Just In
Don't Miss!
- Automobiles
ಬಿಡುಗಡೆಗೆ ಸಜ್ಜಾಗುತ್ತಿದೆ 2021ರ ಮಾರುತಿ ಎಕ್ಸ್ಎಲ್5 ಕಾರು
- News
ನಮಗೆ ಮಾತ್ರ ಏಕೆ ಕೋವ್ಯಾಕ್ಸಿನ್ ಲಸಿಕೆ?: ಸರ್ಕಾರಕ್ಕೆ ನಿವಾಸಿ ವೈದ್ಯರ ಪ್ರಶ್ನೆ
- Sports
ಭಾರತ vs ಆಸ್ಟ್ರೇಲಿಯಾ: ಅಂತಿಮ ಟೆಸ್ಟ್ ಪಂದ್ಯ ಗೆಲ್ಲಲು ಕಾರಣವಾದ ಐದು ಅಂಶಗಳು
- Lifestyle
ಚೀನಾದ ಐಸ್ ಕ್ರೀಮ್ ನಲ್ಲಿ ಕೊರೊನಾ ವೈರಸ್ ಪತ್ತೆ!!!
- Finance
ಷೇರುಪೇಟೆಯಲ್ಲಿ ಉತ್ಸಾಹ; ಹೂಡಿಕೆದಾರರ ಸಂಪತ್ತು 3.50 ಲಕ್ಷ ಕೋಟಿ ರು. ಹೆಚ್ಚಳ
- Education
NBT Recruitment 2021: 26 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಪ್ರಭಾಸ್ ಮತ್ತು ಪ್ರಶಾಂತ್ ನೀಲ್ 'ಸಲಾರ್' ಸಿನಿಮಾಗೆ ವಿಲನ್ ಆಗ್ತಾರಾ ಈ ಸ್ಟಾರ್ ನಟ?
ಸ್ಯಾಂಡಲ್ ವುಡ್ ನ ನಿರ್ದೇಶಕ ಪ್ರಶಾಂತ್ ನೀಲ್ ಸದ್ಯ ಕೆಜಿಎಫ್-2 ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಕೆಜಿಎಫ್-2 ಮುಗಿಸಿ ತೆಲುಗು ಚಿತ್ರರಂಗದ ಕಡೆ ಮುಖ ಮಾಡಲಿದ್ದಾರೆ. ಈಗಾಗಲೇ ಪ್ರಭಾಸ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ನ ಸಲಾರ್ ಸಿನಿಮಾ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ.
ಕೆಜಿಎಫ್-2 ಸಿನಿಮಾದ ನಡುವೆಯೂ ಪ್ರಶಾಂತ್ ನೀಲ್ ಮತ್ತು ತಂಡ ಕಲಾವಿದರ ಆಯ್ಕೆಯಲ್ಲಿ ತೊೆಡಗಿಕೊಂಡಿದ್ದಾರೆ. ಬೇರೆ ಬೇರೆ ರಾಜ್ಯಗಳಲ್ಲಿ ಆಡಿಷನ್ ಮಾಡುವ ಮೂಲಕ ಸಲಾರ್ ಗೆ ಹೊಸ ಪ್ರತಿಭೆಗಳನ್ನು ಸೇರಿಕೊಳ್ಳುತ್ತಿದ್ದಾರೆ. ಸಲಾರ್ ಗೆ ಪ್ರಶಾಂತ್ ನೀಲ್ ನಿರ್ದೇಶ, ಪ್ರಭಾಸ್ ಎಂದು ಅನೌನ್ಸ್ ಆದ ಬಳಿಕ ಛಾಯಾಗ್ರಾಹಕ ಭುವನ್ ಗೌಡ ಮತ್ತು ಸಂಗೀತ ನಿರ್ದೇಶಕ ರವಿ ಬಸ್ರೂರು ಎಂಟ್ರಿ ಕೊಟ್ಟಿದ್ದಾರೆ.
ದೀಪಿಕಾ ಪಡುಕೋಣೆ ಹುಟ್ಟುಹಬ್ಬಕ್ಕೆ ವಿಶ್ ಮಾಡಿ 'ಸೂಪರ್ ಸ್ಟಾರ್' ಎಂದು ಕರೆದ ಪ್ರಭಾಸ್

ನಾಯಕಿ ಯಾರಾಗ್ತಾರೆ?
ಸಲಾರ್ ಸಿನಿಮಾಗೆ ನಾಯಕಿಯಗಿ ಬಾಲಿವುಡ್ ನ ಹಾಟ್ ನಟಿ ದಿಶಾ ಪಟಾಣಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ. ಚಿತ್ರದಲ್ಲಿ ಪ್ರಭಾಸ್ ಗೆ ಜೋಡಿಯಾಗಿ ದಿಶಾ ಮಿಂಚಲಿದ್ದಾರೆ ಈ ಮೂಲಕ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಡಲಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಸಿನಿಮಾತಂಡ ಯಾವುದೇ ಮಾಹಿತಿ ಬಹಿರಂಗ ಪಡಿಸಿಲ್ಲ. ಇದೀಗ ಸಿನಿಮಾದಿಂದ ಮತ್ತೊಂದು ಸುದ್ದಿ ಹರಿದಾಡುತ್ತಿದೆ.

