ಆಕ್ಷನ್ ಪ್ರಿನ್ಸ್ ಬಾಲಿವುಡ್ ಎಂಟ್ರಿ? ಮಲ್ಟಿಸ್ಟಾರರ್ ಚಿತ್ರದಲ್ಲಿ ಹೀರೊ ಸಹೋದರನಾಗಿ ಧ್ರುವ?
ಸ್ಯಾಂಡಲ್‌ವುಡ್ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಎರಡು ದಿನಗಳಲ್ಲಿ ಅಭಿಮಾನಿಗಳಿಗೆ ಕ್ರೇಜಿ ನ್ಯೂಸ್ ಕೊಟ್ಟಿದ್ದಾರೆ. 'ಮಾರ್ಟಿನ್' ಸಿನಿಮಾ ರಿಲೀಸ್ ಡೇಟ್ ಘೋಷಣೆ ಆಗಿದೆ. 'KD' ಸಿನಿಮಾ ಆಡಿಯೋ ರೈಟ್ಸ್ ಬಗ್ಗೆ ಮಾಹಿತಿ, ಟೀಸರ್- ಫಸ್ಟ್ ಸಾಂಗ್ ರಿಲೀಸ್ ಡೇಟ್ ರಿವೀಲ್ ಆಗಿದೆ. ಡಿಸೆಂಬರ್‌ಗೆ ಸಿನಿಮಾ ಬರುತ್ತೆ ಎಂದು ಚಿತ್ರತಂಡ ಹೇಳಿದೆ.
ಚಿತ್ರರಂಗಕ್ಕೆ ಬಂದ 12 ವರ್ಷಗಳಲ್ಲಿ ಧ್ರುವ ಸರ್ಜಾ 4 ಸಿನಿಮಾಗಳಲ್ಲಿ ಮಾತ್ರ ನಟಿಸಿದ್ದಾರೆ ಎನ್ನುವ ಬೇಸರ ಕೆಲವರದ್ದು. ಇದೀಗ 2 ತಿಂಗಳ ಅಂತರದಲ್ಲಿ 'ಮಾರ್ಟಿನ್', 'KD' ಸಿನಿಮಾಗಳ ಮೂಲಕ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ. ಅದಕ್ಕೂ ಮುನ್ನ ಟೀಸರ್, ಸಾಂಗ್ಸ್, ಟ್ರೈಲರ್ ಅಂತೆಲ್ಲಾ ಸಿನಿರಸಿಕರಿಗೆ ಭರ್ಜರಿ ಮನರಂಜನೆ ಕಾದಿದೆ.

ಅಭಿಮಾನಿಗಳ ಪ್ರೀತಿಯ ಆಕ್ಷನ್ ಪ್ರಿನ್ಸ್ ಕನ್ನಡ ಬಿಟ್ಟು ಬೇರೆ ಭಾಷೆ ಸಿನಿಮಾಗಳಲ್ಲಿ ನಟಿಸಿಲ್ಲ. ಇದೀಗ ಧ್ರುವ ಬಾಲಿವುಡ್‌ಗೆ ಎಂಟ್ರಿ ಕೊಡುತ್ತಾರೆ ಎನ್ನುವ ಅಂತೆಕಂತೆ ಸುದ್ದಿ ವೈರಲ್ ಆಗ್ತಿದೆ. ಬಹುನಿರೀಕ್ಷಿತ 'ವಾರ್-2' ಚಿತ್ರದಲ್ಲಿ ಕನ್ನಡದ ನಟ ಬಣ್ಣ ಹಚ್ಚುತ್ತಾರೆ ಎನ್ನಲಾಗ್ತಿದೆ. ತೆಲುಗು ಮಾಧ್ಯಮಗಳಲ್ಲಿ ಕೂಡ ಇಂತಾದೊಂದು ಸುದ್ದಿ ಹರಿದಾಡುತ್ತಿದೆ. ಜ್ಯೂ. ಎನ್‌ಟಿಆರ್ ಸಹೋದರನ ಪಾತ್ರದಲ್ಲಿ ಧ್ರುವ ನಟಿಸುತ್ತಾರೆ ಎಂದು ಗುಲ್ಲಾಗಿದೆ.
ಅಯಾನ್ ಮುಖರ್ಜಿ ನಿರ್ದೇಶನದಲ್ಲಿ 'ವಾರ್-2' ಸಿನಿಮಾ ನಿರ್ಮಾಣವಾಗುತ್ತಿದೆ. ಚಿತ್ರದಲ್ಲಿ ಹೃತಿಕ್ ರೋಷನ್ ಎದುರು ತೆಲುಗು ನಟ ಜ್ಯೂ. ಎನ್‌ಟಿಆರ್ ತೊಡೆ ತಟ್ಟಿದ್ದಾರೆ. ಈಗಾಗಲೇ ಮುಂಬೈನಲ್ಲಿ ಒಂದು ಶೆಡ್ಯೂಲ್ ಚಿತ್ರೀಕರಣ ಸಹ ಮುಗಿದಿದೆ. ಹೃತಿಕ್- ತಾರಕ್ ಕಾಂಬಿನೇಷನ್ ಭಾರೀ ಹೈಪ್ ಕ್ರಿಯೇಟ್ ಮಾಡಿದೆ. 4 ವರ್ಷಗಳ ಹಿಂದೆ ಬಂದಿದ್ದ 'ವಾರ್' ಸಿನಿಮಾ ಬ್ಲಾಕ್‌ಬಸ್ಟರ್ ಹಿಟ್ ಆಗಿತ್ತು.
ಸಿದ್ದಾರ್ಥ್ ಆನಂದ್ ನಿರ್ದೇಶನದ 'ವಾರ್' ಚಿತ್ರದಲ್ಲಿ ಹೃತಿಕ್ ಜೊತೆ ಟೈಗರ್ ಶ್ರಾಫ್ ನಟಿಸಿದ್ದರು. ಚಿತ್ರಕ್ಕೆ ಅದ್ಭುತ ರೆಸ್ಪಾನ್ಸ್ ಸಿಕ್ಕಿತ್ತು. ಯಶ್ ರಾಜ್ ಫಿಲ್ಮ್ಸ್ ಬ್ಯಾನರ್‌ನಲ್ಲಿ ಸಿನಿಮಾ ನಿರ್ಮಾಣವಾಗಿತ್ತು. ಅದೇ ಸರಣಿಯ ಮತ್ತೊಂದು ವೈಆರ್‌ಎಫ್ ಸ್ಪೈ ಯೂನಿವರ್ಸ್‌ಗೆ ಸೇರಿದ ಸಿನಿಮಾ 'ವಾರ್-2'. ಧ್ರುವ ಸರ್ಜಾ ಈ ಚಿತ್ರದಲ್ಲಿ ನಟಿಸುತ್ತಾರೆ, ಆ ಮೂಲಕ ಬಾಲಿವುಡ್‌ಗೆ ಎಂಟ್ರಿ ಕೊಡುತ್ತಾರೆ ಎನ್ನುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

