'45' ಸಿನಿಮಾ ರಿಲೀಸ್ ಪೋಸ್ಟ್‌ಪೋನ್ ಗ್ಯಾರಂಟಿ? ಶಿವಣ್ಣನ ಹುಟ್ಟುಹಬ್ಬಕ್ಕೆ ಅನೌನ್ಸ್ ಆಗುತ್ತಾ?

ಸ್ಯಾಂಡಲ್‌ವುಡ್‌ನ ಬಹು ನಿರೀಕ್ಷೆಯ ಸಿನಿಮಾ '45'. ಕನ್ನಡ ಚಿತ್ರರಂಗದ ಸ್ಟಾರ್ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಇದೇ ಮೊದಲ ಬಾರಿಗೆ ನಿರ್ದೇಶಿಸಿದ್ದಾರೆ. ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್, ಉಪೇಂದ್ರ ಹಾಗೂ ರಾಜ್‌ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ಈ ಸಿನಿಮಾ ಈಗಾಗಲೇ ಕುತೂಹಲವನ್ನು ಕೆರಳಿಸಿದೆ. ಈ ಸಿನಿಮಾದ ಚಿಕ್ಕದೊಂದು ತುಣುಕು ಕನ್ನಡ ಚಿತ್ರರಂಗದಲ್ಲಿ ಹೊಸ ಟ್ರೆಂಡ್ ಹುಟ್ಟಾಕಬಹುದು ಎಂಬ ನಿರೀಕ್ಷೆಯಿದೆ.

ಅರ್ಜುನ್ ಜನ್ಯ ತಮ್ಮ ಚೊಚ್ಚಲ ಸಿನಿಮಾವನ್ನು ಆಗಸ್ಟ್ 15 ರಂದು ಬಿಡುಗಡೆ ಮಾಡುವುದಾಗಿ ಅನೌನ್ಸ್ ಮಾಡಿದ್ದಾರೆ. ಆದರೆ, ಸಿನಿಮಾ ಮಂದಿ ಮಾತ್ರ ಈಗಾಗಲೇ ಘೋಷಣೆಯಾದ ದಿನದಂದು ರಿಲೀಸ್ ಆಗುವುದೇ ಇಲ್ಲ ಎಂದು ಹೇಳುತ್ತಿದ್ದಾರೆ. ಅದಕ್ಕೆ ಕಾರಣ ಎರಡು ಪರಭಾಷೆಯ ಸಿನಿಮಾಗಳು. ಕಳೆದ ಕೆಲವು ದಿನಗಳಿಂದ '45' ರಿಲೀಸ್ ಪೋಸ್ಟ್‌ಪೋನ್ ಆಗುತ್ತೆ ಎಂಬ ಮಾತುಗಳು ಕೇಳಿ ಬರುತ್ತಲೇ ಇತ್ತು.

Shivarajkumar Upendra Raj B Shetty starrer 45 movie may postpone to two weeks due to coolie war 2 release

ಈಗ '45' ಸಿನಿಮಾ ರಿಲೀಸ್ ಮುಂದೂಡಿಕೆ ಬಗ್ಗೆ ಮತ್ತೆ ಸ್ಯಾಂಡಲ್‌ವುಡ್‌ನಲ್ಲಿ ಬಲವಾಗಿ ಚರ್ಚೆಯಾಗುತ್ತಿದೆ. ಇಷ್ಟೇ ಅಲ್ಲದೆ ಶಿವಣ್ಣ ಹುಟ್ಟುಹಬ್ಬದಂದು ಸಿನಿಮಾ ಬಿಡುಗಡೆಯ ಹೊಸ ದಿನಾಂಕವನ್ನು ಘೋಷಣೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಹಾಗಿದ್ದರೆ, '45' ಹೊಸ ರಿಲೀಸ್ ಡೇಟ್ ಯಾವುದು? ಎರಡು ಡೇಟ್‌ಗಳಲ್ಲಿ ಚಿತ್ರತಂಡದ ಆಯ್ಕೆ ಯಾವುದು? ಗಾಂಧಿನಗರದಲ್ಲಿ ಹರಿದಾಡುತ್ತಿರುವ ಸುದ್ದಿಯೇನು? ತಿಳಿಯುವುದಕ್ಕೆ ಮುಂದೆ ಓದಿ.

'45' ಸಿನಿಮಾವನ್ನು ಆಗಸ್ಟ್ 15ಕ್ಕೆ ರಿಲೀಸ್ ಮಾಡುವುದಕ್ಕೆ ಅರ್ಜುನ್ ಜನ್ಯ ಹಾಗೂ ನಿರ್ಮಾಪಕರು ಪ್ಲಾನ್ ಮಾಡಿಕೊಂಡಿದ್ದರು. ಆದರೆ, ಈ ವೇಳೆ ಸೂಪರ್‌ಸ್ಟಾರ್ ರಜನಿಕಾಂತ್ ನಟಿಸಿದ 'ಕೂಲಿ' ಸಿನಿಮಾ ರಿಲೀಸ್ ಆಗುತ್ತಿದೆ. ಹೇಳಿ ಕೇಳಿ ಇದು ಕೂಡ ಬಹುತಾರಾಗಣದ ಸಿನಿಮಾ. ರಜನಿಕಾಂತ್ ಅಂತ ಸೂಪರ್‌ಸ್ಟಾರ್ ನಟಿಸಿರುವ ಸಿನಿಮಾ ಕರ್ನಾಟಕದಲ್ಲೂ ಅತೀ ಹೆಚ್ಚು ಸ್ಕ್ರೀನ್‌ಗಳಲ್ಲಿ ರಿಲೀಸ್ ಆಗಲಿದೆ. ಅಲ್ಲದೆ ಈ ಸಿನಿಮಾದಲ್ಲೂ ಉಪೇಂದ್ರ ನಟಿಸಿರುವುದರಿಂದ ಕ್ಲಾಶ್ ಆಗಲಿದೆ.