ವಿಲನ್ ಆಗ್ತಾರೆ ಜಾನ್ ಅಬ್ರಹಾಂ
ಸಲಾರ್ ಸಿನಿಮಾದಲ್ಲಿ ವಿಲನ್ ಆಗಿ ಬಾಲಿವುಡ್ ನ ಸ್ಟಾರ್ ನಟ ಜಾನ್ ಅಬ್ರಹಾಂ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ. ಹೀಗೊಂದು ಸುದ್ದಿ ಟಾಲಿವುಡ್ ಅಂಗಳದಲ್ಲಿ ಸದ್ದು ಮಾಡುತ್ತಿದೆ. ಈಗಾಗಲೇ ಸಲಾರ್ ತಂಡ ಅಬ್ರಹಾಂ ಭೇಟಿಯಾಗಿ ಮಾತುಕತೆ ನಡೆಸಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಸದ್ಯದಲ್ಲೇ ಚಿತ್ರತಂಡ ಅನೌನ್ಸ್ ಮಾಡಲಿದೆ ಎನ್ನುವ ಸುದ್ದಿ ವೈರಲ್ ಆಗಿದೆ.
ಪ್ರಭಾಸ್ ಮತ್ತು ದೀಪಿಕಾ ಪಡುಕೋಣೆ ಸಿನಿಮಾ ಕಥೆ ಏನಾಯಿತು? ಇಲ್ಲಿದೆ ಮಾಹಿತಿ

ಚಿತ್ರತಂಡದ ಪ್ರತಿಕ್ರಿಯೆಗೆ ಕಾಯುತ್ತಿದ್ದಾರೆ ಅಭಿಮಾನಿಗಳು
ಚಿತ್ರದ ಸಾಕಷ್ಟು ಸುದ್ದಿಗಳು ಹರಿದಾಡುತ್ತಿದೆ. ಆದರೆ ಯಾವುದಕ್ಕೂ ಸಿನಿಮಾತಂಡ ಪ್ರತಿಕ್ರಿಯೆ ನೀಡುತ್ತಿಲ್ಲ. ಸದ್ಯ ಭಾರಿ ಕುತೂಹಲ ಮೂಡಿಸಿರುವ ಸಿನಿಮಾದ ನಾಯಕಿ ಮತ್ತು ವಿಲನ್ ವಿಚಾರದ ಬಗ್ಗೆ ಸಿನಿಮಾತಂಡವೇ ಬಹಿರಂಗಪಡಿಸಬೇಕಿದೆ. ಅಲ್ಲಿಯವರೆಗೂ ಅಭಿಮಾನಿಗಳು ಕಾಯಲೇ ಬೇಕು.

ರಾಧೆ ಶ್ಯಾಮ್ ಬಳಿಕ ಪ್ರಭಾಸ್ ಮುಂದಿನ ಸಿನಿಮಾ ಯಾವುದು?
ಅಂದಹಾಗೆ ಪ್ರಭಾಸ್ ಸದ್ಯ ರಾಧೆ ಶ್ಯಾಮ್ ಸಿನಿಮಾದಲ್ಲಿ ನಿರತರಾಗಿದ್ದಾರೆ. ಈ ಸಿನಿಮಾ ಮುಗಿಯುತ್ತಿದ್ದಂತೆ ಪ್ರಶಾಂತ್ ನೀಲ್ ಜೊತೆ ಸಲಾರ್ ಮತ್ತು ಬಾಲಿವುಡ್ ನಿರ್ದೇಶಕ ಓಂ ರಾವತ್ ಜೊತೆ ಅದಿಪುರುಷ್ ಸಿನಿಮಾ ಪ್ರಾರಂಭ ಮಾಡಲಿದ್ದಾರೆ. ಎರಡು ಭಿನ್ನವಾಗಿರುವ ಸಿನಿಮಾಗಳನ್ನು ಸಾಧ್ಯವಾದಷ್ಟು ಒಟ್ಟೊಟ್ಟಿಗೆ ಚಿತ್ರೀಕರಣ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಮುಂದಿನ ತಿಂಗಳಿಂದ ಸಲಾರ್ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗುವ ಸಾಧ್ಯತೆ ಇದೆ.