂದು ಕಾದು ನೋಡಬೇಕಿದೆ.

More from Filmibeat

English summary
Malayalam actor-turned-director will direct the Hrithik Roshan and Hombale Films movie;
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X