ಶಾರುಖ್ ಖಾನ್ ಸಿನಿಮಾದಲ್ಲಿ ಅಲ್ಲು ಅರ್ಜುನ್: 'ಜವಾನ್' ಜೊತೆ ಬಾಲಿವುಡ್‌ಗೆ 'ಪುಷ್ಪ' ಗ್ರ್ಯಾಂಡ್ ಎಂಟ್ರಿ?
'ಪಠಾಣ್' ಸಿನಿಮಾ ಮೂಲಕ ಶಾರುಖ್ ಖಾನ್ ಗ್ರ್ಯಾಂಡ್ ಆಗಿ ಕಮ್ ಬ್ಯಾಕ್ ಮಾಡಿದ್ದಾಗಿದೆ. ಬಾಕ್ಸಾಫೀಸ್‌ನಲ್ಲಿ ಬಾಲಿವುಡ್ ಸಿನಿಮಾಗಳ ದಾಖಲೆಗಳನ್ನೆಲ್ಲಾ ಅಳಿಸಿ ಹಾಕಿರೋ ಕಿಂಗ್ ಖಾನ್ ಮತ್ತೊಂದು ಸಿನಿಮಾದ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ಅದುವೇ 'ಜವಾನ್'.
ತಮಿಳು ನಿರ್ದೇಶಕ ಅಟ್ಲಿ ಆಕ್ಷನ್ ಕಟ್ ಹೇಳುತ್ತಿರುವ 'ಜವಾನ್' ಸಿನಿಮಾ ಮೇಲೆ ಎಲ್ಲರ ಕಣ್ಣಿದೆ. ತಮಿಳಿನಲ್ಲಿ ಬ್ಲಾಕ್‌ಬಸ್ಟರ್ ಹಿಟ್‌ಗಳನ್ನು ಕೊಟ್ಟಿರೋ ಅಟ್ಲಿ ಈಗ ಬಾಲಿವುಡ್‌ಗೆ ಎಂಟ್ರಿ ಕೊಟ್ಟಿದ್ದು, ಕಿಂಗ್ ಖಾನ್‌ಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇದೊಂದು ಕಡೆಯಾದರೆ, ಇನ್ನೊಂದು ಕಡೆ ಈ ಸಿನಿಮಾದಲ್ಲಿ ಅಲ್ಲು ಅರ್ಜುನ್ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ ಅನ್ನೋ ಗುಸು ಗುಸು ಇದೆ.
ಕಳೆದ ಕೆಲವು ದಿನಗಳಿಂದ ಶಾರುಖ್ ಖಾನ್ ಸಿನಿಮಾದಲ್ಲಿ ಅಲ್ಲು ಅರ್ಜುನ್ ಕಾಣಿಸಿಕೊಳ್ಳುತ್ತಾರೆ ಅನ್ನೋ ಸುದ್ದಿ ಓಡಾಡುತ್ತಲೇ ಇತ್ತು. ಆದರೆ, ಮತ್ತೊಂದು ಕಡೆ ಅಲ್ಲು ಅರ್ಜುನ್ 'ಜವಾನ್' ಸಿನಿಮಾವನ್ನು ತಿರಸ್ಕರಿಸಿದ್ದಾರೆ ಅಂತಲೂ ಹೇಳಲಾಗಿತ್ತು. ಈಗ ಬಾಲಿವುಡ್ ಅಂಗಳದಲ್ಲಿ ಹೊಸ ಸುದ್ದಿಯೊಂದು ಓಡಾಡುತ್ತಿದೆ.

