»   » 'ಕುರುಕ್ಷೇತ್ರ' ಹಬ್ಬಕ್ಕೆ ಸಿದ್ದವಾದ ಅಭಿಮಾನಿಗಳು

'ಕುರುಕ್ಷೇತ್ರ' ಹಬ್ಬಕ್ಕೆ ಸಿದ್ದವಾದ ಅಭಿಮಾನಿಗಳು

Posted By:
Subscribe to Filmibeat Kannada

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯಿಸಿರುವ 50ನೇ ಸಿನಿಮಾ 'ಕುರುಕ್ಷೇತ್ರ' ಇಷ್ಟೋತ್ತಿಗಾಗಲೇ ಬಿಡುಗಡೆಯಾಗಬೇಕಿತ್ತು. ಆದ್ರೆ, ಚುನಾವಣೆ ಘೋಷಣೆ ಆದ ಹಿನ್ನೆಲೆ ರಿಲೀಸ್ ದಿನಾಂಕ ಮುಂದಕ್ಕೆ ಹೋಗಿದೆ.

ಸರಿ ಆಡಿಯೋ ಆದ್ರೂ ಬಿಡುಗಡೆಯಾಗುತ್ತಾ ಎಂಬ ನಿರೀಕ್ಷೆಯಲ್ಲಿರುವ ಅಭಿಮಾನಿಗಳಿಗೆ ಈಗ ಸಿಹಿ ಸುದ್ದಿ ಸಿಕ್ಕಿದೆ. ಎಲ್ಲ ಅಂದುಕೊಂಡರೇ ಇದೇ ತಿಂಗಳಲ್ಲಿ ಕುರುಕ್ಷೇತ್ರ ಹಾಡುಗಳು ಹೊರಬರಲಿವೆಯಂತೆ. ಸದ್ಯದ ಮಾಹಿತಿ ಪ್ರಕಾರ ಮೇ 12 ರಂದು ಚುನಾವಣೆ ಇದೆ. ಅದೇ ದಿನ ಸಂಜೆ ಅಥವಾ ಮೇ 13ರಂದು ಆಡಿಯೋ ರಿಲೀಸ್ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

'ಕುರುಕ್ಷೇತ್ರ' ನಂತರ ಮತ್ತೊಂದು ಪೌರಾಣಿಕ ಸಿನಿಮಾದಲ್ಲಿ ದರ್ಶನ್.!

ಈಗಾಗಲೇ 'ಕುರುಕ್ಷೇತ್ರ' ಚಿತ್ರದ ಆಡಿಯೋ ಹಕ್ಕು ದುಬಾರಿ ಬೆಲೆಗೆ ಮಾರಾಟವಾಗಿದ್ದು, ಲಹರಿ ಸಂಸ್ಥೆ ಖರೀದಿಸಿದೆಯಂತೆ. ವಿ ಹರಿಕೃಷ್ಣ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದು, ವಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದಾರೆ. ಚಿತ್ರಕ್ಕೆ ತಕ್ಕಂತೆ ಹಾಡುಗಳು ಮತ್ತು ಶ್ಲೋಕ, ಪದ್ಯಗಳು ಚಿತ್ರದಲ್ಲಿದೆಯಂತೆ.

Darshan kurukshetra audio release on may 12th

'ಕುರುಕ್ಷೇತ್ರ' ಸಿನಿಮಾ ಬಗ್ಗೆ ಇತ್ತೀಚಿನ ಅಪ್ಡೇಟ್ ಇಲ್ಲಿದೆ

ಈಗಾಗಲೇ ಚಿತ್ರದ ಡಬ್ಬಿಂಗ್ ಕೆಲಸವೂ ಪೂರ್ತಿಯಾಗಿದ್ದು, ಚಿತ್ರದ ಪೈನಲ್ ಕಾಪಿ ಸಿದ್ದವಾಗಿದೆಯಂತೆ. ಈಗೇನಿದ್ರು ಸೆನ್ಸಾರ್ ಮಂಡಳಿ ಎದುರು ಸಿನಿಮಾ ಹೋಗಲಿದ್ದು, ಆದಷ್ಟೂ ಬೇಗ ಬಿಡುಗಡೆ ದಿನಾಂಕವೂ ಘೋಷಣೆಯಾಗಲಿದೆ.

ಇನ್ನುಳಿದಂತೆ ನಾಗಣ್ಣ ಈ ಚಿತ್ರಕ್ಕೆ ಆಕ್ಷನ್ ಹೇಳುತ್ತಿದ್ದು, ಮುನಿರತ್ನ ಅವರ ಬಂಡವಾಳ ಹಾಕಿದ್ದಾರೆ. ಅರ್ಜುನ್ ಸರ್ಜಾ (ಕರ್ಣ), ರವಿಚಂದ್ರನ್ (ಶ್ರೀಕೃಷ್ಣ), ಅಂಬರೀಶ್ (ಭೀಷ್ಮ), ಸೋನು ಸೂದ್ (ಅರ್ಜುನ), ನಿಖಿಲ್ ಕುಮಾರ್ (ಅಭಿಮನ್ಯು), ಮೇಘನಾ ರಾಜ್ (ಭಾನುಮತಿ), ಸ್ನೇಹಾ (ದ್ರೌಪದಿ) ಸೇರಿದಂತೆ ಹಲವರು ಅಭಿನಯಿಸುತ್ತಿದ್ದಾರೆ.

English summary
The music rights of the mythological drama Muniratna Kurukshetra has been sold to Lahari audio company for a huge price. The makers, meanwhile are preparing for a mega audio launch, which in all likelihood, will take place by may 12th.

Kannada Photos

Go to : More Photos

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada

X