RRR ಚಿತ್ರದಲ್ಲಿ ಕ್ರಾಂತಿಕಾರಿ ಭಗತ್ ಸಿಂಗ್ ಪಾತ್ರದಲ್ಲಿ ಬಾಲಿವುಡ್ ನಟ ಅಜಯ್ ದೇವ್ಗನ್.?

'ಬಾಹುಬಲಿ' ಬಳಿಕ ಟಾಲಿವುಡ್ ನಿರ್ದೇಶಕ ಎಸ್.ಎಸ್.ರಾಜಮೌಳಿ ಕೈಗೆತ್ತಿಕೊಂಡಿರುವ ಚಿತ್ರ 'ಆರ್.ಆರ್.ಆರ್'. ಐತಿಹಾಸಿಕ ಆಕ್ಷನ್ ಸಿನಿಮಾ ಇದಾಗಿದ್ದು, 'ಆರ್.ಆರ್.ಆರ್' ಚಿತ್ರದ ಚಿತ್ರೀಕರಣ ಹೈದರಾಬಾದ್ ನಲ್ಲಿ ಬಿರುಸಿನಿಂದ ಸಾಗುತ್ತಿದೆ.

ಜೂನಿಯರ್ ಎನ್.ಟಿ.ಆರ್, ರಾಮ್ ಚರಣ್ ತೇಜ, ಆಲಿಯಾ ಭಟ್, ಸಮುದ್ರಖಣಿ, ರಾಹುಲ್ ರಾಮಕೃಷ್ಣ, ರೇ ಸ್ಟೀವೆನ್ಸನ್, ಓಲಿವಿಯಾ ಮೊರಿಸ್ ಸೇರಿದಂತೆ ದೊಡ್ಡ ತಾರಾಬಳಗ ಹೊಂದಿರುವ 'ಆರ್.ಆರ್.ಆರ್' ಚಿತ್ರತಂಡದಕ್ಕೆ ಇದೀಗ ಬಾಲಿವುಡ್ ನಟ ಅಜಯ್ ದೇವ್ಗನ್ ಸೇರಿಕೊಂಡಿದ್ದಾರೆ.

ನಿನ್ನೆಯಷ್ಟೇ ಹೈದರಾಬಾದ್ ಗೆ ಬಂದಿಳಿದ ಅಜಯ್ ದೇವ್ಗನ್, 'ಆರ್.ಆರ್.ಆರ್' ಚಿತ್ರದ ಶೂಟಿಂಗ್ ನಲ್ಲಿ ಪಾಲ್ಗೊಂಡಿದ್ದಾರೆ. ಸಿನಿಮಾದ ವಿಶೇಷ ಪಾತ್ರದಲ್ಲಿ ಅಜಯ್ ದೇವ್ಗನ್ ಕಾಣಿಸಿಕೊಳ್ಳಲಿದ್ದಾರೆ ಎಂದಷ್ಟೇ ಚಿತ್ರತಂಡ ಹೇಳಿಕೊಂಡಿದೆ.

Is Ajay Devgan Playing Bhagat Singh In RRR.?

ಆದ್ರೀಗ ಹೊರಬಿದ್ದಿರುವ ಮಾಹಿತಿ ಪ್ರಕಾರ, 'ಆರ್.ಆರ್.ಆರ್' ಚಿತ್ರದಲ್ಲಿ ಅಜಯ್ ದೇವ್ಗನ್ 'ಕ್ರಾಂತಿಕಾರಿ ಭಗತ್ ಸಿಂಗ್' ಪಾತ್ರಕ್ಕೆ ಜೀವ ತುಂಬಲಿದ್ದಾರಂತೆ. ಸ್ವಾತಂತ್ರ್ಯ ಹೋರಾಟದ ಸುತ್ತ ಹೆಣೆದಿರುವ 'ಆರ್.ಆರ್.ಆರ್' ಚಿತ್ರಕಥೆಯಲ್ಲಿ ಭಗತ್ ಸಿಂಗ್ ಆಗಿ ಅಜಯ್ ದೇವ್ಗನ್ ಮಿಂಚಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

'ಆರ್.ಆರ್.ಆರ್' ಚಿತ್ರದಲ್ಲಿ ಬ್ರಿಟೀಷರ ವಿರುದ್ಧ ಸಮರ ಸಾರಿದ್ದ ಸ್ವಾತಂತ್ರ್ಯ ಹೋರಾಟಗಾರ ಕೋಮರಾಮ್ ಭೀಮ್ ಆಗಿ ಜೂ.ಎನ್.ಟಿ.ಆರ್ ಕಾಣಿಸಿಕೊಂಡರೆ, ಅಲ್ಲುರಿ ಸೀತಾರಾಮರಾಜು ಪಾತ್ರಕ್ಕೆ ರಾಮ್ ಚರಣ್ ತೇಜಾ ಬಣ್ಣ ಹಚ್ಚಿದ್ದಾರೆ.

ಡಿ.ವಿ.ವಿ ದಾನಯ್ಯ ನಿರ್ಮಾಣ ಮಾಡುತ್ತಿರುವ 'ಆರ್.ಆರ್.ಆರ್' 400 ಕೋಟಿ ರೂಪಾಯಿ ಬಜೆಟ್ ನಲ್ಲಿ ಸಿದ್ಧವಾಗುತ್ತಿದೆ. ಎಂ.ಎಂ.ಕೀರವಾಣಿ ಸಂಗೀತ ನೀಡಲಿರುವ ಈ ಚಿತ್ರ ಇದೇ ವರ್ಷದ ಜುಲೈ ತಿಂಗಳಲ್ಲಿ ತೆರೆಗೆ ಬರಲಿದೆ.

More from Filmibeat

English summary
Is Bollywood Actor Ajay Devgan playing Bhagat Singh in RRR.?
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X