'ಕೂಲಿ' ಪ್ಯಾನ್ ಇಂಡಿಯಾ ರಿಲೀಸ್. ತಮಿಳು, ತೆಲುಗು, ಮಲಯಾಳಂ, ಹಿಂದಿ ಸೇರಿದಂತೆ ಕನ್ನಡ ಭಾಷೆಯಲ್ಲಿಯೂ ಈ ಸಿನಿಮಾ ಬಿಡುಗಡೆಯಾಗುತ್ತಿದೆ. ಈ ಹಿಂದೆ ರಜನಿಕಾಂತ್ ನಟಿಸಿದ 'ಜೈಲರ್' ಸಿನಿಮಾ ಕೂಡ ಕರ್ನಾಟಕದಲ್ಲಿ ದೊಡ್ಡ ಮಟ್ಟಕ್ಕೆ ರಿಲೀಸ್ ಆಗಿತ್ತು. ಬಾಕ್ಸಾಫೀಸ್‌ನಲ್ಲೂ ದೊಡ್ಡ ಮಟ್ಟಕ್ಕೆ ಸದ್ದು ಮಾಡಿತ್ತು. ಈ ಹಿನ್ನೆಲೆಯಲ್ಲಿ 'ಕೂಲಿ' ಕೂಡ ಅದಕ್ಕೂ ದೊಡ್ಡ ಮಟ್ಟದಲ್ಲಿ ರಿಲೀಸ್ ಆಗೋದು ಕನ್ಫರ್ಮ್. ಇತ್ತ 45 ಕೂಡ ದೊಡ್ಡ ಸಿನಿಮಾ. ಕನ್ನಡ ಮೂವರು ಸ್ಟಾರ್‌ಗಳು ನಟಿಸಿರುವ ಈ ಸಿನಿಮಾಗೂ ಹೆಚ್ಚು ಸ್ಕ್ರೀನ್‌ಗಳು ಬೇಕು.

Shivarajkumar Upendra Raj B Shetty starrer 45 movie may postpone to two weeks due to coolie war 2 release

'ಕೂಲಿ' ಜೊತೆಗೆ ಹೃತಿಕ್ ರೋಷನ್ ಹಾಗೂ ಜೂ.ಎನ್‌ಟಿಆರ್ ನಟಿಸಿರುವ 'ವಾರ್ 2' ಸಿನಿಮಾ ಕೂಡ ರಿಲೀಸ್ ಆಗುತ್ತಿದೆ. ಈ ಸಿನಿಮಾಗೂ ಸಿಕ್ಕಾಪಟ್ಟೆ ಕ್ರೇಜ್ ಇದೆ. ಹಿಂದಿ, ತೆಲುಗು ಹಾಗೂ ತಮಿಳಿನಲ್ಲಿ ಸಿನಿಮಾ ರಿಲೀಸ್ ಆಗುತ್ತಿದ್ದು, ಬೆಂಗಳೂರಿನಂತಹ ನಗರಗಳಲ್ಲಿ ಅತೀ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆಯಾಗುತ್ತೆ. ಹೀಗಾಗಿ 45 ತಂಡ ಈ ಎರಡು ಸಿನಿಮಾದ ಜೊತೆ ಕ್ಲ್ಯಾಶ್ ಮಾಡಿಕೊಳ್ಳದೆ ಇರುವುದಕ್ಕೆ ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಆಗಸ್ಟ್ 15ಕ್ಕೆ ರಿಲೀಸ್ ಆಗಬೇಕಿದ್ದ '45' ಸಿನಿಮಾವನ್ನು ಎರಡು ವಾರ ಹಾಗೂ ಮೂರು ವಾರ ಮುಂದೂಡಲಿದ್ದಾರೆಂತೆ. ಆಗಸ್ಟ್ 27 ರಂದು ಇಲ್ಲವೇ ಸೆಪ್ಟೆಂಬರ್ ಮೊದಲನೇ ವಾರದಂದು ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ನಿರ್ಧರಿಸಿದೆ ಅನ್ನೋ ಮಾತು ಕೇಳಿಬರುತ್ತಿವೆ. ಅಂದರೆ, ಆಗಸ್ಟ್ 27 ಅಥವಾ ಸೆಂಪ್ಟೆಂಬರ್ 5ಕ್ಕೆ ಬಿಡುಗಡೆ ಮಾಡುವುದಕ್ಕೆ ಚಿಂತನೆ ನಡೆದಿದೆ. ಇದನ್ನು ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ಹುಟ್ಟುಹಬ್ಬದಂದು ಅಧಿಕೃತವಾಗಿ ಅನೌನ್ಸ್ ಮಾಡುವ ಸಾಧ್ಯತೆಯಿದೆ ಎಂದು ಗಾಂಧಿನಗರದಲ್ಲಿ ಜೋರಾಗಿ ಚರ್ಚೆಯಾಗುತ್ತಿದೆ.

More from Filmibeat

English summary
Shivarajkumar, Upendra, Raj B Shetty starrer 45 movie may postpone to two weeks due to coolie war 2 release.
Read more about: shivarajkumar upendra movie
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X