ಹೃತಿಕ್ ರೋಷನ್- ತಾರಕ್ ರೀತಿಯ ಇಬ್ಬರೂ ಸೂಪರ್ ಸ್ಟಾರ್ಸ್ ಇರುವ ಚಿತ್ರದಲ್ಲಿ ಬೇರೆ ಪಾತ್ರಗಳಿಗೆ ಹೆಚ್ಚಿನ ಮಹತ್ವ ಇರಲ್ಲ. ಹಾಗಾಗಿ ಧ್ರುವ ಸರ್ಜಾ ನಟಿಸುತ್ತಾರೆ ಎನ್ನುವುದೆಲ್ಲಾ ಸುಳ್ಳು, ಇದು ಬರೀ ವದಂತಿ ಅಷ್ಟೇ. ಆದರೆ ಜಾನ್ ಅಬ್ರಹಾಂ, ಕಿಯಾರಾ ಅಡ್ವಾನಿ ಚಿತ್ರದಲ್ಲಿ ನಟಿಸೋದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಬಹುಕೋಟಿ ವೆಚ್ಚದಲ್ಲಿ ಈ ಆಕ್ಷನ್ ಥ್ರಿಲ್ಲರ್ ಸಿನಿಮಾ ಮೂಡಿ ಬರುತ್ತಿದೆ.
ಮುಂದಿನ ವರ್ಷ ಆಗಸ್ಟ್ 14ಕ್ಕೆ 'ವಾರ್-2' ಸಿನಿಮಾ ತೆರೆಗೆ ಬರಲಿದೆ. ಈ ಬಾರಿ ತೆಲುಗು ನಟ ಜ್ಯೂ. ಎನ್‌ಟಿಆರ್ ಸಹ ನಟಿಸಿರುವುದರಿಂದ ಸೌತ್‌ನಲ್ಲೂ ಸಿನಿಮಾ ನಿರೀಕ್ಷೆ ಹುಟ್ಟುಹಾಕಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ 5 ಭಾಷೆಗಳಲ್ಲಿ ಸಿನಿಮಾ ರಿಲೀಸ್ ಮಾಡುವ ಸಾಧ್ಯತೆಯಿದೆ. ಇನ್ನು ಧ್ರುವ ಸರ್ಜಾ ನಟನೆಯ 'ಮಾರ್ಟಿನ್' ಸಿನಿಮಾ ಅಕ್ಟೋಬರ್ 11ಕ್ಕೆ ತೆರೆಗೆ ಬರಲಿದೆ.
ಜ್ಯೂ. ಎನ್‌ಟಿಆರ್ ಅಭಿನಯದ 'ದೇವರ' ಚಿತ್ರ ಅಕ್ಟೋಬರ್ 10ಕ್ಕೆ ರಿಲೀಸ್ ಆಗುತ್ತಿದೆ. ಒಂದು ದಿನದ ಅಂತರದಲ್ಲಿ 'ಮಾರ್ಟಿನ್' ಆಗಮನವಾಗಲಿದೆ. ದಸರಾ ವೀಕೆಂಡ್ ಎನ್ನುವ ಕಾರಣಕ್ಕೆ ಆ ಡೇಟ್ ಫಿಕ್ಸ್ ಮಾಡಲಾಗಿದೆ. ಈಗಾಗಲೇ 'ಮಾರ್ಟಿನ್' ಟೀಸರ್ ಸೂಪರ್ ಹಿಟ್ ಆಗಿ ದಾಖಲೆ ಬರೆದಿದೆ. ಆದರೆ ಸಿನಿಮಾ ಬಹಳ ತಡವಾಗುತ್ತಿರುವುದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. 'ಮಾರ್ಟಿನ್' ಬೆನ್ನಲ್ಲೇ ಡಿಸೆಂಬರ್ ಫಸ್ಟ್ ವೀಕ್‌ನಲ್ಲಿ ಜೋಗಿ ಪ್ರೇಮ್ ನಿರ್ದೇಶನದಲ್ಲಿ ಧ್ರುವ ನಟನೆಯ 'KD' ತೆರೆಗೆಪ್ಪಳಿಸಲಿದೆ.


Click it and Unblock the Notifications











