ಯಂಗ್ ರೆಬಲ್ ಸ್ಟಾರ್ ಪ್ರಭಾಸ್ ಮುಂದಿನ ಸಿನಿಮಾ ನಾಯಕಿಯಾಗಿ ರಶ್ಮಿಕಾ ಮಂದಣ್ಣ?

ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಒಂದಿಲ್ಲೊಂದು ಕಾರಣಕ್ಕೆ ಪದೇ ಪದೆ ಸುದ್ದಿಯಾಗುತ್ತಿರುತ್ತಾರೆ. ಇನ್ನು ಆಕೆಯ ಬಗ್ಗೆ ಸಾಕಷ್ಟು ಗಾಳಿಸುದ್ದಿ ಕೂಡ ಹರಿದಾಡುತ್ತಿರುತ್ತದೆ. 'ಅನಿಮಲ್' ಸಿನಿಮಾ ಬಳಿಕ ರೋಶ್ ಸಂಭಾವನೆ ಹೆಚ್ಚಿಸಿಕೊಂಡಿದ್ದಾರೆ ಎನ್ನುವ ಗುಸು ಗುಸು ಶುರುವಾಗಿತ್ತು. ಈ ಬಗ್ಗೆ ಆಕೆ ಪ್ರತಿಕ್ರಿಯಿಸಿ ಸ್ಪಷ್ಟನೆ ನೀಡಿದ್ದರು.

ರಣ್‌ಬೀರ್ ಕಪೂರ್ ಜೋಡಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ 'ಅನಿಮಲ್' ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆಗಿದೆ. ಸದ್ಯ ಓಟಿಟಿಯಲ್ಲಿ ಸಿನಿಮಾ ಸದ್ದು ಮಾಡ್ತಿದೆ. ಇನ್ನು ಅಲ್ಲು ಅರ್ಜುನ್ ಜೊತೆ 'ಪುಷ್ಪ'-2 ಚಿತ್ರದಲ್ಲಿ ಶ್ರೀವಲ್ಲಿಯಾಗಿ ನಟಿಸುತ್ತಿದ್ದಾರೆ. ಮತ್ತೆರಡು ಮಹಿಳಾ ಪ್ರಧಾನ ಸಿನಿಮಾಗಳು ರಶ್ಮಿಕಾ ಕೈಯಲ್ಲಿವೆ. ಧನುಷ್ ನಟನೆಯ 50ನೇ ಚಿತ್ರಕ್ಕೂ ರಶ್ಮಿಕಾ ನಾಯಕಿಯಾಗಿ ಆಯ್ಕೆ ಆಗಿದ್ದಾರೆ.

Rashmika Mandanna to play female lead in Prabhass next; reports

'ಅನಿಮಲ್' ಸಿನಿಮಾ ಬಳಿಕ ರಶ್ಮಿಕಾ ಕ್ರೇಜ್ ಹೆಚ್ಚಾಗಿರುವುದು ಸುಳ್ಳಲ್ಲ. ಸಂಭಾವನೆ ಕೂಡ ಹೆಚ್ಚಿಸಿಕೊಂಡಿರುವ ಸಾಧ್ಯತೆಯಿದೆ. ಆದರೆ ಸದ್ಯಕ್ಕೆ ಆಕೆ ಚಿತ್ರವೊಂದಕ್ಕೆ 4ರಿಂದ 4.5 ಕೋಟಿ ರೂ. ಚಾರ್ಜ್ ಮಾಡುತ್ತಾರೆ ಎನ್ನುವುದೆಲ್ಲಾ ಸುಳ್ಳು. ಈ ವಿಚಾರವನ್ನು ಆಕೆ ಪರೋಕ್ಷವಾಗಿ ಇತ್ತೀಚೆಗೆ ಹೇಳಿದ್ದರು. ತಮ್ಮ ಸಂಭಾವನೆ ಕುರಿತು ವೈರಲ್ ಆಗಿದ್ದ ಟ್ವೀಟ್‌ಗೆ ರಿಪ್ಲೆ ಮಾಡಿದ್ದರು.

"ಯಾರು ಇದನ್ನೆಲ್ಲಾ ಹೇಳುತ್ತಾರೆ ಎಂದು ಅಚ್ಚರಿ ಆಗುತ್ತಿದೆ. ಇದನ್ನೆಲ್ಲಾ ನೋಡಿದ ಮೇಲೆ ನಾನು ಇನ್ನು ಮುಂದೆ 4.5 ಕೋಟಿ ರೂ. ಸಂಭಾವನೆ ಕೇಳಬೇಕು ಎನಿಸುತ್ತಿದೆ. ನಿರ್ಮಾಪಕರು ಯಾಕೆ ಎಂದು ಕೇಳಿದರೆ ಆಗ ನಾನು ಮಾಧ್ಯಮಗಳಲ್ಲಿ ಹೀಗೆ ಹೇಳುತ್ತಿದ್ದಾರೆ ಸರ್, ನಾನು ಅವರು ಹೇಳಿದಂತೆ ಜೀವಿಸಬೇಕು ಎನಿಸುತ್ತಿದೆ. ನಾನೇನು ಮಾಡಲಿ" ಎಂದು ನಕ್ಕಿದ್ದರು.

