Just In
Don't Miss!
- News
ಸಂಸತ್ ಕಟ್ಟಡದ ಮಹಾತ್ಮ ಗಾಂಧಿ ಪ್ರತಿಮೆ ತರಾತುರಿಯಲ್ಲಿ ಸ್ಥಳಾಂತರ
- Sports
ಐಎಸ್ಎಲ್: ಬೆಂಗಳೂರಿಗೆ ಸೋಲಿನ ಆಘಾತ ನೀಡಿದ ಕೇರಳ ಬ್ಲಾಸ್ಟರ್ಸ್
- Education
WAPCOS Recruitment 2021: 11 ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Finance
ಇಪ್ಪತ್ತು ದಿನದಲ್ಲಿ 47 ಪರ್ಸೆಂಟ್ ನಷ್ಟು ಏರಿಕೆ ಕಂಡ ಟಾಟಾ ಮೋಟಾರ್ಸ್ ಷೇರು
- Automobiles
ಡ್ಯುಯಲ್ ಟೋನ್ ಬಣ್ಣದ ಆಯ್ಕೆಯೊಂದಿಗೆ ರೋಡ್ ಟೆಸ್ಟಿಂಗ್ ನಡೆಸಿದ ಸಿಟ್ರನ್ ಸಿ5 ಏರ್ಕ್ರಾಸ್ ಕಾರು
- Lifestyle
ಯಾವಾಗ ಸಂಗಾತಿಗೆ ಮೋಸ ಮಾಡಿ ಅನೈತಿಕ ಸಂಬಂಧ ಬೆಳೆಸುತ್ತಾರೆ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಉಪ್ಪಿಯ ಕೆಪಿಜೆಪಿ ಪಕ್ಷದ ಮೊದಲ ಅಭ್ಯರ್ಥಿ ಇವರೇನಾ.?
ರಿಯಲ್ ಸ್ಟಾರ್ ಉಪೇಂದ್ರ ಅವರ ಕೆಪಿಜೆಪಿ ಪಕ್ಷ ಮುಂಬರುವ ವಿಧಾನಸಭೆ ಚುನಾವಣೆಗೆ ಸಕಲ ಸಿದ್ದತೆ ಮಾಡಿಕೊಳ್ಳುತ್ತಿದ್ದು, ತೆರೆಮರೆಯಲ್ಲಿ ಅಭ್ಯರ್ಥಿಗಳನ್ನ ಆಯ್ಕೆ ಸಾಗುತ್ತಿದೆ. ಈಗಾಗಲೇ ಚುನಾವಣ ಪ್ರಣಾಳಿಕೆಗಳನ್ನ ಬಹಿರಂಗಪಡಿಸಿರುವ ಪಕ್ಷದ ಅಧ್ಯಕ್ಷ ಉಪೇಂದ್ರ, ಅಭ್ಯರ್ಥಿಗಳ ಬಗ್ಗೆ ಹಾಗೂ ಕ್ಷೇತ್ರದ ಬಗ್ಗೆ ಎಲ್ಲಿಯೂ ಮಾಹಿತಿ ಬಿಟ್ಟುಕೊಟ್ಟಿಲ್ಲ.
ಆದ್ರೀಗ, ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದ ಮೊದಲ ಅಭ್ಯರ್ಥಿ ಬಗ್ಗೆ ಹೊಸ ಸುದ್ದಿ ಹೊರಬಿದ್ದಿದೆ. ಮೂಲಗಳ ಪ್ರಕಾರ ಉಪ್ಪಿ ಪಕ್ಷದಿಂದ ಸ್ಪರ್ಧೆ ಮಾಡಲಿರುವ ಮೊದಲ ಅಭ್ಯರ್ಥಿಯ ಹೆಸರು ಬಹಿರಂಗವಾಗಿದೆ.
ಚಲನಚಿತ್ರ ನಟಿಗೆ ಉಪ್ಪಿ ಪಕ್ಷದಲ್ಲಿ ಅವಕಾಶ ನೀಡಲಾಗಿದ್ದು, ಚುನಾವಣೆ ದೃಷ್ಟಿಯಲ್ಲಿ ಕೆಲಸ ಕೂಡ ಆರಂಭಿಸಿದ್ದಾರೆ ಎನ್ನಲಾಗಿದೆ. ಅಷ್ಟಕ್ಕೂ, ಉಪ್ಪಿ ಪಕ್ಷದ ಅಭ್ಯರ್ಥಿ ಎಂದು ಹೇಳಲಾಗುತ್ತಿರುವ ಆ ನಟಿ ಯಾರು? ಯಾವ ಕ್ಷೇತ್ರದಿಂದ ಕಣಕ್ಕೀಳಿಯಲಿದ್ದಾರೆ ಎಂದು ತಿಳಿಯಲು ಮುಂದೆ ಓದಿ.....

