ಹೊಸ ಚಿತ್ರಕ್ಕೆ ಭಾರಿ ಸಂಭಾವನೆ ಪಡೆದ ರಶ್ಮಿಕಾ ಮಂದಣ್ಣ
ದಕ್ಷಿಣ ಭಾರತದ ಖ್ಯಾತ ನಟಿ ರಶ್ಮಿಕಾ ಮಂದಣ್ಣ ಸಂಭಾವನೆ ವಿಚಾರದಲ್ಲಿ ಆಗಾಗ ಸುದ್ದಿಯಲ್ಲಿರುತ್ತಾರೆ. ತೆಲುಗು ಮತ್ತು ತಮಿಳಿನಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿಯರಲ್ಲಿ ರಶ್ಮಿಕಾ ಸಹ ಒಬ್ಬರು ಎನ್ನಲಾಗಿದೆ.
ಇತ್ತೀಚಿಗಷ್ಟೆ ತೆಲುಗಿನಲ್ಲಿ ಹೊಸ ಸಿನಿಮಾಗೆ ರಶ್ಮಿಕಾ ಮಂದಣ್ಣ ಸಹಿ ಮಾಡಿದ್ದಾರೆ. ಈ ಚಿತ್ರ ಅಧಿಕೃತವಾಗಿ ಮುಹೂರ್ತ ಮಾಡಿಕೊಂಡು ಸೆಟ್ಟೇರಿದೆ. ಈ ಚಿತ್ರಕ್ಕಾಗಿ ರಶ್ಮಿಕಾ ಭಾರಿ ಸಂಭಾವನೆ ಪಡೆದಿದ್ದಾರೆ ಎಂದು ಹೇಳಲಾಗಿದೆ.
ತೆಲುಗು ನಟ ಶಾರ್ವಾನಂದ್ ನಾಯಕರಾಗಿರುವ ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಒಂದು ಕೋಟಿಗೂ ಅಧಿಕ ಸಂಭಾವನೆ ಪಡೆದಿದ್ದಾರೆ ಎಂದು ತೆಲುಗು ವೆಬ್‌ಸೈಟ್‌ಗಳು ವರದಿ ಮಾಡಿದೆ.

ಅಂದ್ಹಾಗೆ ಈ ಸಿನಿಮಾಗೆ ಮೊದಲು ನಟಿ ಸಾಯಿ ಪಲ್ಲವಿ ಆಯ್ಕೆಯಾಗಿದ್ದರು. ಶರ್ವಾನಂದ್ ಜೊತೆ ಪ್ರೇಮಂ ಸುಂದರಿ ನಟಿಸುವುದು ಬಹುತೇಕ ಖಚಿತವಾಗಿತ್ತು. ಆದರೆ ಕೊನೆಕ್ಷಣದಲ್ಲಿ ಸಾಯಿ ಪಲ್ಲವಿ ಸಿನಿಮಾದಿಂದ ಹೊರನಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಸಾಯಿ ಪಲ್ಲವಿ ಜಾಗಕ್ಕೆ ನಟಿ ರಶ್ಮಿಕಾ ಮಂದಣ್ಣ ಆಯ್ಕೆಯಾಗಿದ್ದಾರೆ.
ಮೊದಲ ಬಾರಿಗೆ ರಶ್ಮಿಕಾ ಶರ್ವಾನಂದ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಬಹುನಿರೀಕ್ಷೆಯ ಸಿನಿಮಾದ ಚಿತ್ರೀಕರಣ ಮುಂದಿನ ವರ್ಷ ಪ್ರಾರಂಭವಾಗಲಿದ್ದು, ವರ್ಷದ ಕೊನೆಯಲ್ಲಿ ರಿಲೀಸ್ ಆಗುವ ಸಾಧ್ಯತೆ ಇದೆ. ಕಿಶೋರ್ ತಿರುಮಲ ಈ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.
ರಶ್ಮಿಕಾ ಸದ್ಯ ಅಲ್ಲು ಅರ್ಜುನ್ ಅಭಿನಯದ ಪುಷ್ಪ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಶರ್ವಾನಂದ್ ಬಳಿಯೂ ಎರಡೂ ಸಿನಿಮಾಗಳಿವೆ. ಈ ಎಲ್ಲಾ ಸಿನಿಮಾ ಕೆಲಸಗಳು ಪೂರ್ಣಗೊಂಡ ಬಳಿಕ ಹೊಸ ಸಿನಿಮಾದಲ್ಲಿ ಇಬ್ಬರೂ ಬ್ಯುಸಿಯಾಗಲಿದ್ದಾರೆ.


Click it and Unblock the Notifications











