For Quick Alerts
  ALLOW NOTIFICATIONS  
  For Daily Alerts

  'ಸೈರಾ' ನಿರ್ದೇಶಕನ ಮುಂದಿನ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿ!

  |

  ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ತಮ್ಮ ಮುಂದಿನ ಚಿತ್ರವನ್ನು ನಿರ್ದೇಶಕ ಸುರೇಂದರ್ ರೆಡ್ಡಿ ಜೊತೆ ಮಾಡಲಿದ್ದಾರೆ ಎಂಬ ಸುದ್ದಿ ಸೌತ್ ಇಂಡಸ್ಟ್ರಿಯಲ್ಲಿ ಸದ್ದು ಮಾಡುತ್ತಿದೆ.

  ಮೆಗಾಸ್ಟಾರ್ ಚಿರಂಜೀವಿ ನಟನೆಯ ಸೈರಾ ನರಸಿಂಹ ರೆಡ್ಡಿ ಎಂಬ ಸೂಪರ್ ಹಿಟ್ ಚಿತ್ರ ನಿರ್ದೇಶಿಸಿದ್ದ ಸುರೇಂದರ್ ರೆಡ್ಡಿ ಮುಂದಿನ ಚಿತ್ರವನ್ನು ಅಖಿಲ್ ಅಕ್ಕಿಕೇನಿಗೆ ಮಾಡುವುದಾಗಿ ಘೋಷಿಸಿದ್ದರು.

  ಚೊಚ್ಚಲ ತಮಿಳು ಚಿತ್ರದ ಶೂಟಿಂಗ್ ಮುಗಿಸಿದ ರಶ್ಮಿಕಾ ಮಂದಣ್ಣ

  ಇದೀಗ, ಈ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ನಾಯಕಿಯಾಗುವ ಸಾಧ್ಯತೆ ಇದೆ. ಬಹಳ ದಿನಗಳಿಂದಲೂ ಅಖಿಲ್ ಜೊತೆ ರಶ್ಮಿಕಾ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿಗಳು ವರದಿಯಾಗುತ್ತಿತ್ತು. ಖಚಿತ ಮಾಹಿತಿ ಸಿಕ್ಕಿರಲಿಲ್ಲ. ಈಗಲೂ ಅಧಿಕೃತವಾಗಿ ಘೋಷಣೆ ಮಾಡಿಲ್ಲ. ಆದರೂ ಆಪ್ತವಲಯದಲ್ಲಿ ಇಂತಹದೊಂದು ಸುದ್ದಿ ಸದ್ದು ಮಾಡುತ್ತಿದೆ.

  ಅಲ್ಲು ಅರ್ಜುನ್ ನಟಿಸುತ್ತಿರುವ ಪುಷ್ಪ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಸಿನಿಮಾದ ಜೊತೆ ಜೊತೆಯಲ್ಲಿ ಅಖಿಲ್ ಹಾಗೂ ಸುರೇಂದರ್ ರೆಡ್ಡಿ ಚಿತ್ರಕ್ಕೂ ಸೈ ಎಂದಿದ್ದಾರೆ ಎನ್ನಲಾಗಿದೆ.

  ಸದ್ಯ ಅಖಿಲ್ ಅಕ್ಕಿನೇನಿ ಮೋಸ್ಟ್ ಎಲಿಜಿಬಲ್ ಬ್ಯಾಚುಲರ್ ಎಂಬ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಪೂಜಾ ಹೆಗ್ಡೆ ನಾಯಕಿಯಾಗಿದ್ದಾರೆ. ಈ ಸಿನಿಮಾ ಮುಗಿಯುತ್ತಿದ್ದಂತೆ ಸುರೇಂದರ್ ರೆಡ್ಡಿ ಸಿನಿಮಾ ಆರಂಭಿಸಲಿದ್ದಾರೆ.

  English summary
  South actress Rashmika mandanna will play lead role In Surender Reddy and akhil akkineni's Next project.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X