ಪ್ರಭಾಸ್ ಬದಲು ರಕ್ಷಿತ್ ಶೆಟ್ಟಿ ಎಂಟ್ರಿ.. ತೆಲುಗು ಬಾಬುಗಳು ಏನಂತಾರೋ?

ಪ್ರಭಾಸ್ ನಟನೆಯ ಬಹುನಿರೀಕ್ಷಿತ 'ಸಲಾರ್' ಸಿನಿಮಾ ಸೆಪ್ಟೆಂಬರ್‌ 28ಕ್ಕೆ ರಿಲೀಸ್ ಆಗಬೇಕಿತ್ತು. ಆದರೆ ಚಿತ್ರತಂಡ ಯಾಕೋ ಸೈಲೆಂಟ್ ಆಗಿಬಿಟ್ಟಿದೆ. ಅಂದು ಸಿನಿಮಾ ರಿಲೀಸ್ ಆಗಲ್ಲ ಅನ್ನೋದು ಇದೀಗ ಖಾತ್ರಿ ಆಗ್ತಿದೆ. ಯಂಗ್ ರೆಬಲ್ ಸ್ಟಾರ್ ಅಭಿಮಾನಿಗಳು ಆ ದಿನಕ್ಕಾಗಿ ಬಹಳ ಕಾತರದಿಂದ ಕಾಯುತ್ತಿದ್ದರು. ಆದರೆ ಅವರಿಗೆ ನಿರಾಸೆಯಾಗಿದೆ.

ಪ್ರಶಾಂತ್ ನೀಲ್ ನಿರ್ದೇಶನದ 'ಸಲಾರ್' ಸಿನಿಮಾ ಭಾರೀ ಕುತೂಹಲ ಮೂಡಿಸಿದೆ. ಹೊಂಬಾಳೆ ಸಂಸ್ಥೆ ಸಿನಿಮಾ ನಿರ್ಮಾಣ ಮಾಡುತ್ತಿದೆ. 2 ಭಾಗಗಳಾಗಿ ಸಿನಿಮಾ ತೆರೆಗೆ ಬರ್ತಿದೆ. ಸೆಪ್ಟೆಂಬರ್ 28ಕ್ಕೆ 'ಸಲಾರ್' ಆಗಲ್ಲ ಎನ್ನುವ ಸುಳಿವು ಸಿಗುತ್ತಿದ್ದಂತೆ ಬೇರೆ ಸಿನಿಮಾಗಳು ಆ ದಿನ ಪ್ರೇಕ್ಷಕರ ಮುಂದೆ ಬರ್ತಿವೆ. ಕನ್ನಡದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ 'ಬಾನ ದಾರಿಯಲ್ಲಿ' ಸಿನಿಮಾ ಸೆಪ್ಟೆಂಬರ್ 15ಕ್ಕೆ ರಿಲೀಸ್ ಆಗಬೇಕಿತ್ತು. 'ಸಲಾರ್' ಬರಲ್ಲ ಅನ್ನೋದು ಗೊತ್ತಾದ ಮೇಲೆ ರಿಲೀಸ್‌ ಡೇಟ್ ಸೆಪ್ಟೆಂಬರ್ 28ಕ್ಕೆ ಮುಂದೂಡಲಾಗಿದೆ.

Rakshit Shettys Sapta Sagaradaache Ello to release in Telugu on this date

'ಸಲಾರ್' ಸಿನಿಮಾ ರಿಲೀಸ್ ಆಗುತ್ತದೆ ಎಂದು ಹೆದರಿ ಸೆಪ್ಟೆಂಬರ್‌ ಕೊನೆವಾರ, ಅಕ್ಟೋಬರ್ ಮೊದಲ ವಾರ ಬೇರೆ ಸಿನಿಮಾಗಳನ್ನು ತೆರೆಗೆ ತರೋದು ಬೇಡ ಎಂದು ಕೆಲವರು ಅಂದುಕೊಂಡಿದ್ದರು. ಆದರೆ ಈಗ ನಿಧಾನವಾಗಿ ಸಿನಿಮಾ ರಿಲೀಸ್ ಡೇಟ್ ಘೋಷಿಸುತ್ತಿದ್ದಾರೆ. ತೆಲುಗಿನಲ್ಲಿ ರಾಮ್ ನಟನೆಯ 'ಸ್ಕಂದ' ಸಿನಿಮಾ ಕೂಡ ಅದೇ ದಿನ ತೆರೆಗೆ ಬರ್ತಿದೆ. ಕನ್ನಡದಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿರುವ 'ಸಪ್ತ ಸಾಗರದಾಚೆ ಎಲ್ಲೋ' ತೆಲುಗು ವರ್ಷನ್ ಕೂಡ ಸೆಪ್ಟೆಂಬರ್ 28ಕ್ಕೆ ರಿಲೀಸ್ ಆಗುವ ನಿರೀಕ್ಷೆಯಿದೆ.

