ಮಹೇಶ್ ಬಾಬು 'ಸರ್ಕಾರು ವಾರಿ ಪಾಟ' ಸಿನಿಮಾಗೆ ಮತ್ತೋರ್ವ ಸ್ಟಾರ್ ನಟಿಯ ಎಂಟ್ರಿ

ಪ್ರಿನ್ಸ್ ಮಹೇಶ್ ಬಾಬು ಅಭಿನಯದ ಸರ್ಕಾರು ವಾರಿ ಪಾಟ ಸಿನಿಮಾ, ನಾಯಕಿಯರ ವಿಚಾರಕ್ಕೆ ಸಿಕ್ಕಾಪಟ್ಟೆ ಸುದ್ದಿಯಾಗುತ್ತಿದೆ. ಈಗಾಗಲೆ ಚಿತ್ರಕ್ಕೆ ಸಾಕಷ್ಟು ನಟಿಯರ ಹೆಸರು ಕೇಳಿಬರುತ್ತಿದೆ. ಆದರೆ ಸಿನಿಮಾತಂಡ ನಾಯಕಿಯ ವಿಚಾರವಾಗಿ ಇದುವರೆಗೂ ಅಧಿಕೃತ ಮಾಹಿತಿ ಬಹಿರಂಗ ಪಡಿಸಿಲ್ಲ.

Recommended Video

Sushant Singh's case should be handed over to CBI says Roopa Ganguly | Sushanth Singh

ಕೇವಲ ಫಸ್ಟ್ ಲುಕ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಸರ್ಕಾರು ವಾರಿ ಪಾಟ ಸಿನಿಮಾದಲ್ಲಿ ನಾಯಕಿಯಾಗಿ ಕೀರ್ತಿ ಸುರೇಶ್ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಮಹೇಶ್ ಬಾಬು ಜೊತೆ ಕೀರ್ತಿ ರೊಮ್ಯಾನ್ಸ್ ಮಾಡುವುದು ಪಕ್ಕಾ ಎನ್ನಲಾಗುತ್ತಿದೆ. ಆದರೆ ಈ ನಡುವೆ ಈಗ ಚಿತ್ರಕ್ಕೆ ಮತ್ತೋರ್ವ ನಾಯಕಿಯ ಹೆಸರು ಕೇಳಿಬರುತ್ತಿದೆ.ಮುಂದೆ ಓದಿ..

ಮಹೇಶ್ ಬಾಬು ಸಿನಿಮಾದಲ್ಲಿ ನಿವೇತಾ ಥಾಮಸ್

ಮಹೇಶ್ ಬಾಬು ಸಿನಿಮಾದಲ್ಲಿ ನಿವೇತಾ ಥಾಮಸ್

ಮಹೇಶ್ ಬಾಬು ಜೊತೆ ದಕ್ಷಿಣ ಭಾರತದ ಖ್ಯಾತ ನಟಿ ನಿವೇತಾ ಥಾಮಸ್ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಂದ್ಹಾಗೆ ನಿವೇತಾ ಮಹೇಶ್ ಬಾಬುಗೆ ನಾಯಕಿಯಾಗಿ ನಟಿಸುತ್ತಾರಾ ಅಥವಾ ಸಿನಿಮಾದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾರಾ ಎನ್ನುವುದು ಅಧಿಕೃತವಾಗಿಲ್ಲ. ಈಗಾಗಲೆ ಕೀರ್ತಿ ಸುರೇಶ್ ಹೆಸರು ಕೂಡ ಬಲವಾಗಿ ಕೇಳಿಬರುತ್ತಿರುವುದರಿಂದ ನಿವೇತಾ ಪಾತ್ರ ಏನು ಎನ್ನುವುದು ಕುತೂಹಲ ಮೂಡಿಸಿದೆ.

