ಹೈದರಾಬಾದ್ ಬಳಿಕ ಮುಂಬೈನಲ್ಲಿ ಹೊಸ ಮನೆ ಖರೀದಿಸಿದ ನಟಿ ರಶ್ಮಿಕಾ ಮಂದಣ್ಣ
ನಟಿ ರಶ್ಮಿಕಾ ಮಂದಣ್ಣ ಸದ್ಯ ದಕ್ಷಿಣದಿಂದ ಉತ್ತರದವರೆಗೂ ಮಿಂಚುತ್ತಿದ್ದಾರೆ. ಕಿರಿಕ್ ಪಾರ್ಟಿ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ನಟಿ ರಶ್ಮಿಕಾ ಇದೀಗ ಬಾಲಿವುಡ್ ಸಿನಿಮಾ ಮಾಡಲು ಸಜ್ಜಾಗಿದ್ದಾರೆ. ತೆಲುಗು ಸಿನಿಮಾರಂಗದಲ್ಲಿ ದೊಡ್ಡ ಮಟ್ಟದ ಖ್ಯಾತಿ ಗಳಿಸಿರುವ ರಶ್ಮಿಕಾ ಈಗ ಹಿಂದಿ ಚಿತ್ರರಂಗದಲ್ಲಿ ಅದೃಷ್ಟ ಪರೀಕ್ಷೆಗೆ ನಿಂತಿದ್ದಾರೆ.
ಟಾಲಿವುಡ್ ಸ್ಟಾರ್ ನಟರ ಸಿನಿಮಾಗಳಲ್ಲಿ ನಾಯಕಿಯಾಗಿ ಮಿಂಚಿ ಯಶಸ್ಸು ಗಳಿಸುತ್ತಿದ್ದಂತೆ ರಶ್ಮಿಕಾ ಬಾಲಿವುಡ್ ಕಡೆ ಮುಖ ಮಾಡಿದ್ದಾರೆ. ಕನ್ನಡದಿಂದ ಟಾಲಿವುಡ್ ಗ ಹಾರಿದ್ದ ರಶ್ಮಿಕಾ ತೆಲುಗಿನಲ್ಲಿ ಯಶಸ್ಸು ಗಳಿಸುತ್ತಿದ್ದಂತೆ ಹೈದರಾಬಾದ್ ಗೆ ಶಿಫ್ಟ್ ಆಗಿದ್ದಲ್ಲದೇ, ಹೈದರಾಬಾದ್ ನಲ್ಲಿ ಮನೆ ಕೂಡ ಖರೀದಿಸಿದ್ದರು. ಇದೀಗ ಮುಂಬೈಗೆ ಶಿಫ್ಟ ಆಗುತ್ತಿದ್ದಾರೆ ಎನ್ನಲಾಗುತ್ತಿದೆ. ಮುಂದೆ ಓದಿ...

ಮುಂಬೈನಲ್ಲಿ ಮನೆ ಖರೀದಿಸಿದ ರಶ್ಮಿಕಾ
ಬಾಲಿವುಡ್ ನಲ್ಲಿ ಒಂದು ಸಿನಿಮಾಗೆ ಅವಕಾಶ ಸಿಗುತ್ತಿದ್ದಂತೆ ರಶ್ಮಿಕಾ ಮುಂಬೈನಲ್ಲಿ ಮನೆ ಖರೀದಿಸಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ. ಮೂಲಗಳ ಪ್ರಕಾರ ಹಿಂದಿ ಸಿನಿಮಾಗಾಗಿ ರಶ್ಮಿಕಾ ಮುಂಬೈ ಮತ್ತು ಹೈದರಾಬಾದ್ ನಡುವೆ ತುಂಬಾ ಓಡಾಡುತ್ತಿದ್ದರು. ಹಾಗಾಗಿ ಮುಂಬೈನಲ್ಲೇ ಮನೆ ಇದ್ದರೆ ಉತ್ತಮ ಎಂದು ನಿರ್ಧರಿಸಿ ಮುಂಬೈ ನಗರದಲ್ಲಿ ಮನೆ ಖರೀದಿಸಿದ್ದಾರೆ ಎನ್ನಲಾಗುತ್ತಿದೆ.

ಮಿಷನ್ ಮಜ್ನು ಸಿನಿಮಾದಲ್ಲಿ ರಶ್ಮಿಕಾ
ರಶ್ಮಿಕಾ ಸದ್ಯ ಸಿದ್ಧಾರ್ಥ್ ಮಲ್ಹೋತ್ರ ಜೊತೆ ಮಿಷನ್ ಮಜ್ನು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದಲ್ಲದೆ ರಶ್ಮಿಕಾ ಹಿಂದಿಯ ಮತ್ತೊಂದು ಸಿನಿಮಾಗೆ ಸಹಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಇನ್ಮುಂದೆ ರಶ್ಮಿಕಾ ಬಾಲಿವುಡ್ ನಲ್ಲಿ ಬ್ಯುಸಿಯಾಗುವ ಸಾಧ್ಯತೆ ಇರುವ ಕಾರಣ ಮೊದಲೇ ಯೋಚಿಸಿ ಮನೆ ಖರೀದಿಸಿದ್ದಾರೆ ಎನ್ನಲಾಗುತ್ತಿದೆ.

ಮುಂಬೈಗೆ ಮತ್ತಷ್ಟು ಹತ್ತಿರವಾಗಲಿದ್ದಾರೆ ಕಿರಿಕ್ ಸುಂದರಿ
ಮುಂಬೈನಲ್ಲಿ ರಶ್ಮಿಕಾ ಇಷ್ಟು ದಿನ ಹೋಟೆಲ್ ನಲ್ಲಿ ಉಳಿದುಕೊಂಡಿದ್ದರಂತೆ. ಆದರೆ ಇನ್ಮುಂದೆ ತನ್ನದೆ ಮನೆಯಲ್ಲಿ ಇರಲಿದ್ದು, ಮುಂಬೈ ನಗರಕ್ಕೆ ಮತ್ತಷ್ಟು ಹತ್ತಿರವಾಗಲಿದ್ದಾರೆ. ಮನೆ ಖರೀದಿಯ ಬಗ್ಗೆ ರಶ್ಮಿಕಾ ಎಲ್ಲೂ ಬಹಿರಂಗ ಪಡಿಸಿಲ್ಲ.

ಹೊಸ ಕಾರು ಖರೀದಿಸಿದ ರಶ್ಮಿಕಾ
ಇತ್ತೀಚಿಗಷ್ಟೆ ರಶ್ಮಿಕಾ ಹೊಸ ಕಾರನ್ನು ಖರೀದಿಸಿದ್ದರು. ದುಬಾರಿ ಕಾರಿನ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಸಂತಸ ಪಟ್ಟಿದ್ದರು. ರಶ್ಮಿಕಾ ಸದ್ಯ ತೆಲುಗಿನಲ್ಲಿ ಅಲ್ಲು ಅರ್ಜುನ್ ಜೊತೆ ಪುಷ್ಪ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಇದಲ್ಲದೆ ತೆಲುಗಿನ ಮತ್ತೊಂದು ಸಿನಿಮಾಗೂ ಸಹಿ ಮಾಡಿದ್ದಾರೆ. ಇನ್ನೂ ತಮಿಳಿನಲ್ಲಿ ಸುಲ್ತಾನ್ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ.


Click it and Unblock the Notifications