ಈಗಾಗಲೇ 'ಸಪ್ತ ಸಾಗರದಾಚೆ ಎಲ್ಲೋ' ಚಿತ್ರವನ್ನು 4 ಭಾಷೆಗಳಿಗೆ ಡಬ್ ಮಾಡಿ ಸಿದ್ಧಪಡಿಸಲಾಗಿದೆ. ಕನ್ನಡದಲ್ಲೇ ಸಿನಿಮಾ ಮುಂಬೈ, ಹೈದರಾಬಾದ್ ಸೇರಿದಂತೆ ಹಲವು ಕಡೆಗಳಲ್ಲಿ ರಿಲೀಸ್ ಆಗಿದೆ. ತೆಲುಗು ಪ್ರೇಕ್ಷಕರು ಕೂಡ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ತೆಲುಗಿಗೆ ಯಾವಾಗ ಡಬ್ ಮಾಡಿ ರಿಲೀಸ್ ಮಾಡ್ತೀರಾ? ಎಂದು ಕೇಳ್ತಿದ್ದಾರೆ. ಸೆಪ್ಟೆಂಬರ್ 28ಕ್ಕೆ 'ಸಪ್ತ ಸಾಗರದಾಚೆ ಎಲ್ಲೋ' ತೆಲುಗು ವರ್ಷನ್ ರಿಲೀಸ್ ಆಗುತ್ತದೆ ಎನ್ನುವ ಮಾತುಗಳು ಕೇಳಿಬರ್ತಿದೆ. ಹೇಮಂತ್ ರಾವ್ ನಿರ್ದೇಶನದ ಈ ರೊಮ್ಯಾಂಟಿಕ್ ಎಂಟರ್‌ಟೈನರ್ ಸಿನಿಮಾ ಪ್ರೇಕ್ಷಕರ ಮನಗೆದ್ದಿದೆ.

Rakshit Shettys Sapta Sagaradaache Ello to release in Telugu on this date

ರಕ್ಷಿತ್ ಶೆಟ್ಟಿ ಜೋಡಿಯಾಗಿ ರುಕ್ಮಿಣಿ ವಸಂತ್ ಮಿಂಚಿದ್ದಾರೆ. ಮನು, ಪ್ರಿಯಾಳ ಗಾಢವಾದ ಪ್ರೀತಿಯ ಕಥೆ ನೋಡುಗರಿಗೆ ಅದ್ಭುತ ಅನುಭವ ನೀಡುತ್ತಿದೆ. ಇತ್ತೀಚೆಗೆ ಕನ್ನಡ ಸಿನಿಮಾಗಳು ಪರಭಾಷೆಗೆ ಹೆಚ್ಚು ಹೆಚ್ಚು ಡಬ್ ಆಗಿ ರಿಲೀಸ್ ಆಗುತ್ತಿದೆ. KGF ಸರಣಿ ಬಳಿಕ 'ಕಾಂತಾರ' ಚಿತ್ರವನ್ನು ತೆಲುಗು ಪ್ರೇಕ್ಷಕರು ಅಪ್ಪಿ ಒಪ್ಪಿಕೊಂಡಿದ್ದರು. ಇತ್ತೀಚೆಗೆ 'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ' ಸಿನಿಮಾ ಕೂಡ ಡಬ್ ಆಗಿ ಆಂಧ್ರ, ತೆಲಂಗಾಣ ಹಾಗೂ ಓವರ್‌ಸೀಸ್ ಮಾರ್ಕೆಟ್‌ನಲ್ಲಿ ರಿಲೀಸ್ ಆಗಿತ್ತು. ಆದರೆ ದೊಡ್ಡಮಟ್ಟದ ಸಕ್ಸಸ್ ಸಿಗಲಿಲ್ಲ.

ಸೆಪ್ಟೆಂಬರ್ 1ಕ್ಕೆ ಬಿಡುಗಡೆಯಾದ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಈಗಾಗಲೇ 15 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿದೆ. ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಕೆಮೆಸ್ಟ್ರಿ ಚಿತ್ರದಲ್ಲಿ ಹೈಲೆಟ್‌ ಆಗಿದೆ. ಸಿನಿರಸಿಕರು ಚಿತ್ರದ ಎರಡನೇ ಭಾಗ ನೋಡಲು ಕಾತರದಿಂದ ಕಾಯುತ್ತಿದ್ದಾರೆ. ಅಕ್ಟೋಬರ್ 20ಕ್ಕೆ ಚಿತ್ರದ 2ನೇ ಭಾಗ ಪ್ರೇಕ್ಷಕರ ಮುಂದೆ ಬರಲಿದೆ.

'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಯಾವಾಗ ಓಟಿಟಿಗೆ ಬರುತ್ತೆ ಎನ್ನುವ ಗೊಂದಲ ಕೂಡ ಇದೆ. 2ನೇ ಭಾಗ ರಿಲೀಸ್ ನಂತರ ಎರಡನ್ನು ಒಟ್ಟಿಗೆ ಓಟಿಟಿಗೆ ಬಿಡ್ತಾರಾ? ಅಥವಾ ಸೈಡ್- A ಓಟಿಟಿಗೆಬಂದ ಬಳಿಕ ಸೈಡ್- B ಥಿಯೇಟರ್‌ಗೆ ಬರುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ. ಇನ್ನು ತೆಲುಗಿನಲ್ಲಿ ರಿಲೀಸ್ ಆಗುತ್ತಿರುವ ಚಿತ್ರಕ್ಕೆ ತೆಲುಗು ಬಾಬುಗಳ ಪ್ರತಿಕ್ರಿಯೆ ಹೇಗಿರುತ್ತೋ ಕಾದು ನೋಡಬೇಕಿದೆ.

More from Filmibeat

English summary
Sapta Sagaradaache Ello Releasing in Telugu Soon.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X