Don't Miss!
- Sports
IND vs NZ 3rd T20: ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಮಿಂಚು; ನ್ಯೂಜಿಲೆಂಡ್ ವಿರುದ್ಧ ಸರಣಿ ಗೆದ್ದ ಭಾರತ
- Lifestyle
ಗರುಡ ಪುರಾಣ ಪ್ರಕಾರ ಈ 9 ಬಗೆಯ ವ್ಯಕ್ತಿಗಳ ಮನೆಯಲ್ಲಿ ಆಹಾರ ತಿನ್ನಲೇಬಾರದು
- News
ತಂಬಾಕು ನಿಯಂತ್ರಣಕ್ಕೆ ಮೈಸೂರು ಜಿಲ್ಲಾಧಿಕಾರಿ ತೆಗೆದುಕೊಂಡ ಕ್ರಮಗಳು, ಇಲ್ಲಿದೆ ವಿವರ
- Automobiles
ಹೊಸ ಇನೋವಾ ಹೈಕ್ರಾಸ್ ಬಲದೊಂದಿಗೆ ಮಾರಾಟದಲ್ಲಿ ದಾಖಲೆ ಮಟ್ಟದ ಬೆಳವಣಿಗೆ ಸಾಧಿಸಿದ ಟೊಯೊಟಾ
- Technology
ಚೀನಾದಲ್ಲಿ ಸೌಂಡ್ ಮಾಡಿದ್ದ ಈ ಡಿವೈಸ್ ಇದೀಗ ಜಾಗತಿಕ ಮಾರುಕಟ್ಟೆಗೆ ಎಂಟ್ರಿ!
- Finance
Union Budget 2023: ಹೊಸ ತೆರಿಗೆ ಪದ್ಧತಿಯಡಿಯಲ್ಲಿ ತೆರಿಗೆ ಲೆಕ್ಕಾಚಾರ ಹೇಗೆ?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಸೀತಾ ಮಾತೆಯಾಗಿ ಬಾಲಿವುಡ್‌ಗೆ ಸಾಯಿ ಪಲ್ಲವಿ ಎಂಟ್ರಿ!
ಒಂದ್ಕಡೆ ಸಾಯಿ ಪಲ್ಲವಿ ಚಿತ್ರರಂಗ ಬಿಟ್ಟು ಡಾಕ್ಟರ್ ಆಗಿ ಜನರ ಸೇವೆ ಮಾಡುತ್ತಾರೆ ಎನ್ನುವ ಮಾತುಗಳು ಕೇಳಿಬರ್ತಿದೆ. ಮತ್ತೊಂದ್ಕಡೆ ಅವರು ಬಾಲಿವುಡ್ ಅಂಗಳಕ್ಕೆ ಜಿಗಿಯುವ ಬಗ್ಗೆ ಗುಸುಗುಸು ಶುರುವಾಗಿದೆ. ಅದು ಕೂಡ ಪೌರಾಣಿಕ ಸಿನಿಮಾ ಮೂಲಕ ಅನ್ನುವುದು ವಿಶೇಷ.
ಗ್ಲಾಮರ್‌ನಿಂದ ದೂರವೇ ಉಳಿದಿರುವ ಸಾಯಿ ಪಲ್ಲವಿ ನಟನೆಗೆ ಅವಕಾಶ ಇರುವಂತಹ ಸಿನಿಮಾಗಳಲ್ಲಿ ಮಾತ್ರ ನಟಿಸುತ್ತಾರೆ. ಆದರೆ ಇತ್ತೀಚೆಗೆ ರೌಡಿ ಬೇಬಿ ನಟಿಸಿದ 2 ಸಿನಿಮಾಗಳು ಬಾಕ್ಸಾಫೀಸ್‌ನಲ್ಲಿ ಮುಗ್ಗರಿಸಿತ್ತು. ಆಕೆ ಹೊಸ ಸಿನಿಮಾ ಕೂಡ ಒಪ್ಪಿಕೊಂಡಿರಲಿಲ್ಲ. ಹಾಗಾಗಿ ಸಹಜವಾಗಿಯೇ ಚಿತ್ರರಂಗ ತೊರೆಯುತ್ತಾರಾ ಎನ್ನುವ ಅನುಮಾನವನ್ನು ಕೆಲವರು ವ್ಯಕ್ತಪಡಿಸಿದ್ದರು. ಆದರೆ ಈಗ ರಾಮಾಯಣ ಕಾವ್ಯ ಆಧರಿಸಿ ನಿರ್ಮಾಣವಾಗುವ ಬಾಲಿವುಡ್ ಚಿತ್ರದಲ್ಲಿ ಸೀತೆಯಾಗಿ ಸಾಯಿ ಪಲ್ಲವಿ ನಟಿಸ್ತಾರೆ ಎನ್ನಲಾಗ್ತಿದೆ.
