Just In
Don't Miss!
- News
ಕರ್ನಾಟಕದಲ್ಲಿ 573 ಕೊರೊನಾ ಸೋಂಕಿತರು ಪತ್ತೆ
- Finance
ಬಜೆಟ್ 2021: ಐ.ಟಿ. ಫೈಲಿಂಗ್ ನಲ್ಲಿ PAN ಕಾರ್ಡ್ ಗೆ ಏಕಿಷ್ಟು ಮಹತ್ವ, ಏನಿದರ ವಿಶೇಷ?
- Sports
ಐಪಿಎಲ್ 2021: ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಸಂಗಕ್ಕರ ಬಲ
- Automobiles
ಕರೋಕ್ ಎಸ್ಯುವಿಯನ್ನು ಸ್ಥಳೀಯವಾಗಿ ಅಭಿವೃದ್ಧಿಪಡಿಸಲಿದೆ ಸ್ಕೋಡಾ
- Lifestyle
ವಾರ ಭವಿಷ್ಯ: 12 ರಾಶಿಗಳ ರಾಶಿ ಫಲ ಹೇಗಿದೆ ನೋಡಿ
- Education
NIT Recruitment 2021: ರಿಸರ್ಚ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೊಂಬಾಳೆ ಫಿಲಂಸ್ ಘೋಷಣೆ ಮಾಡಲಿರುವ ಪ್ರಾಜೆಕ್ಟ್ ಇದೇನಾ?
ಕೆಜಿಎಫ್ ಚಿತ್ರದ ಮೂಲಕ ಇಡೀ ದೇಶದ ಗಮನ ಸೆಳೆದಿರುವ ಹೊಂಬಾಳೆ ಫಿಲಂಸ್ ನಿರ್ಮಾಣ ಸಂಸ್ಥೆ ತಮ್ಮ ಮುಂದಿನ ಚಿತ್ರವನ್ನು ಘೋಷಣೆ ಮಾಡುತ್ತಿದೆ. ಡಿಸೆಂಬರ್ 2 ರಂದು ಮಧ್ಯಾಹ್ನ ಅಧಿಕೃತವಾಗಿ ಹೊಸ ಸಿನಿಮಾ ಪ್ರಕಟಿಸಲಿದ್ದಾರೆ. ಕೆಜಿಎಫ್ ಚಾಪ್ಟರ್ 2 ನಂತರ ಹೊಂಬಾಳೆ ಪ್ರೊಡಕ್ಷನ್ ನಿರ್ಮಿಸಲಿರುವ ಚಿತ್ರ ಯಾವುದು ಎಂಬ ಕುತೂಹಲ ಕಾಡುತ್ತಿದೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹಲವರು ರೀತಿಯ ಚರ್ಚೆ ನಡೆಯುತ್ತಿದೆ. ಪುನೀತ್ ರಾಜ್ ಕುಮಾರ್ ಮತ್ತು ಸಂತೋಷ್ ಆನಂದ್ ರಾಮ್ ಹ್ಯಾಟ್ರಿಕ್ ಚಿತ್ರ ಇದಾಗಲಿದೆ ಎಂದು ಕೆಲವರು ಕಾಮೆಂಟ್ ಮಾಡ್ತಿದ್ದಾರೆ. ಯಶ್ ಜೊತೆಯೇ ಇನ್ನೊಂದು ಸಿನಿಮಾ ಮಾಡಬಹುದು ಎಂದು ಹಲವರು ಹೇಳುತ್ತಿದ್ದಾರೆ. ಪರಭಾಷೆ ನಟನ ಜೊತೆ ಮುಂದಿನ ಸಿನಿಮಾ ಎಂದು ಸಹ ಅಭಿಪ್ರಾಯ ಕೇಳಿ ಬರುತ್ತಿದೆ. ಇದೆಲ್ಲದರ ನಡುವೆ ಬಹುಶಃ ಆ ಪ್ರಾಜೆಕ್ಟ್ ಅದೇ ಇರಬಹುದು ಎಂದು ಹೇಳಲಾಗುತ್ತಿದೆ. ಮುಂದೆ ಓದಿ....
ಸದ್ದಿಲ್ಲದೇ ಆ ನಟನನ್ನು ಭೇಟಿ ಮಾಡಿದ ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್?

