ಮಹೇಶ್ ಬಾಬು ಸಿನಿಮಾದಲ್ಲಿ ನಟಿಸುತ್ತಿಲ್ಲ ಸುದೀಪ್: ಕನ್ನಡದ ಮತ್ತೊಬ್ಬ ಸ್ಟಾರ್ ನಟ ಅಭಿನಯ
ಟಾಲಿವುಡ್ ನ ಸ್ಟಾರ್ ನಟ ಮಹೇಶ್ ಬಾಬು ಸದ್ಯ ಸರ್ಕಾರು ವಾರಿ ಪಾಠ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚಿಗಷ್ಟೆ ಮಹೇಶ್ ಬಾಬು ಹೊಸ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದ್ದು ಅಭಿಮಾನಿಗಳ ಗಮನ ಸೆಳೆಯುತ್ತಿದೆ. ಸರ್ಕಾರ ವಾರಿ ಪಾಠ ಸಿನಿಮಾಗೆ ನಾಯಕಿಯಾರು, ವಿಲನ್ ಯಾರು ಎಂಬಿತ್ಯಾದಿ ಪ್ರಶ್ನೆಗಳು ಅಭಿಮಾನಿಗಳನ್ನು ಕಾಡುತ್ತಿದೆ.
ಮಹೇಶ್ ಬಾಬು ಸಿನಿಮಾದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯಿಸಲಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿತ್ತು. ಆದರೀಗ ಕಿಚ್ಚ ಸುದೀಪ್ ಮಹೇಶ್ ಬಾಬು ಸಿನಿಮಾದಲ್ಲಿ ಅಭಿನಯಿಸುತ್ತಿಲ್ಲ ಎಂದು ಹೇಳಲಾಗುತ್ತಿದೆ. ಸುದೀಪ್ ಬದಲಿಗೆ ಕನ್ನಡದ ಮತ್ತೊಬ್ಬ ಸ್ಟಾರ್ ನಟ ರಿಯಲ್ ಸ್ಟಾರ್ ಉಪೇಂದ್ರ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದೆ. ಮುಂದೆ ಓದಿ...

ಮಹೇಶ್ ಬಾಬು ಸಿನಿಮಾದಲ್ಲಿ ಇರ್ತಾರಾ ಸುದೀಪ್?
ತೆಲುಗಿನಲ್ಲಿ ಕೆಲವು ಸಿನಿಮಾಗಳಲ್ಲಿ ಅಭಿನಯಿಸಿರುವ ಸುದೀಪ್, ಮಹೇಶ್ ಬಾಬು ಸಿನಿಮಾದಲ್ಲೂ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಕೊನೆಯದಾಗಿ ಸುದೀಪ್ ತೆಲುಗಿನಲ್ಲಿ ಸೈರಾ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಆದರೀಗ ಮತ್ತೆ ವಿಲನ್ ಆಗಿ ತೆಲುಗಿನಲ್ಲಿ ಅಬ್ಬರಿಸಲಿದ್ದಾರೆ ಎನ್ನುವ ಮಾತು ಹರಿದಾಡುತ್ತಿದೆ.

ಮಹೇಶ್ ಬಾಬು ಸಿನಿಮಾದಲ್ಲಿ ರಿಯಲ್ ಸ್ಟಾರ್
ರಿಯಲ್ ಸ್ಟಾರ್ ಉಪೇಂದ್ರ, ಮಹೇಶ್ ಬಾಬು ಅಭಿನಯದ ಬಹುನಿರೀಕ್ಷೆಯ ಸರ್ಕಾರು ವಾರಿ ಪಾಠೆ ಸಿನಿಮಾದಲ್ಲಿ ವಿಲನ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಮಾತು ಟಾಲಿವುಡ್ ಅಂಗಳದಲ್ಲಿ ಕೇಳಿ ಬರುತ್ತಿದೆ. ತೆಲುಗು ಚಿತ್ರರಂಗ ಉಪೇಂದ್ರ ಅವರಿಗೇನು ಹೊಸದಲ್ಲ. ಈಗಾಗಲೆ ಉಪೇಂದ್ರ ಸಾಕಷ್ಟು ತೆಲುಗು ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕೊನೆಯದಾಗಿ ಉಪೇಂದ್ರ ಸನ್ ಆಫ್ ಸತ್ಯಮೂರ್ತಿ ಸಿನಿಮಾದಲ್ಲಿ ನಟಿಸಿದ್ದಾರೆ.

ಸುದೀಪ್ ಅಥವಾ ಉಪೇಂದ್ರ ಯಾರು ನಟಿಸಲಿದ್ದಾರೆ?
ಬಹು ನಿರೀಕ್ಷೆಯ ಸರ್ಕಾರು ವಾರಿ ಪಾಠ ಸಿನಿಮಾದಲ್ಲಿ ವಿಲನ್ ಆಗಿ ಕನ್ನಡದ ಸ್ಟಾರ್ ನಟರಾದ ಸುದೀಪ್ ಅಥವಾ ಉಪೇಂದ್ರ ಇಬ್ಬರಲ್ಲಿ ಒಬ್ಬರು ನಟಿಸುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಈ ಹಿಂದೆಯ ಉಪೇಂದ್ರ, ಮಹೇಶ್ ಬಾಬು ಸಿನಿಮಾದಲ್ಲಿ ಅಭಿನಯಿಸಬೇಕಿತ್ತಂತೆ ಆದರೆ ಸಾಧ್ಯವಾಗಿರಲಿಲ್ಲ. ಹಾಗಾಗಿ ಸರ್ಕಾರು ವಾರಿ ಪಾಠ ಸಿನಿಮಾದಲ್ಲಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.

ತಿಂಗಳುಗಳ ಹಿಂದೆಯೆ ಉಪೇಂದ್ರ ಜೊತೆ ಮಾತುಕತೆ
ಸರ್ಕಾರು ವಾರಿ ಪಾಠ ಸಿನಿಮಾತಂಡ ತಿಂಗಳುಗಳ ಹಿಂದೆಯೆ ಉಪೇಂದ್ರ ಅವರ ಜೊತೆ ಮಾತುಕತೆ ನಡೆಸಿದೆಯಂತೆ. ಸಿನಿಮಾಗೆ ಇನ್ನೂ ಟೈಟಲ್ ಫಿಕ್ಸ್ ಮಾಡುವ ಮೊದಲೆ ಚಿತ್ರತಂಡ ಉಪೇಂದ್ರ ಜೊತೆ ಮಾತುಕತೆ ನಡೆಸಿದ್ದು, ಉಪೇಂದ್ರ ಸಹ ಕಥೆ ಕೇಳಿ ಇಂಪ್ರೆಸ್ ಆಗಿದ್ದಾರಂತೆ. ಹಾಗಾಗಿ ಸಿನಿಮಾದಲ್ಲಿ ಉಪೇಂದ್ರ ಅಭಿನಯಿಸುವುದು ಬಹುತೇಕ ಖಚಿತ ಎನ್ನುವ ಮಾತುಗಳು ಟಾಲಿವುಡ್ ಅಂಗಳದಲ್ಲಿ ಕೇಳಿ ಬರುತ್ತಿದೆ.


Click it and Unblock the Notifications