ಸದ್ಯ ಡಾರ್ಲಿಂಗ್ ಪ್ರಭಾಸ್ ಮುಂದಿನ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸುತ್ತಾರೆ ಎನ್ನುವ ಚರ್ಚೆ ಟಾಲಿವುಡ್‌ನಲ್ಲಿ ಶುರುವಾಗಿದೆ. 'ಸಲಾರ್'-1 ಬಳಿಕ ಪ್ರಭಾಸ್ ನಟನೆಯ 'ಕಲ್ಕಿ' ಹಾಗೂ 'ದಿ ರಾಜಾ ಸಾಬ್' ಸಿನಿಮಾಗಳು ಪ್ರೇಕ್ಷಕರ ಮುಂದೆ ಬರಲಿದೆ. ಈಗಾಗಲೇ 'ಸಲಾರ್'-2 ಚಿತ್ರದಲ್ಲಿ ನಟಿಸುವುದು ಪಕ್ಕಾ ಆಗಿದೆ. 'ಸ್ಪಿರಿಟ್' ಮತ್ತೊಂದು ಚಿತ್ರದಲ್ಲಿ ಪ್ರಭಾಸ್ ನಟಿಸುವ ಬಗ್ಗೆ ಚರ್ಚೆ ನಡೀತಿದೆ.

Rashmika Mandanna to play female lead in Prabhass next; reports

'ಅರ್ಜುನ್ ರೆಡ್ಡಿ' ಸಿನಿಮಾ ಮಾಡಿ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಸಂಚಲನ ಸೃಷ್ಟಿಸಿದ್ದರು. ಬಳಿಕ ಅದೇ ಚಿತ್ರವನ್ನು ಬಾಲಿವುಡ್ ಅಂಗಳಕ್ಕೆ ಕೊಂಡೊಯ್ದರು. ಶಾಹಿದ್ ಕಪೂರ್ ನಟಿಸಿದ 'ಕಬೀರ್ ಸಿಂಗ್' ಸಿನಿಮಾ ಕೂಡ ಗೆದ್ದಿತ್ತು. ಬಳಿಕ ಸಂದೀಪ್ 'ಅನಿಮಲ್' ಸಿನಿಮಾ ಕಟ್ಟಿಕೊಟ್ಟಿದ್ದರು. ಇದೀಗ ಪ್ರಭಾಸ್ ಹೀರೊ ಆಗಿ 'ಸ್ಪಿರಿಟ್' ಎನ್ನುವ ಸಿನಿಮಾ ಪ್ಲ್ಯಾನ್ ಮಾಡುತ್ತಿದ್ದಾರೆ.

'ಸ್ಪಿರಿಟ್' ಚಿತ್ರದಲ್ಲಿ ಪ್ರಭಾಸ್‌ನ ಪೊಲೀಸ್ ಆಫೀಸರ್ ಪಾತ್ರದಲ್ಲಿ ತೋರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇದೇ ಚಿತ್ರದಲ್ಲಿ ರಶ್ಮಿಕಾ ನಾಯಕಿಯಾಗಿ ನಟಿಸುತ್ತಾರೆ ಎನ್ನಲಾಗ್ತಿದೆ. 'ಅನಿಮಲ್' ಚಿತ್ರದಲ್ಲಿ ರಶ್ಮಿಕಾ ಪಾತ್ರವನ್ನು ಸಂದೀಪ್ ರೆಡ್ಡಿ ವಂಗಾ ಡಿಸೈನ್ ಮಾಡಿರುವ ರೀತಿ ಬಗ್ಗೆ ಸಾಕಷ್ಟು ಟೀಕೆ ವ್ಯಕ್ತವಾಗಿತ್ತು. ಆದರೆ ಕೆಲವರು ಮೆಚ್ಚಿಕೊಂಡಿದ್ದರು. ಆಕೆಯ ನಟನೆಯೂ ಅಭಿಮಾನಿಗಳಿಗೆ ಇಷ್ಟವಾಗಿತ್ತು.

'ಅನಿಮಲ್' ಚಿತ್ರದಲ್ಲಿ ರಶ್ಮಿಕಾ ನಟನೆ ಮೆಚ್ಚಿದ ಸಂದೀಪ್ 'ಸ್ಪಿರಿಟ್' ಚಿತ್ರಕ್ಕೆ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ಗುಸುಗುಸು ಶುರುವಾಗಿದೆ. 'ಸ್ಪಿರಿಟ್' ಸಿನಿಮಾ ಯಾವಾಗ ಸೆಟ್ಟೇರುತ್ತದೆ ಎನ್ನುವ ಬಗ್ಗೆ ಖಚಿತ ಮಾಹಿತಿ ಇಲ್ಲ. ಈ ವರ್ಷವೇ ಶುರು ಮಾಡುವುದಾಗಿ ನಿರ್ದೇಶಕರು ಹೇಳಿದ್ದರು. ಆದರೆ 'ಅನಿಮಲ್' ಸೀಕ್ವೆಲ್ ಮಾಡುವಂತೆಯೂ ಒತ್ತಡ ಹೆಚ್ಚಾಗಿದೆ. ಹಾಗಾಗಿ ಮೊದಲು ಯಾವ ಸಿನಿಮಾ ಸಿದ್ಧವಾಗುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ.

More from Filmibeat

English summary
Rashmika Mandanna to romance Prabhas in his next?;
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X