ಸಿತಾರ ಎಂಟರ್‌ಟೈನ್ಮೆಂಟ್ಸ್ ಬ್ಯಾನರ್‌ನಲ್ಲಿ ರಿಷಬ್‌ ಶೆಟ್ಟಿ ಸಿನಿಮಾ?

ಕನ್ನಡ ನಟ, ನಿರ್ದೇಶಕ ರಿಷಬ್ ಶೆಟ್ಟಿ ಈಗಾಗಲೇ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. 'ಕಾಂತಾರ- 1' ಚಿತ್ರಕ್ಕಾಗಿ ಪರಭಾಷಿಕರು ಕಾಯುವಂತಾಗಿದೆ. ಈ ಸಿನಿಮಾ ಬಳಿಕ ವಾಟ್ ನೆಕ್ಸ್ಟ್ ಎನ್ನುವವರಿಗೆ 2 ಸಿನಿಮಾಗಳ ಬಗ್ಗೆ ಮಾಹಿತಿ ಸಿಕ್ಕಿದೆ. ಆದರೆ ಇವೆಡರ ನಡುವೆ ಮತ್ತೊಂದು ಸಿನಿಮಾ ಮಾಡುವ ಬಗ್ಗೆ ಚರ್ಚೆ ಶುರುವಾಗಿದೆ.

ರಿಷಬ್ ಶೆಟ್ಟಿ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಹುಟ್ಟೂರಿನಲ್ಲಿ 'ಕಾಂತಾರ ಚಾಪ್ಟರ್-1' ಸಿನಿಮಾಗಳಲ್ಲಿ ಅವರು ಬ್ಯುಸಿಯಾಗಿದ್ದಾರೆ. ಅಲ್ಲೇ ಆಪ್ತರ ಜೊತೆ ಹುಟ್ಟುಹಬ್ಬ ಆಚರಿಸಿದ್ದಾರೆ. ಇದೇ ಸಂಭ್ರಮದಲ್ಲಿ ಚಿತ್ರದ ಹೊಸ ಪೋಸ್ಟರ್ ರಿಲೀಸ್ ಆಗಿ ಸದ್ದು ಮಾಡ್ತಿದೆ. ಮತ್ತೊಮ್ಮೆ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿ ರಿಷಬ್ ನಟಿಸಿದ್ದಾರೆ. ಜಬರ್ದಸ್ತ್ ಪೋಸ್ಟರ್ ಬಹಳ ಕುತೂಹಲ ಮೂಡಿಸಿದೆ. ಚಿತ್ರದ ಬಗ್ಗೆ ಸಾಕಷ್ಟು ವಿಚಾರಗಳು ಈ ಪೋಸ್ಟರ್‌ನಲ್ಲಿದೆ ಹುಡುಕಿ ಎಂದು ಚಿತ್ರತಂಡ ಹೇಳಿದೆ.

Rishab Shetty in Talks for New Pan-India Film with Sitara Entertainments Amid Kantara-1 Buzz

'ಕಾಂತಾರ' ಪ್ರೀಕ್ವೆಲ್ ಬಳಿಕ ರಿಷಬ್ ಶೆಟ್ಟಿ ಬರೀ ಪ್ಯಾನ್ ಇಂಡಿಯಾ ಸಿನಿಮಾಗಳ ಕಡೆ ಮುಖ ಮಾಡಿದ್ದಾರೆ. ತೆಲುಗಿನ 'ಹನುಮಾನ್' ಸೀಕ್ವೆಲ್ 'ಜೈ ಹನುಮಾನ್' ಚಿತ್ರದಲ್ಲಿ ನಟಿಸುವುದು ಪಕ್ಕಾ ಆಗಿದೆ. ಫೋಟೊಶೂಟ್ ನಡೆಸಿ ಚಿತ್ರದ ಬಗ್ಗೆ ಅಪ್‌ಡೇಟ್ ನೀಡಿತ್ತು ಚಿತ್ರತಂಡ. ಪ್ರಶಾಂತ್ ವರ್ಮಾ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ. ಮೈತ್ರಿ ಮೂವಿಮೇಕರ್ಸ್ ಬ್ಯಾನರ್ ಅಡಿಯಲ್ಲಿ ಸಿನಿಮಾ ನಿರ್ಮಾಣವಾಗಲಿದೆ.

ಛತ್ರಪತಿ ಶಿವಾಜಿ ಬಯೋಪಿಕ್ ಚಿತ್ರಕ್ಕೂ ರಿಷಬ್ ಶೆಟ್ಟಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ಕೂಡ ಅದ್ಧೂರಿಯಾಗಿ ಬರಲಿದೆ. ಸಂದೀಪ್ ಸಿಂಗ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ. ಸ್ವತಃ ನಿರ್ದೇಶಕರೇ ಸಿನಿಮಾ ನಿರ್ಮಾಣ ಮಾಡಲಿದ್ದಾರೆ. ರಿಷಬ್ ಈ ಚಿತ್ರದಲ್ಲಿ ನಟಿಸುವ ಬಗ್ಗೆ ಕನ್ನಡಿಗರು ಚಕಾರ ಎತ್ತಿದ್ದರು. ಮರಾಠಿ ದೊರೆಯ ಪಾತ್ರದಲ್ಲಿ ಕನ್ನಡ ನಟ ನಟಿಸುವುದು ಬೇಡ ಎಂದು ಮನವಿ ಮಾಡಿದ್ದರು.

