For Quick Alerts
  ALLOW NOTIFICATIONS  
  For Daily Alerts

  ರಾಮ್ ಚರಣ್ ಮತ್ತು ಪ್ರಭಾಸ್ ಬಗ್ಗೆ ಹೀಗೊಂದು ಸುದ್ದಿ: ಅಭಿಮಾನಿಗಳು ಫುಲ್ ಖುಷ್

  |

  ಟಾಲಿವುಡ್ ಸ್ಟಾರ್ ನಟರಾದ ಪ್ರಭಾಸ್ ಮತ್ತು ರಾಮ್ ಚರಣ್ ಬಗ್ಗೆ ಹೊಸ ಸುದ್ದಿಯೊಂದು ಟಾಲಿವುಡ್ ಅಂಗಳದಲ್ಲಿ ವೈರಲ್ ಆಗಿದೆ. ಅಂದಹಾಗೆ ರಾಮ್ ಚರಣ್ ಸದ್ಯ ಆರ್ ಆರ್ ಆರ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತ ಪ್ರಭಾಸ್ ಸಲಾರ್ ಮತ್ತು ಆದಿಪುರುಷ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ನಡುವೆ ಇಬ್ಬರ ಬಗ್ಗೆ ಹರಿದಾಡುತ್ತಿರುವ ಹೊಸ ಸುದ್ದಿ ಅಭಿಮಾನಿಗಳಿಗೆ ಥ್ರಿಲ್ ನೀಡಿದೆ.

  ರಾಮ್ ಚರಣ್ ಮತ್ತು ಪ್ರಭಾಸ್ ಒಂದೇ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಮಾತು ಟಾಲಿವುಡ್ ಅಂಗಳದಲ್ಲಿ ಗುಲ್ಲಾಗಿದೆ. ಹೌದು ರಾಮ್ ಚರಣ್ ಈಗಾಗಲೇ ಆರ್ ಆರ್ ಆರ್ ಮಲ್ಟಿಸ್ಟಾರರ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಮುಗಿಯುತ್ತಿದ್ದಂತೆ ಪ್ರಭಾಸ್ ಜೊತೆ ಮತ್ತೊಂದು ಮಲ್ಟಿಸ್ಟರರ್ ಸಿನಿಮಾಗೆ ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ.

  ಅಂದಹಾಗೆ ಇಬ್ಬರು ಸ್ಟಾರ್ ನಟರನ್ನು ಒಟ್ಟಿಗೆ ಕರೆತರುವ ಪ್ರಯತ್ನ ಮಾಡುತ್ತಿದೆ ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ ಯುವಿ ಕ್ರಿಯೇಶನ್. ಪ್ರಭಾಸ್ ಮತ್ತು ರಾಮ್ ಚರಣ್ ಇಬ್ಬರನ್ನು ಒಟ್ಟಿಗೆ ಕರೆತರುವ ಪ್ಲಾನ್ ಮಾಡಿದೆ ಸಿನಿಮಾತಂಡ. ಯುವಿ ನಿರ್ಮಾಣ ಸಂಸ್ಥೆ ಪ್ರಭಾಸ್ ಮತ್ತು ರಾಮ್ ಚರಣ್ ಇಬ್ಬರ ಜೊತೆಯೂ ಉತ್ತಮ ಬಾಂಧವ್ಯ ಹೊಂದಿದೆ. ಹಾಗಾಗಿ ಈ ಇಬ್ಬರೂ ಸ್ಟಾರ್ ಕಲಾವಿದರನ್ನು ಒಂದೇ ಸಿನಿಮಾದಲ್ಲಿ ಕರೆತರುವ ಸಾಹಸ ಮಾಡಿ, ಅಭಿಮಾನಿಗಳಿಗೆ ಸಖತ್ ಥ್ರಿಲ್ ನೀಡಲು ಸಜ್ಜಾಗಿದೆ.

  ದೊಡ್ಡ ಪ್ಯಾನ್ ಇಂಡಿಯಾ ಸಿನಿಮಾ ಮಾಡಲು ಯುವಿ ಕ್ರಿಯೇಶನ್ ಯೋಜನೆ ಮಾಡಿದೆ. ಅಂದಹಾಗೆ ಈ ಸುದ್ದಿ ಇನ್ನು ಅಧಿಕೃತವಾಗಿಲ್ಲ, ಇನ್ನೂ ಪ್ಲಾನಿಂಗ್ ನಲ್ಲಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಸದ್ಯದಲ್ಲೇ ಪ್ರಭಾಸ್ ಮತ್ತು ರಾಮ್ ಚರಣ್ ನಟನೆಯ ಮಲ್ಟಿಸ್ಟಾರರ್ ಸಿನಿಮಾ ಘೋಷಣೆಯಾದರೂ ಅಚ್ಚರಿ ಇಲ್ಲ.