ರೂಪಾ ಅಯ್ಯರ್ ಗೆ ಉಪ್ಪಿ ಪಕ್ಷದ ಟಿಕೆಟ್.!
ಸದ್ಯ, ಮಾಹಿತಿ ಪ್ರಕಾರ ಸಿನಿಮಾ ನಿರ್ದೇಶಕಿ, ರೂಪದರ್ಶಿ ರೂಪಾ ಅಯ್ಯರ್ ಅವರು ನಟ ಉಪೇಂದ್ರ ನೇತೃತ್ವದ ಕರ್ನಾಟಕ ಪ್ರಜ್ಞಾವಂತ ಜನತಾಪಾರ್ಟಿ (ಕೆಪಿಜೆಪಿ)ಯಿಂದ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಸಿಎಂ ತವರು ನೆಲದಲ್ಲಿ ಸ್ಪರ್ಧೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ರೂಪಾ ಅಯ್ಯರ್ ಸ್ಪರ್ಧೆ ಮಾಡುವ ಮನಸ್ಸು ಮಾಡಿದ್ದಾರಂತೆ. ಮೈಸೂರಿನ ಕೃಷ್ಣರಾಜ ಕ್ಷೇತ್ರದಿಂದ ಕಣಕ್ಕಿಳಿಯಲು ಉತ್ಸುಕರಾಗಿದ್ದಾರೆ ಎನ್ನಲಾಗಿದೆ.

ಅಧಿಕೃತ ಮಾಹಿತಿ ಇಲ್ಲ
ಈ ಬಗ್ಗೆ ಪಕ್ಷದ ಅಧ್ಯಕ್ಷ ಉಪೇಂದ್ರ ಅವರಾಗಲಿ, ಅಥವಾ ನಿರ್ದೇಶಕಿ ರೂಪಾ ಅಯ್ಯರ್ ಆಗಲಿ ಎಲ್ಲಿಯೂ ಹೇಳಿಕೊಂಡಿಲ್ಲ. ಆದ್ರೆ, ಈ ಬಗ್ಗೆ ಮಾತುಕತೆ ನಡೆದಿದ್ದು, ಸದ್ಯದಲ್ಲೇ ಮಾಹಿತಿ ಹೊರಬೀಳಲಿದೆಯಂತೆ.

ಉಪ್ಪಿಯ ಕ್ಷೇತ್ರ ಯಾವುದು?
ಇನ್ನು ನಟ ಹಾಗೂ ಕೆಪಿಜೆಪಿ ಪಕ್ಷದ ಅಧ್ಯಕ್ಷ ಉಪೇಂದ್ರ ಅವರು ಯಾವ ಕ್ಷೇತ್ರದಿಂದ ಕಣಕ್ಕೀಳಿಯಲಿದ್ದಾರೆ ಎಂಬುದರ ಬಗ್ಗೆ ದೊಡ್ಡ ಚರ್ಚೆ ನಡೆಯುತ್ತಿದ್ದು, ಈ ಬಗ್ಗೆಯೂ ಉಪ್ಪಿ ಸುಳಿವು ನೀಡಿಲ್ಲ. ಒಟ್ನಲ್ಲಿ, ಎಲೆಕ್ಷನ್ ಗೆ ಕೆಲವೇ ತಿಂಗಳು ಮಾತ್ರ ಬಾಕಿಯಿದ್ದು, ಆದಷ್ಟೂ ಬೇಗ ಅಭ್ಯರ್ಥಿಗಳ ಆಯ್ಕೆ ಅಂತಿಮವಾಗಲಿದೆ.