Rishab Shetty in Talks for New Pan-India Film with Sitara Entertainments Amid Kantara-1 Buzz

'ಜೈ ಹನುಮಾನ್' ಹಾಗೂ 'ಶಿವಾಜಿ ಬಯೋಪಿಕ್' ಸಿನಿಮಾಗಳು ಯಾವಾಗ ಶುರುವಾಗುತ್ತದೆ ಎನ್ನುವ ಬಗ್ಗೆ ಮಾಹಿತಿ ಇಲ್ಲ. ಆದರೆ ತೆಲುಗಿನ ಸಿತಾರಾ ಎಂಟರ್‌ಟೈನ್‌ಮೆಂಟ್ಸ್ ಬ್ಯಾನರ್ ಅಡಿಯಲ್ಲಿ ರಿಷಬ್ ಸಿನಿಮಾ ಮಾಡ್ತಾರೆ ಎನ್ನಲಾಗ್ತಿದೆ. ಇದೇ ವಿಚಾರ ಈಗ ಟಾಲಿವುಡ್ ಅಂಗಳದಲ್ಲಿ ಗುಲ್ಲಾಗಿದೆ. ಇದು ಕೂಡ ಪ್ಯಾನ್ ಇಂಡಿಯಾ ಸಿನಿಮಾ ಆಗಿ 5 ಭಾಷೆಗಳಲ್ಲಿ ತೆರೆಗೆ ಬರುತ್ತದೆ ಎನ್ನುವ ಮಾತುಗಳು ಕೇಳಿಬರ್ತಿದೆ.

'ಲಕ್ಕಿ ಭಾಸ್ಕರ್', 'ಜೆರ್ಸಿ' ಸೇರಿ ಒಂದಷ್ಟು ಬಿಗ್ ಬಜೆಟ್ ಸಿನಿಮಾಗಳನ್ನು ಸಿತಾರಾ ಎಂಟರ್‌ಟೈನ್‌ಮೆಂಟ್ಸ್ ಬ್ಯಾನರ್ ನಿರ್ಮಾಣ ಮಾಡಿದೆ. ಸದ್ಯ ರಿಷಬ್ ಶೆಟ್ಟಿ ಗಮನ 'ಕಾಂತಾರ-1' ಸಿನಿಮಾ ಮುಗಿಸುವ ಕಡೆಗಿದೆ. ಅಕ್ಟೋಬರ್ 2ರಂದು ಚಿತ್ರ ತೆರೆಗೆ ಬರುವುದು ಖಚಿತವಾಗಿದೆ. ಮತ್ತೊಮ್ಮೆ ಸಿನಿಮಾ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಿಸಿದೆ. ಆ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದೆ.

ಸಿತಾರಾ ಎಂಟರ್‌ಟೈನ್‌ಮೆಂಟ್ಸ್ ಜೊತೆ ರಿಷಬ್ ಶೆಟ್ಟಿ ಸಿನಿಮಾ ಬಗ್ಗೆ ಅಧಿಕೃತ ಮಾಹಿತಿ ಇಲ್ಲ. ನಿರ್ದೇಶಕರು ಯಾರು? ಸಿನಿಮಾ ಶುರುವಾಗುವುದು ಯಾವಾಗ? ಎನ್ನುವ ಬಗ್ಗೆ ಯಾವುದೇ ಘೋಷಣೆ ಆಗಿಲ್ಲ. ನಿರ್ದೇಶಕ ಪ್ರಶಾಂತ್ ವರ್ಮಾ ಬೇರೆ ಸಿನಿಮಾದಲ್ಲಿ ಬ್ಯುಸಿ ಇರುವುದರಿಂದ ಅದಕ್ಕೂ ಮುನ್ನ ರಿಷಬ್ ಈ ಸಿನಿಮಾ ಮಾಡಬಹುದು ಎನ್ನುವ ಲೆಕ್ಕಾಚಾರ ಶುರುವಾಗಿದೆ.

'ಕಾಂತಾರ- 1' ಚಿತ್ರದ ಬಗ್ಗೆಯೂ ಹೆಚ್ಚಿನ ಸುಳಿವು ಬಿಟ್ಟುಕೊಟ್ಟಿಲ್ಲ. ರಿಷಬ್ ಹುಟ್ಟುಹಬ್ಬಕ್ಕೆ ಟೀಸರ್ ಬರುತ್ತದೆ ಎಂದು ಕಾಯುತ್ತಿದ್ದವರಿಗೆ ನಿರಾಸೆಯಾಗಿದೆ. ಬರೀ ಪೋಸ್ಟರ್ ರಿಲೀಸ್ ಮಾಡಿದೆ ಚಿತ್ರತಂಡ. ಇನ್ನು ಚಿತ್ರದ ಪಾತ್ರವರ್ಗದ ಬಗ್ಗೆಯೂ ಖಚಿತ ಮಾಹಿತಿ ಇಲ್ಲ.

More from Filmibeat

English summary
Rishab Shetty gears up for the release of ‘Kantara Chapter-1’, discussions are underway for a major pan-India project with Telugu banner Sitara Entertainments.
Read more about: rishab shetty kantara tollywood
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X