ಪತ್ನಿಗೆ
ತೆಲುಗು
ನಟ
ನಿತಿನ್
ಡಿವೋರ್ಸ್?
ಕೊಡಲ್ಲ
ಅಂದ್ರೆ
ಸಿನಿಮಾ
ಸಿಗಲ್ಲ!
ಬಾಲಿವುಡ್ ಚಿತ್ರ ನಿರ್ಮಾಪಕ ಮಧು ಮಂತೇನಾ ಹಲವು ವರ್ಷಗಳಿಂದ ರಾಮಾಯಣ ಕಾವ್ಯವನ್ನು ಸಿನಿಮಾ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಮುಂದಿನ ವರ್ಷ ಸೆಪ್ಟೆಂಬರ್‌ನಲ್ಲಿ ಈ ಸಿನಿಮಾ ಸೆಟ್ಟೇರುವ ಸಾಧ್ಯತೆಯಿದೆ. ಈಗಾಗಲೇ ರಾಮಾಯಣ ಕುರಿತು ಸಾಕಷ್ಟು ಚಿತ್ರಗಳು ಬಂದಿದ್ದರೂ ಈ ಚಿತ್ರವನ್ನು ಬಹಳ ಭಿನ್ನವಾಗಿ ಮಾಡುತ್ತಿರುವಾಗಿ ನಿರ್ಮಾಪಕರು ಹೇಳಿದ್ದರು.

ಸೀತಾ ಪಾತ್ರದಲ್ಲಿ ಸಾಯಿ ಪಲ್ಲವಿ?
ಮಧು ಮಂತೇನ ಬಹುಕೋಟಿ ವೆಚ್ಚದಲ್ಲಿ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಭಾರತೀಯ ಚಿತ್ರರಂಗದ ಖ್ಯಾತ ಕಲಾವಿದರನ್ನು ತಾರಾಗಣಕ್ಕೆ ಆಯ್ಕೆ ಮಾಡಿಕೊಳ್ಳುವುದಾಗಿ ಹೇಳಿದ್ದರು. ಮುಖ್ಯವಾಗಿ ನಟನೆಯಲ್ಲಿ ಪಳಗಿದವರನ್ನು ಆರಿಸಿಕೊಳ್ಳುವುದಾಗಿ ಹೇಳಿದ್ದರು. ಸೀತಾಮಾತೆ ಪಾತ್ರಕ್ಕೆ ಕರೀನಾ ಕಪೂರ್, ದೀಪಿಕಾ ಪಡುಕೋಣೆ ಹೆಸರು ಕೇಳಿಬರ್ತಿತ್ತು. ಆದರೆ ಈಗ ಈ ಲಿಸ್ಟ್‌ಗೆ ಸಾಯಿ ಪಲ್ಲವಿ ಹೆಸರು ಸೇರಿಕೊಂಡಿದೆ.

ರಾಮನಾಗಿ ರಣ್‌ಬೀರ್ ಕಪೂರ್?