'ಜವಾನ್' ಶಾರುಖ್ ಖಾನ್ ಅಭಿನಯದ ಮೊದಲ ಪ್ಯಾನ್ ಇಂಡಿಯಾ ಸಿನಿಮಾ. ಹೀಗಾಗಿ ಈ ಸಿನಿಮಾ ಬಗ್ಗೆ ಇನ್ನಿಲ್ಲದ ಕುತೂಹಲವಿದೆ. ಇದೇ ಕಾರಣಕ್ಕೆ ಅಟ್ಲಿ ಸ್ಟಾರ್ ನಟರನ್ನು ಕರೆದುಕೊಂಡು ಬರುತ್ತಿದ್ದಾರೆ. ಇದು ಬಾಲಿವುಡ್ ಸಿನಿಮಾ ಆಗಿದ್ದರೂ, ದಕ್ಷಿಣ ಭಾರತದಲ್ಲೂ ಗೆಲ್ಲಿಸುವುದಕ್ಕೆ ಶತಪ್ರಯತ್ನ ನಡೆಯುತ್ತಿದೆ.
ಈಗಾಗಲೇ ಶಾರುಖ್ ಖಾನ್ ಸಿನಿಮಾ ದಕ್ಷಿಣ ಭಾರತದ ಲೇಡಿ ಸೂಪರ್‌ಸ್ಟಾರ್ ನಯನತಾರಾ ಲೀಡ್ ರೋಲ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನೊಂದು ಕಡೆ ಪ್ರಿಯಾಮಣಿ ಕೂಡ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಚಿತ್ರತಂಡ ಅಧಿಕೃತವಾಗಿ ಎಲ್ಲೂ ಹೇಳಿಕೊಂಡಿಲ್ಲ. ಈ ಮಧ್ಯೆನೇ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಹೆಸರು ಓಡಾಡಿತ್ತು. ಅದೀಗ ಮತ್ತೆ ಸದ್ದು ಮಾಡುವುದಕ್ಕೆ ಶುರು ಮಾಡಿದೆ.
ಬಾಲಿವುಡ್‌ನಲ್ಲಿ ಅಲ್ಲು ಅರ್ಜುನ್ ಈಗಾಗಲೇ 'ಜವಾನ್' ಸಿನಿಮಾದಲ್ಲಿ ನಟಿಸಿದ್ದಾರೆ. ಅತಿಥಿ ಪಾತ್ರದಲ್ಲಿ ಕಂಡರೂ ಬಾಲಿವುಡ್‌ಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದಾರೆ ಅನ್ನೋ ಮಾತು ಕೇಳಿಬರುತ್ತಿದೆ. ಅಲ್ಲು ಅರ್ಜುನ್ ಈಗಾಗಲೇ ತಮ್ಮ ಭಾಗದ ಶೂಟಿಂಗ್ ಮುಗಿಸಿಕೊಟ್ಟಿದ್ದಾರಂತೆ. ಆದರೆ, ಈ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿಯನ್ನು ಬಿಟ್ಟಿಕೊಟ್ಟಿಲ್ಲ.
'ಜವಾನ್' ಸಿನಿಮಾ ಶೂಟಿಂಗ್ ಫುಲ್ ಸ್ವಿಂಗ್‌ನಲ್ಲಿ ನಡೆಯುತ್ತಿದೆ. ಅಟ್ಲಿ ಆದಷ್ಟು ಬೇಗ ಶೂಟಿಂಗ್ ಮುಗಿಸಿ ಸಿನಿಮಾ ರಿಲೀಸ್ ಮಾಡುವ ತರಾತುರಿಯಲ್ಲಿದ್ದಾರೆ. ಅಲ್ಲದೆ ಇದೇ ಈದ್‌ಗೆ ಟೀಸರ್ ರಿಲೀಸ್ ಮಾಡಲು ಸ್ಕೆಚ್ ಕೂಡ ಹಾಕಿದ್ದಾರಂತೆ. ಒಂದ್ವೇಳೆ ಟೀಸರ್ ರಿಲೀಸ್ ಆದರೆ, ಅದರಲ್ಲಿ ಅಲ್ಲು ಅರ್ಜುನ್ ಬಗ್ಗೆ ಸುಳಿವು ಬಿಟ್ಟುಕೊಡುತ್ತಾರಾ? ಅನ್ನೋ ಗುಮಾನಿ ಇದೆ.

ಅಲ್ಲು ಅರ್ಜುನ್ ಸದ್ಯ 'ಪುಷ್ಪ 2' ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗಷ್ಟೇ ಅಲ್ಲು ಅರ್ಜುನ್ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ಈ ವೇಳೆ 'ಪುಷ್ಪ' ಗ್ಲಿಮ್ಸ್ ಅನ್ನು ರಿಲೀಸ್ ಮಾಡಲಾಗಿತ್ತು. ಅಲ್ಲು ಫ್ಯಾನ್ಸ್ ಈ ಗ್ಲಿಮ್ಸ್ ನೋಡಿನೇ ಥ್ರಿಲ್ ಆಗಿದ್ದಾರೆ. ಎಲ್ಲಾ ಅಂದುಕೊಂಡಂತೆ ಆದರೆ, ಈ ವರ್ಷದ ಕೊನೆಯಲ್ಲಿ ಸಿನಿಮಾ ರಿಲೀಸ್ ಆದರೂ ಆಗಬಹುದು.


Click it and Unblock the Notifications