ಸೂಪರ್ ಸ್ಟಾರ್ ರಜನಿಕಾಂತ್ ಜೊತೆ ಮಿಂಚಿದ್ದ ನಟಿ

ಸೂಪರ್ ಸ್ಟಾರ್ ರಜನಿಕಾಂತ್ ಜೊತೆ ಮಿಂಚಿದ್ದ ನಟಿ

ನಿವೇತಾ ಕೊನೆಯದಾಗಿ ಸೂಪರ್ ಸ್ಟಾರ್ ರಜಿನಿಕಾಂತ್ ಅಬಿನಯದ ದರ್ಬಾರ್ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೆ ಸಾಕಷ್ಟು ಸಿನಿಮಾಗಳಲ್ಲಿಯೂ ಬ್ಯುಸಿಯಾಗಿದ್ದಾರೆ. ಅಲ್ಲು ಅರ್ಜುನ್ ಅಭಿನಯದ ಪುಷ್ಪ ಸಿನಿಮಾಗೂ ನಿವೇತಾ ಹೆಸರು ಕೇಳಿಬಂದಿತ್ತು. ಈಗ ಮಹೇಶ್ ಬಾಬು ಸಿನಿಮಾದಲ್ಲೂ ಅಭಿನಯಿಸಲಿದ್ದಾರೆ ಎನ್ನುವ ಮಾತು ಜೋರಾಗಿ ಕೇಳಿಬರುತ್ತಿದೆ.

ಪ್ರಿನ್ಸ್ ಗೆ ನಾಯಕಿಯಾಗ್ತಾರಾ ಕೀರ್ತಿ?

ಪ್ರಿನ್ಸ್ ಗೆ ನಾಯಕಿಯಾಗ್ತಾರಾ ಕೀರ್ತಿ?

ಮಹೇಶ್ ಬಾಬು ಸಿನಿಮಾದಲ್ಲಿ ನಟಿ ಕೀರ್ತಿ ಸುರೇಶ್ ನಾಯಕಿಯಾಗಿ ಮಿಂಚುವುದು ಬಹುತೇಕ ಖಚಿತವಾಗಿದೆ. ಮೊದಲ ಬಾರಿಗೆ ಕೀರ್ತಿ ಸುರೇಶ್ ಮಹೇಶ್ ಬಾಬು ಜೊತೆ ಅಭಿನಯಿಸುತ್ತಿದ್ದಾರೆ. ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದ ಕೀರ್ತಿ ಈಗ ಮಹೇಶ್ ಬಾಬುಗೆ ನಾಯಕಿಯಾಗುವ ಮೂಲಕ ಗ್ಲಾಮರ್ ಪಾತ್ರದಲ್ಲೂ ಮಿಂಚಲು ಸಜ್ಜಾಗಿದ್ದಾರೆ.

ಸಿನಿಮಾದಲ್ಲಿ ಇರ್ತಾರಾ ಕನ್ನಡ ಸ್ಟಾರ್ಸ್

ಸಿನಿಮಾದಲ್ಲಿ ಇರ್ತಾರಾ ಕನ್ನಡ ಸ್ಟಾರ್ಸ್

ಸರ್ಕಾರು ವಾರಿ ಪಾಟ ಸಿನಿಮಾದಲ್ಲಿ ಕನ್ನಡದ ನಟರ ಹೆಸರು ಸಹ ಕೇಳಿಬರುತ್ತಿದೆ. ಕನ್ನಡ ಸ್ಟಾರ್ ನಟರಾದ ಕಿಚ್ಚ ಸುದೀಪ್ ಮತ್ತು ಅಥವಾ ಉಪೇಂದ್ರ ಇಬ್ಬರಲ್ಲಿ ಒಬ್ಬರು ಮಹೇಶ್ ಬಾಬುಗೆ ವಿಲನ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆಯೂ ಇನ್ನೂ ಅಧಿಕೃತ ಮಾಹಿತಿ ಬಹಿರಂಗವಾಗಿಲ್ಲ.

More from Filmibeat

English summary
Actress Nivetha Thomas playing important role in Mahesh Babu's Sarkaar Vaaeri Paata.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X