ವಿಜಯ್ ದೇವರಕೊಂಡ ಮನೆಯಲ್ಲಿ ಸಂಕ್ರಾಂತಿ ಆಚರಿಸಿದ್ರಾ ರಶ್ಮಿಕಾ ಮಂದಣ್ಣ? ನೆಟ್ಟಿಗರು ಹೇಳುತ್ತಿರುವುದೇನು?

ನಟಿ ರಶ್ಮಿಕಾ ಮಂದಣ್ಣ ಟಾಲಿವುಡ್‌ಗೆ ಕಾಲಿಟ್ಟ ದಿನದಿಂದ ವಿಜಯ್ ದೇವರಕೊಂಡ ಜೊತೆ ಇವರ ಹೆಸರು ತಳುಕು ಹಾಕಿಕೊಳ್ಳುತ್ತಲೇ ಇದೆ. ಒಂದಲ್ಲಾ ಒಂದು ಕಾರಣಕ್ಕೆ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಸದ್ದು ಮಾಡುತ್ತಲೇ ಇರುತ್ತಾರೆ. ಈಗ ವಿಜಯ್ ದೇವರಕೊಂಡ ಮನೆಯಲ್ಲಿ ರಶ್ಮಿಕಾ ಮಂದಣ್ಣ ಸಂಕ್ರಾಂತಿ ಹಬ್ಬ ಆಚರಿಸಿದ್ದಾರೆ ಅಂತ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾ ಪಟ್ಟೆ ಚರ್ಚೆಯಾಗುತ್ತಿದೆ.

ರಶ್ಮಿಕಾ ಮಂದಣ್ಣ ಮೊದಲ ಟಾಲಿವುಡ್ ಸಿನಿಮಾದಲ್ಲೇ ವಿಜಯ್ ದೇವರಕೊಂಡಗೆ ಕಿಸ್ ಮಾಡಿದ್ದರು. ಇಲ್ಲಿಂದ ಇಬ್ಬರ ನಡುವೆ ಏನೋ ನಡೀತಿದೆ ಅನ್ನೋ ಅನುಮಾನ ನೆಟ್ಟಿಗರಿಗೆ. ಹೀಗಾಗಿ ಇವರಿಬ್ಬರೂ ಸೋಶಿಯಲ್ ಮೀಡಿಯಾದಲ್ಲಿ ಹಾಕುವ ಒಂದೊಂದು ಫೋಟೊವನ್ನೂ ಗಮನಿಸುತ್ತಾರೆ. ಆಕಸ್ಮಿಕವಾಗಿ ಇಬ್ಬರು ಜೊತೆಯಾಗಿ ಕಾಣಿಸಿಕೊಂಡರೂ ಬಿಡುವುದಿಲ್ಲ. ಟ್ರೋಲ್ ಮಾಡಿ ಬಿಡುತ್ತಾರೆ. ಈಗ ಕೂಡ ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಹಾಕಿದ ಫೋಟೊಗಳು ಮತ್ತೆ ಚರ್ಚೆಯಾಗುತ್ತಿವೆ.

ವಿಜಯ್ ಮನೆಯಲ್ಲಿ ರಶ್ಮಿಕಾ ಸಂಕ್ರಾಂತಿ

ವಿಜಯ್ ಮನೆಯಲ್ಲಿ ರಶ್ಮಿಕಾ ಸಂಕ್ರಾಂತಿ

ವಿಜಯ್ ದೇವರಕೊಂಡ ಸಂಕ್ರಾಂತಿ ಹಬ್ಬದಂದು ಸೋಶಿಯಲ್ ಮೀಡಿಯಾದಲ್ಲಿ ಒಂದು ಪೋಸ್ಟ್ ಮಾಡಿದ್ದರು. ಈ ಫೋಟೊದಲ್ಲಿ ವಿಜಯ್ ದೇವರಕೊಂಡ ಜೊತೆ ಅವರ ಸಹೋದರ ಆನಂದ್ ದೇವರಕೊಂಡ, ಅವರ ಅಪ್ಪ-ಅಮ್ಮ ಹಾಗೂ ಪ್ರೀತಿಯಿಂದ ಸಾಕಿದ ಶ್ವಾನದ ಜೊತೆಗಿರುವ ಫೋಟೊವನ್ನು ಶೇರ್ ಮಾಡಿದ್ದರು. ತಮ್ಮ ಮನೆಯ ಮುಂದೆ ಇರುವ ತೋಟದಲ್ಲಿ ಈ ಫೋಟೊವನ್ನು ತೆಗೆಯಲಾಗಿತ್ತು. ಇಂತಹದ್ದೇ ಬ್ಯಾಕ್‌ಗ್ರೌಂಡ್‌ನಲ್ಲಿರುವ ಫೋಟೊವನ್ನು ರಶ್ಮಿಕಾ ಮಂದಣ್ಣ ಕೂಡ ಶೇರ್ ಮಾಡಿದ್ದರು. ಈ ಎರಡು ಫೋಟೊಗಳನ್ನೇ ಇಟ್ಟುಕೊಂಡು ವಿಜಯ್ ದೇವರಕೊಂಡ ಮನೆಯಲ್ಲಿ ರಶ್ಮಿಕಾ ಸಂಕ್ರಾಂತಿ ಹಬ್ಬ ಆಚರಿಸಿದ್ದಾರೆಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ.