  ಇನ್ನು ನಟ ರಾಮ್ ಚರಣ್ ಸದ್ಯ ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣಕ್ಕೆಂದು ಯೂರೋಪ್ ನಲ್ಲಿದ್ದಾರೆ. ಆರ್ ಆರ್ ಆರ್ ನಲ್ಲಿ ರಾಮ್ ಚರಣ್ ಜೊತೆ ಜೂ.ಎನ್ ಟಿ ಆರ್ ನಟಿಸುತ್ತಿದ್ದಾರೆ. ಈ ಸಿನಿಮಾ ಜೊತೆಗೆ ಆಚಾರ್ಯ ಸಿನಿಮಾ ಕೂಡ ಕೈಯಲ್ಲಿದೆ. ಆಚಾರ್ಯ ನಿರ್ಮಾಣದ ಜೊತೆಗೆ ರಾಮ್ ನಟನೆ ಕೂಡ ಮಾಡಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.

  ಇದಲ್ಲದೆ ರಾಮ್ ಚರಣ್ ಬಹುನಿರೀಕ್ಷೆಯ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾಗೆ ಸಜ್ಜಾಗಿದ್ದಾರೆ. ತಮಿಳಿನ ಖ್ಯಾತ ನಿರ್ದೇಶಕ ಶಂಕರ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಚಿತ್ರದಲ್ಲಿ ರಾಮ್ ಚರಣ್ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾದಲ್ಲಿ ಕಿಯಾರಾ ಅಡ್ವಾಣಿ ನಾಯಕಿಯಾಗಿ ಬಣ್ಣ ಹಚ್ಚುತ್ತಿದ್ದಾರೆ. ಈ ಸಿನಿಮಾ ಬಳಿಕ ಪ್ರಭಾಸ್ ಜೊತೆ ಹೊಸ ಸಿನಿಮಾದಲ್ಲಿ ನಟಿಸುವ ಸಾಧ್ಯತೆ ಇದೆ.

  ಇನ್ನು ಪ್ರಭಾಸ್ ಸಿನಿಮಾ ವಿಚಾರಕ್ಕೆ ಬರುವುದಾದರೆ ರಾಧೆ-ಶ್ಯಾಮ್ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಈ ಸಿನಿಮಾ ಮುಂದಿನ ವರ್ಷ 2022 ಸಂಕ್ರಾಂತಿಗೆ ತೆರೆಗೆ ಬರುತ್ತಿದೆ. ಸದ್ಯ ಆದಿಪುರುಷ್ ಮತ್ತು ಸಲಾರ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಸಲಾರ್, ಪ್ರಶಾಂತ್ ನೀಲ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಸಿನಿಮಾ. ಆದಿಪುರುಷ್ ಓಂ ರಾವತ್ ಸಾರಥ್ಯಲ್ಲಿ ಬರ್ತಿರುವ ಚಿತ್ರವಾಗಿದೆ. ಈ ಸಿನಿಮಾಗಳ ಜೊತೆಗೆ ನಾಗ್ ಅಶ್ವಿನ್ ನಿರ್ದೇಶನದ ಚಿತ್ರದಲ್ಲಿಯೂ ಪ್ರಭಾಸ್ ಬ್ಯುಸಿಯಾಗಿದ್ದಾರೆ.

  ಮಹಾನಟಿ ಸಿನಿಮಾ ಖ್ಯಾತಿಯ ನಾಗ್ ಅಶ್ವಿನ್ ಈಗಾಗಲೇ ಕಥೆ ಸಿದ್ಧಮಾಡಿಕೊಂಡು ಪ್ರಭಾಸ್ ಜೊತೆ ಸಿನಿಮಾ ಮಾಡಲು ತಯಾರಾಗಿದ್ದಾರೆ. ಈಗಾಗಲೇ ಚಿತ್ರದ ಮುಹೂರ್ತ ನೆರವೇರಿದ್ದು, ಪ್ರಭಾಸ್ ಬಳಿ ಇರುವ ಸಿನಿಮಾ ಮುಗಿದ ಬಳಿಕ ಈ ಸಿನಿಮಾ ಪ್ರಾರಂಭವಾಗಲಿದೆ. ಇನ್ನು ವಿಶೇಷ ಎಂದರೆ ಈ ಚಿತ್ರದಲ್ಲಿ ಪ್ರಭಾಸ್ ಗೆ ನಾಯಕಿಯಾಗಿ ದೀಪಿಕಾ ಪಡುಕೋಣೆ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು ಪ್ರಮುಖ ಪಾತ್ರದಲ್ಲಿ ಬಿಗ್ ಬಿ ಅಮಿತಾಬ್ ಬಚ್ಚನ್ ಕಾಣಿಸಿಕೊಳ್ಳುತ್ತಿದ್ದಾರೆ.

  English summary
  Tollywood Stars Prabhas and Ram Charan likely to come together for Multistarrer movie.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X