Raaka: ಅಲ್ಲು ಅರ್ಜುನ್‌ಗೆ ₹175 ಕೋಟಿ.. ದೀಪಿಕಾ ಪಡುಕೋಣೆ, ರಶ್ಮಿಕಾ ಮಂದಣ್ಣಗೆ ಎಷ್ಟು ಕೋಟಿ?
'ಪುಷ್ಪ 2' ಬಳಿಕ ಅಲ್ಲು ಅರ್ಜುನ್ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಶೂಟಿಂಗ್ ನಡೆಯುತ್ತಿದೆ. ಅಟ್ಲೀ ನಿರ್ದೇಶಿಸುತ್ತಿರುವ ಈ ಸಿನಿಮಾದ ಟೈಟಲ್ ಇತ್ತೀಚೆಗಷ್ಟೇ ರಿಲೀಸ್ ಆಗಿತ್ತು. ಅಲ್ಲು ಅರ್ಜುನ್ ಹಾಗೂ ಅಟ್ಲಿ ಕಾಂಬಿನೇಷನ್‌ನ ಈ ಸಿನಿಮಾಗೆ 'ರಾಕಾ' ಎಂದು ಟೈಟಲ್ ಇಡಲಾಗಿದೆ. ಈ ಮಧ್ಯೆ ಸಿನಿಮಾದಲ್ಲಿ ನಟಿಸುತ್ತಿರುವ ಪ್ರಮುಖ ಪಾತ್ರಗಳ ಸಂಭಾವನೆ ಬಗ್ಗೆನೂ ಚರ್ಚೆಯಾಗುತ್ತಿದೆ.
'ರಾಕಾ' ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗುತ್ತಿದ್ದಂತೆ ಇಂಡಸ್ಟ್ರಿಯಲ್ಲಿ ಸಿನಿಮಾದ ಪಾತ್ರಗಳು ಪಡೆದಿರಯವ ಸಂಭಾವನೆ ಬಗ್ಗೆನೇ ಚರ್ಚೆಯಾಗುತ್ತಿದೆ. ದುಬಾರಿ ಮೊತ್ತದಲ್ಲಿ ನಿರ್ಮಾಣ ಆಗುತ್ತಿರುವ ಈ ಸಿನಿಮಾದಲ್ಲಿ ಭಾರತೀಯ ಚಿತ್ರರಂಗದ ದೊಡ್ಡ ದೊಡ್ಡ ಹೆಸರುಗಳೇ ಇವೆ. 'ರಾಕಾ' ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದರಿಂದ ಅವರಿಗೆ ನೀಡಿರುವ ಸಂಭಾವನೆ ಕೂಡ ಅಷ್ಟೇ ದೊಡ್ಡದಿದೆ ಎಂದು ಹೇಳಲಾಗುತ್ತಿದೆ.

ಸಿನಿಮಾ ಇಂಡಸ್ಟ್ರಿಯಲ್ಲಿ 'ರಾಕಾ' ಸಿನಿಮಾಗೆ ನೀಡಲಾಗುತ್ತಿರುವ ಸಂಭಾವನೆ ಪಟ್ಟಿಯ ಬಗ್ಗೆ ಚರ್ಚೆ ನಡೆಯುತ್ತಿದೆ. ಈಗಾಗಲೇ ಅಲ್ಲು ಅರ್ಜುನ್‌ಗೆ ಈ ಸಿನಿಮಾಗಾಗಿ 175 ಕೋಟಿ ರೂಪಾಯಿ ಸಂಭಾವನೆ ಸಿಕ್ಕಿದೆ ಎಂದು ಗುಲ್ಲೆದಿದ್ದೆ. ಈಗ ಇದೇ ಸಿನಿಮಾದಲ್ಲಿ ನಟಿಸುತ್ತಿರುವ ದೀಪಿಕಾ ಪಡುಕೋಣೆ ಹಾಗೂ ರಶ್ಮಿಕಾ ಮಂದಣ್ಣ ಇಬ್ಬರು ನಾಯಕಿಯರ ಸಂಭಾವನೆ ಬಗ್ಗೆನೂ ಚರ್ಚೆಯಾಗುತ್ತಿದೆ.
ದೀಪಿಕಾ ಪಡುಕೋಣೆ ಹಾಗೂ ರಶ್ಮಿಕಾ ಮಂದಣ್ಣ ಇವರಿಬ್ಬರ ಸಂಭಾವನೆ ಬಗ್ಗೆ ಹೇಳುವುದಕ್ಕೂ ಮುನ್ನ ತೆಲುಗು ಚಿತ್ರರಂಗದ ಬಗ್ಗೆ ಆಗುತ್ತಿರುವ ಚರ್ಚೆ ಆಗುತ್ತಿದೆ. ಅದೇನು ಅಂತ ನೋಡುವುದಾರೇ, ತೆಲುಗು ಸಿನಿಮಾಗಳಲ್ಲಿ ನಟಿಸುವ ನಟಿಯರಿಗೆ ಹೆಚ್ಚು ಸಂಭಾವನೆ ಸಿಗುತ್ತಿದೆ. ಬಾಲಿವುಡ್ ಸೇರಿದಂತೆ ಬೇರೆ ಭಾಷೆಯ ಸಿನಿಮಾದ ನಾಯಕಿಯರಿಗೆ ಹೋಲಿಕೆ ಮಾಡಿದರೆ, ನಟಿಯರಿಗೆ ಹೆಚ್ಚು ಹಣ ಇಲ್ಲೇ ಸಿಗುತ್ತಿದೆ ಅನ್ನೋ ವಾದ ಹುಟ್ಟಿಕೊಂಡಿದೆ.
ಬಾಲಿವುಡ್‌ಗೆ ದೊಡ್ಡ ಮಾರ್ಕೆಟ್ ಇದೆ. ಆದರೆ, ತೆಲುಗು ಸಿನಿಮಾಗಳಿಗೆ ಅದಕ್ಕಿಂತೂ ದೊಡ್ಡ ಮಾರುಕಟ್ಟೆ ಸೃಷ್ಟಿಯಾಗಿದೆ ಅನ್ನೋದು ಸದ್ಯದ ವಾದ. ಭಾರತ ಅಷ್ಟೇ ಅಲ್ಲದೆ ಅಮೆರಿಕ, ಆಸ್ಟ್ರೇಲಿಯಾ ಸೇರಿದಂತೆ ಬೇರೆ ಬೇರೆ ದೇಶಗಳಲ್ಲಿ ಕಲೆಕ್ಷನ್ ಉತ್ತಮವಾಗಿ ಆಗುತ್ತೆ. ಹೀಗಾಗಿ ಸಿನಿಮಾಗಳ ಬಜೆಟ್‌ನಲ್ಲಿ ಏರಿಕೆಯಾಗಿದೆ. ಹಾಗೇ ರೆಮ್ಯೂನೆರಷನ್ ಕೂಡ ಹೆಚ್ಚಾಗಿದೆ ಅನ್ನೋದು ವಾದ.