ಪ್ರಶಾಂತ್ ನೀಲ್ ನಿರ್ದೇಶನ?
ಕೆಜಿಎಫ್ ಚಿತ್ರಗಳ ಮೂಲಕ ತಮ್ಮ ನಿರ್ಮಾಣ ಸಂಸ್ಥೆಯನ್ನು ಪ್ಯಾನ್ ಇಂಡಿಯಾ ಮಟ್ಟಕ್ಕೆ ತಂದು ನಿಲ್ಲಿಸಿರುವ ನಿರ್ದೇಶಕ ಪ್ರಶಾಂತ್ ನೀಲ್ ಜೊತೆಯಲ್ಲಿಯೇ ಮುಂದಿನ ಚಿತ್ರವನ್ನು ಮಾಡುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗುತ್ತಿದೆ. ಒಂದು ವೇಳೆ ಪ್ರಶಾಂತ್ ನೀಲ್ ಅವರೇ ನಿರ್ದೇಶನ ಮಾಡಿದ್ರೆ ಹೀರೋ ಯಾರು ಎನ್ನುವುದಕ್ಕೆ ತೆಲುಗಿನ ಆ ನಟನ ಕಡೆ ಬೆರಳು ತೋರಿಸಲಾಗುತ್ತಿದೆ.

ಪ್ರಭಾಸ್ ಹೀರೋ ಆಗಬಹುದಾ?
ಪ್ರಶಾಂತ್ ನೀಲ್ ನಿರ್ದೇಶನ ಮಾಡಿದ್ರೆ ಆ ಚಿತ್ರಕ್ಕೆ ಬಾಹುಬಲಿ ನಟ ಪ್ರಭಾಸ್ ನಾಯಕರಾಗಬಹುದು ಎಂದು ಹೇಳಲಾಗುತ್ತಿದೆ. ಒಂದು ವೇಳೆ ಪ್ರಭಾಸ್ ಇಲ್ಲವಾದರೂ ಜೂನಿಯರ್ ಎನ್ ಟಿ ಆರ್ ಹೆಸರು ಬರಬಹುದು ಎಂಬ ನಿರೀಕ್ಷೆಯೂ ಇದೆ.
ಹೊಂಬಾಳೆ ಫಿಲಂಸ್ ಮುಂದಿನ ಚಿತ್ರ: ಕನ್ನಡಿಗರಿಗೆ ಗೊಂದಲ, ಅನುಮಾನ!

ಪ್ರಶಾಂತ್-ಪ್ರಭಾಸ್ ಭೇಟಿ!
ನಟ ಪ್ರಭಾಸ್ ಅವರನ್ನು ನಿರ್ದೇಶಕ ಪ್ರಶಾಂತ್ ನೀಲ್ ಇಬ್ಬರು ಸಿನಿಮಾ ಮಾಡುವ ತಯಾರಿ ನಡೆಸುತ್ತಿದ್ದಾರೆ ಎಂಬ ಗುಮಾನಿ ಬಹಳ ದಿನಗಳಿಂದಲೂ ಚರ್ಚೆಯಲ್ಲಿತ್ತು. ಇತ್ತೀಚಿಗಷ್ಟೆ ಈ ವಿಚಾರವಾಗಿ ಚರ್ಚಿಸಲು ಇಬ್ಬರು ಭೇಟಿ ಮಾಡಿದ್ದರು ಎಂಬ ಸುದ್ದಿಯೂ ಹೊರಬಿತ್ತು. ಆದ್ರೆ, ಫೋಟೋಗಳು ಎಲ್ಲಿಯೂ ಬಹಿರಂಗವಾಗಿರಲಿಲ್ಲ. ಇದೀಗ, ಹೊಂಬಾಳೆ ಫಿಲಂಸ್ ನಿರ್ಮಿಸಲಿರುವ ಚಿತ್ರ ಇದೇ ಎನ್ನಲಾಗುತ್ತಿದೆ.

ಕನ್ನಡದವರೇ ಇರಲಿ ಎನ್ನುತ್ತಿದ್ದಾರೆ ಫ್ಯಾನ್ಸ್
ಪ್ರಭಾಸ್ ಮತ್ತು ಪ್ರಶಾಂತ್ ನೀಲ್ ಪ್ರಾಜೆಕ್ಟ್ ಬಹುತೇಕ ಖಚಿತ ಎಂಬ ಸುದ್ದಿಯನ್ನು ಗಂಭೀರವಾಗಿ ಪರಿಗಣಿಸಿರುವ ಅಭಿಮಾನಿಗಳು, ಕನ್ನಡ ನಟನ ಜೊತೆಯೇ ಮುಂದಿನ ಸಿನಿಮಾ ಮಾಡಿ ಎಂದು ಬೇಡಿಕೆಯಿಟ್ಟಿದ್ದಾರೆ. ಡಿಸೆಂಬರ್ 2 ರಂದು ಮಧ್ಯಾಹ್ನ ಈ ಕುರಿತು ಅಧಿಕೃತವಾಗಿ ಪ್ರಕಟವಾಗುವವರೆಗೂ ಇದರ ಬಗ್ಗೆ ಸ್ಪಷ್ಟನೆ ಇಲ್ಲ.