ಚಿತ್ರದಲ್ಲಿ ಶ್ರೀರಾಮನ ಪಾತ್ರಕ್ಕೆ ರಣ್‌ಬೀರ್ ಕಪೂರ್ ಹೆಸರು ಚಾಲ್ತಿಯಲ್ಲಿ. ರಾವಣಾಸುರ ಪಾತ್ರಕ್ಕೆ ಹೃತಿಕ್ ರೋಷನ್ ನಟಿಸುವ ಸಾಧ್ಯತೆಯಿದೆಯಂತೆ. ಸೀತಾ ಮಾತೆ ಪಾತ್ರಕ್ಕೆ ಸಾಯಿ ಪಲ್ಲವಿ ಉತ್ತಮ ಆಯ್ಕೆ ಎಂದು ಅಭಿಮಾನಿಗಳು ಕೇಳಿದ್ದಾರೆ. ಫ್ಯಾನ್ ಮೇಡ್ ಪೋಸ್ಟರ್‌ಗಳನ್ನು ಡಿಸೈನ್ ಮಾಡಿ ಶೇರ್ ಮಾಡುತ್ತಿದ್ದಾರೆ.

2 ಚಿತ್ರಗಳು ಫ್ಲಾಫ್
ಸಾಯಿ ಪಲ್ಲವಿ ನಟಿಸಿದ ಇತ್ತೀಚಿನ 2 ಸಿನಿಮಾಗಳು ಹೀನಾಯವಾಗಿ ಸೋಲುಂಡಿವೆ. ಕಾಶ್ಮೀರಿ ಪಂಡಿತರ ಹತ್ಯೆ ಕುರಿತು ಆಕೆ ನೀಡಿದ ವಿವಾದಾತ್ಮಕ ಹೇಳಿಕೆಯೇ ಈ ಸಿನಿಮಾಗಳ ಸೋಲಿಗೆ ಕಾರಣ ಎನ್ನುವ ಮಾತುಗಳು ಕೂಡ ಕೇಳಿ ಬಂದಿತ್ತು. ಸದ್ಯ ಆಕೆಯ ಕೈಯಲ್ಲಿ ಯಾವುದೇ ಸಿನಿಮಾಗಳಿಲ್ಲ. ಕಮಲ್ ಹಾಸನ್ ನಿರ್ಮಾಣದ ಚಿತ್ರದಲ್ಲಿ ಶಿವಕಾರ್ತಿಕೇಯನ್ ಜೋಡಿಯಾಗಿ ರೌಡಿ ಬೇಬಿ ನಟಿಸ್ತಾರೆ ಎನ್ನಲಾಗ್ತಿದೆ.

ಸಿನಿಮಾ ಬಿಟ್ಟು ಡಾಕ್ಟರ್ ಆಗ್ತಾರಾ?
ನಟಿ ಸಾಯಿ ಪಲ್ಲವಿ ಎಂಬಿಬಿಎಸ್ ಓದಿಕೊಂಡಿದ್ದಾರೆ. ಸಾಕಷ್ಟು ಬಾರಿ ಈ ವಿಚಾರವನ್ನು ಹೇಳಿಕೊಂಡಿದ್ದಾರೆ. ಮುಂದೊಂದು ದಿನ ಡಾಕ್ಟರ್ ಆಗಿ ಜನರ ಸೇವೆ ಮಾಡುವ ಇಂಗಿತವನ್ನು ವ್ಯಕ್ತಪಡಿಸಿದ್ದರು. ಸದ್ಯ ಆಕೆ ಯಾವುದೇ ಸಿನಿಮಾ ಒಪ್ಪಿಕೊಳ್ಳದೇ ಇರುವುದನ್ನು ನೋಡಿ ತಮ್ಮ ಇಷ್ಟದ ಕೆಲಸ ಮಾಡಲು ಮುಂದಾಗಿದ್ದಾರೆ ಎನ್ನಲಾಗ್ತಿದೆ. ಈಗಾಗಲೇ ಒಂದು ಆಸ್ಪತ್ರೆ ಕೂಡ ನಿರ್ಮಿಸ್ತಿದ್ದು, ಅಲ್ಲೇ ಡಾಕ್ಟರ್ ಆಗಿ ಸೇವೆ ಸಲ್ಲಿಸುತ್ತಾರೆ ಎನ್ನುವ ಮಾತುಗಳು ಕೇಳಿಬರ್ತಿದೆ.