ಸದ್ಯಕ್ಕೀಗ 'ರಾಕಾ' ಸಿನಿಮಾದಲ್ಲಿ ನಟಿಸುತ್ತಿರುವ ದೀಪಿಕಾ ಪಡುಕೋಣೆ ಹಾಗೂ ರಶ್ಮಿಕಾ ಮಂದಣ್ಣ ಇಬ್ಬರೂ ಬೃಹತ್ ಮೊತ್ತದ ಸಂಭಾವನೆ ಸಿಕ್ಕಿದೆ ಎಂದು ವರದಿಯಾಗಿದೆ. ಎಕಾನಮಿಕ್ ಟೈಮ್ಸ್ ವರದಿ ಮಾಡಿರುವಂತೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ₹20 ರಿಂದ ₹25 ಕೋಟಿ ಸಂಭಾವನೆ ಪಡೆದಿದ್ದಾರೆ. ಅದೇ, ನೆಗೆಟಿವ್ ಶೇಡ್‌ನಲ್ಲಿ ನಟಿಸುತ್ತಿದ್ದಾರೆಂದು ಹೇಳಲಾಗುತ್ತಿರುವ ರಶ್ಮಿಕಾ ಮಂದಣ್ಣ ₹5 ಕೋಟಿಯಿಂದ ₹7 ಕೋಟಿವರೆಗೂ ಸಂಭಾವನೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಚಿತ್ರತಂಡ ಇನ್ನೂ ಅಧಿಕೃತವಾಗಿ ಈ ಬಗ್ಗೆ ಹೇಳಿಕೆ ನೀಡಬೇಕಿದೆ.
ಕೆಲ ಮಾಧ್ಯಮಗಳು ವರದಿ ಮಾಡಿದಂತೆ 'ರಾಕಾ' ಸಿನಿಮಾವನ್ನು ಸುಮಾರು ₹800 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಇದು ಭಾರತದ ಅತ್ಯಂತ ದುಬಾರಿ ಸಿನಿಮಾಗಳಲ್ಲಿ ಒಂದಾಗುವ ಸಾಧ್ಯತೆಯಿದೆ. ಅಲ್ಲು ಅರ್ಜುನ್ 44ನೇ ಹುಟ್ಟುಹಬ್ಬಕ್ಕೆ ರಿಲೀಸ್ ಆಗಿರುವ ಫಸ್ಟ್ ಲುಕ್ ಪೋಸ್ಟರ್ ಸಿನಿಮಾ ಬಜೆಟ್ ಬಗ್ಗೆ ಸುಳಿವು ನೀಡಿದೆ. ಅಲ್ಲು ಅರ್ಜುನ್-ಅಟ್ಲಿ ಸಿನಿಮಾ 'ರಾಕಾ' ಭಾರತದ ಮೋಸ್ಟ್ ಎಕ್ಸ್‌ಪೆನ್ಸಿವ್ ಸಿನಿಮಾ ಆಗುವುದರಲ್ಲಿ ಡೌಟೇ ಇಲ್ಲ ಅಂತ ಟ್ರೇಡ್ ಎಕ್ಸ್‌ಪರ್ಟ್‌ಗಳು ಕೂಡ ಅಭಿಪ್ರಾಯ ಪಟ್ಟಿದ್ದಾರೆ.


Click it and Unblock the Notifications