ವಿಜಯ್-ರಶ್ಮಿಕಾ ಕೂಡ ಒಂದೇ

ವಿಜಯ್-ರಶ್ಮಿಕಾ ಕೂಡ ಒಂದೇ

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಫೋಸ್ಟ್ ಮಾಡಿದ ಫೋಟೊಗಳ ಬ್ಯಾಕ್‌ಗ್ರೌಂಡ್ ಬಗ್ಗೆ ಅಷ್ಟೇ ಮಾತಾಡುತ್ತಿಲ್ಲ. ಇಬ್ಬರೂ ಒಂದೇ ಬಣ್ಣದ ಉಡುಪುಗಳನ್ನು ಧರಿಸಿದ್ದಾರೆ. ಹೀಗಾಗಿ ಇಬ್ಬರೂ ಒಂದೇ ಕಡೆ ಸಂಕ್ರಾಂತಿ ಹಬ್ಬ ಆಚರಿಸಿದ್ದಾರೆ ಎನ್ನುವುದು ನೆಟ್ಟಿಗರ ವಾದ. ಇದರೊಂದಿಗೆ ಇಬ್ಬರ ನಡುವೆ ಏನೋ ನಡೀತಿದೆ ಅಂತಾನೂ ಮಾತಾಡಿಕೊಳ್ಳುತ್ತಿದ್ದಾರೆ.

ಗೋವಾದಲ್ಲಿ ರಶ್ಮಿಕಾ-ವಿಜಯ್ ಸಂಭ್ರಮಾಚರಣೆ

ಗೋವಾದಲ್ಲಿ ರಶ್ಮಿಕಾ-ವಿಜಯ್ ಸಂಭ್ರಮಾಚರಣೆ

ಹೊಸ ವರ್ಷದ ಆಚರಣೆಗೆ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಗೋವಾಗೆ ತೆರೆಳಿದ್ದರು. ವಿಜಯ್ ದೇವರಕೊಂಡ ಕುಟುಂಬದ ಜೊತೆ ರಶ್ಮಿಕಾ ಮಂದಣ್ಣ ಗೋವಾದಲ್ಲಿ ಕಾಣಿಸಿಕೊಂಡಿದ್ದರು. ಆಗಲೂ ಕೂಡ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ ಫೋಟೊವೊಂದು ಭಾರೀ ಸದ್ದು ಮಾಡಿತ್ತು. ಇಬ್ಬರೂ ಗೋವಾದಲ್ಲೂ ಒಟ್ಟಿಗೆ ಹೊಸ ವರ್ಷವನ್ನು ಸಂಭ್ರಮಿಸಿರುವುದು ಖಾತ್ರಿಯಾಗಿತ್ತು. ಈಗ ಸಂಕ್ರಾಂತಿ ಹಬ್ಬವನ್ನೂ ವಿಜಯ್ ಮನೆಯಲ್ಲಿ ಆಚರಿಸಿದ್ದು, ಇಬ್ಬರು ಡೇಟಿಂಗ್ ಮಾಡುತ್ತಿದ್ದಾರೆಂಬ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.

ಈ ಜೋಡಿ ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿ

ಈ ಜೋಡಿ ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿ

ರಶ್ಮಿಕಾ ಮಂದಣ್ಣ ಎರಡು ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅಮಿತಾಬ್ ಬಚ್ಚನ್ ಜೊತೆ 'ಗುಡ್ ಬೈ' ಹಾಗೂ ಸಿದ್ಧಾರ್ಥ್ ಮಲ್ಹೋತ್ರಾ ಜೊತೆ 'ಮಿಷನ್ ಮಜ್ನು' ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇತ್ತ ವಿಜಯ್ ದೇವರಕೊಂಡ ಕೂಡ ಬಾಲಿವುಡ್‌ಗೆ ಕಾಲಿಟ್ಟಿದ್ದು, ಪುರಿ ಜಗನ್ನಾಥ್ ನಿರ್ದೇಶಿಸುತ್ತಿರುವ 'ಲೈಗರ್' ಚಿತ್ರದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಇಬ್ಬರೂ ಬಾಲಿವುಡ್‌ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದು, ಮುಂಬೈನಲ್ಲಿಯೇ ಹೆಚ್ಚು ಸಮಯ ಕಳೆಯುತ್ತಿದ್ದಾರೆ.

More from Filmibeat

English summary
Rumours around that Rashmika has celebrated Sankranthi in the Vijay Deverakondas house. Vijay Deverakonda has posted a picture of his family in their garden. Rashmika also posted a picture with a similar garden background.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X