'KGF-2' ಹೊಸ ರಿಲೀಸ್ ಡೇಟ್: ಸಂಕ್ರಾಂತಿಗೆ ಸಿನಿಮಾ ಬಿಡುಗಡೆಯಾಗುವ ಸಾಧ್ಯತೆ

By ಫಿಲ್ಮ್ ಡೆಸ್ಕ್

ಕೆಜಿಎಫ್-2 ಚಿತ್ರದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ಸದ್ಯ ಉಡುಪಿಯ ಕಡಲ ತೀರದಲ್ಲಿ ಚಿತ್ರತಂಡ ಬೀಡುಬಿಟ್ಟಿದ್ದು, ಕೊನೆಯ ಹಂತದ ಚಿತ್ರೀಕರಣ ಮಾಡುತ್ತಿದ್ದಾರೆ. ಲಾಕ್ ಡೌನ್ ಬಳಿಕ ಯಶ್ ಮತ್ತು ನಟಿ ಶ್ರೀನಿಧಿ ಶೆಟ್ಟಿ ಶೂಟಿಂಗ್ ನಲ್ಲಿ ಭಾಗಿಯಾಗಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿವೆ.

ಈ ನಡುವೆ ಈಗ ಕೆಜಿಎಫ್-2 ಅಡ್ಡಾದಿಂದ ಮತ್ತೊಂದು ಸುದ್ದಿ ಕೇಳಿಬರುತ್ತಿದೆ. ಇಡೀ ದೇಶವೇ ಕಾತರದಿಂದ ಕಾಯುತ್ತಿರುವ ಕೆಜಿಎಫ್-2 ಸಿನಿಮಾದ ರಿಲೀಸ್ ಡೇಟ್ ಫಿಕ್ಸ ಆಗಿದೆ. ಹೌದು, ಬಹುನಿರೀಕ್ಷೆಯ ಕೆಜಿಎಫ್-2 ಸಿನಿಮಾ ಮುಂದಿನ ವರ್ಷ ಸಂಕ್ರಾಂತಿಗೆ ರಿಲೀಸ್ ಆಗಲಿದೆ ಎಂದು ಹೇಳಲಾಗುತ್ತಿದೆ.

ಮೂಲಗಳ ಪ್ರಕಾರ ಜನವರಿ 14ಕ್ಕೆ ಕೆಜಿಎಫ್-2 ಸಿನಿಮಾದ ರಿಲೀಸ್ ಗೆ ಮುಹೂರ್ತ ಫಿಕ್ಸ್ ಆಗಿದೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಸಿನಿಮಾತಂಡ ಇನ್ನೂ ಅಧಿಕೃತ ಮಾಹಿತಿ ಬಹಿರಂಗಪಡಿಸಿಲ್ಲ. ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದರಿಂದ ಬೇರೆ ಭಾಷೆಯ ದೊಡ್ಡ ಸಿನಿಮಾಗಳ ರಿಲೀಸ್ ಡೇಟ್ ನೋಡಿಕೊಂಡು ಕೆಜಿಎಫ್-2 ರಿಲೀಸ್ ಪ್ಲಾನ್ ಮಾಡಲಾಗುತ್ತಿದೆ.

KGF-2 Likely To Be Release On Janauary 14 In 2021

ಅಂದುಕೊಂಡಂತೆ ಆಗಿದ್ದರೆ ಸಿನಿಮಾ ದಸರಾಗೆ ಬಿಡುಗಡೆಯಾಗಬೇಕಿತ್ತು. ಆದರೆ ಕೊರೊನಾ ಹಾವಳಿಯ ಪರಿಣಾಮ ಸಿನಿಮಾತಂಡದ ಲೆಕ್ಕಾಚಾರವೇ ಬದಲಾಗಿದೆ. ಇದೀಗ ಚಿತ್ರಮಂದಿರಗಳು ತೆರೆಯುತ್ತಿವೆ. ಮತ್ತೆ ಸಿನಿಮಾ ಪ್ರದರ್ಶನ ಕಾಣುತ್ತಿವೆ. ಪರಿಸ್ಥಿತಿ ಸಹಜ ಸ್ಥಿತಿಗೆ ಬಂದರೆ ಜನವರಿಯಲ್ಲಿ ಸಿನಿಮಾ ರಿಲೀಸ್ ಆಗುವುದು ಬಹುತೇಕ ಖಚಿತವಾಗಿದೆ.

ಕೆಜಿಎಫ್-2 ರಿಲೀಸ್ ಬಗ್ಗೆ ಹೊಸ ದಿನಾಂಕ ಕೇಳಿಬರುತ್ತಿರುವುದು ಅಭಿಮಾನಿಗಳಿಗೆ ಸಂತಸ ಮೂಡಿಸಿದೆ. ಸದ್ಯ ಕೊನೆಯ ಹಂತದ ಚಿತ್ರೀಕರಣ ನಡೆಯುತ್ತಿದೆ. ಕರಾವಳಿ ಭಾಗದ ಚಿತ್ರೀಕರಣ ಮುಗಿಸಿ, ಸಿನಿಮಾತಂಡ ಮುಂದಿನ ಹಂತದ ಚಿತ್ರೀಕರಣವನ್ನು ಬೆಂಗಳೂರು ಮತ್ತು ಹೈದರಾಬಾದ್ ನಲ್ಲಿ ಮಾಡಲು ನಿರ್ಧರಿಸಿದೆ. ಈ ತಿಂಗಳ ಕೊನೆಯಲ್ಲಿ ಚಿತ್ರೀಕರಣ ಮುಗಿಸಿಸುವ ಪ್ಲಾನ್ ಮಾಡಿದೆ ಸಿನಿಮಾತಂಡ.

More from Filmibeat

English summary
KGF-2 set to be release on Janauary 14 in 2021.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X