'KGF-2' ಬಿಡುಗಡೆ ಮುಂದಕ್ಕೆ; ಯಶ್ ಲಕ್ಕಿ ತಿಂಗಳಲ್ಲಿ ರಿಲೀಸ್ ಆಗುತ್ತಾ ಸಿನಿಮಾ?
ಭಾರತೀಯ ಚಿತ್ರಪ್ರೇಕ್ಷಕರು ಕಾತರದಿಂದ ಕಾಯುತ್ತಿರುವ ಸಿನಿಮಾ 'ಕೆಜಿಎಫ್-2' ಬಿಡುಗಡೆ ಮತ್ತೆ ಮುಂದಕ್ಕೆ ಹೋಗುವ ಸಾಧ್ಯತೆ ಇದೆ. ಅಂದುಕೊಂಡಂತೆ ಆಗಿದ್ದರೆ ಸಿನಿಮಾ ಕಳೆದ ವರ್ಷವೇ ತೆರೆಗೆ ಬರಬೇಕಿತ್ತು. ಆದರೆ ಕೊರೊನಾ ಹಾವಳಿಯಿಂದ ಸಿನಿಮಾ ಬಿಡುಗಡೆ ತಡವಾಗಿದ್ದು, ಈ ವರ್ಷ ತೆರೆಗೆ ಬರಲು ಸಿದ್ಧವಾಗಿತ್ತು.
Recommended Video
ಸದ್ಯ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿದೆ ಕೆಜಿಎಫ್ ತಂಡ. ಕಳೆದ ವರ್ಷ ಲಾಕ್ ಡೌನ್ ಸಡಿಲಿಕೆ ಆಗುತ್ತಿದ್ದಂತೆ ಚಿತ್ರೀಕರಣ ಪ್ರಾರಂಭ ಮಾಡಿದ್ದ ಚಿತ್ರತಂಡ ಯಶಸ್ವಿಯಾಗಿ ಚಿತ್ರೀಕರಣ ಮುಕ್ತಾಯ ಮಾಡಿದೆ. ಚಿತ್ರ ಯಾವಾಗ ರಿಲೀಸ್ ಆಗಲಿದೆ ಎಂದು ಕಾತರಿದಂದ ಕಾಯುತ್ತಿದ್ದ ಇಡೀ ಭಾರತೀಯ ಚಿತ್ರರಂಗಕ್ಕೆ ಬಿಡುಗಡೆ ಡೇಟ್ ಅನೌನ್ಸ್ ಮಾಡುವ ಮೂಲಕ ಕುತೂಹಲಕ್ಕೆ ತೆರೆ ಎಳೆದಿತ್ತು.
ಫೈನಲಿ ಸಿನಿಮಾ ಜುಲೈ 16ಕ್ಕೆ ರಿಲೀಸ್ ಮಾಡುವುದಾಗಿ ಚಿತ್ರತಂಡ ಅನೌನ್ಸ್ ಮಾಡಿತ್ತು. ಫೈನಲಿ ಕೆಜಿಎಫ್-2 ಬಿಡುಗಡೆ ದಿನಾಂಕ ಕೇಳಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದರು. ಆದರೀಗ ಕೊರೊನಾ ಎರಡನೇ ಅಲೆ ಮತ್ತೆ ಚಿತ್ರತಂಡದ ಲೆಕ್ಕಾಚಾರ ತಲೆಕೆಳಗಾಗಿಸಿದೆ. ಸಿನಿಮಾ ಜುಲೈ 16ಕ್ಕೆ ಸಿನಿಮಾ ಬಿಡುಗಡೆಯಾಗುವುದು ಬಹುತೇಕ ಅನುಮಾನವಾಗಿದೆ.

ಸದ್ಯ ಕೇಳಿಬರುತ್ತಿರುವ ಮಾಹಿತಿ ಪ್ರಕಾರ ಕೆಜಿಎಫ್-2 ನವೆಂಬರ್ ಅಥವ ಡಿಸೆಂಬರ್ ಗೆ ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ. ಡಿಸೆಂಬರ್ ತಿಂಗಳು ನಟ ಯಶ್ ಗೆ ಲಕ್ಕಿ ತಿಂಗಳು. ಹಾಗಾಗಿ ಲಕ್ಕಿ ತಿಂಗಳಲ್ಲೇ ಕೆಜಿಎಫ್-2 ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನುವ ಮಾತು ಕೇಳಿಬರುತ್ತಿದೆ.
ಅಂದಹಾಗೆ ಕೆಜಿಎಫ್ ಮೊದಲ ಭಾಗ ಕೂಡ ಡಿಸೆಂಬರ್ ನಲ್ಲೇ ರಿಲೀಸ್ ಆಗಿ ದೊಡ್ಡ ಮಟ್ಟದಲ್ಲಿ ಸಕ್ಸಸ್ ಆಗಿತ್ತು. ಪಾರ್ಟ್-2 ಕೂಡ ಈ ವರ್ಷ ಡಿಸೆಂಬರ್ ನಲ್ಲಿ ತೆರೆಗೆ ಬರುವ ಸಾಧ್ಯತೆ ಇದೆ.
ಕೆಜಿಎಫ್-2 ಮಾತ್ರವಲ್ಲದೆ ಎಲ್ಲಾ ಸಿನಿಮಾಗಳ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ. ವರ್ಷದ ಪ್ರಾರಂಭದಲ್ಲಿ ಸಾಲು ಸಾಲು ಸಿನಿಮಾಗಳ ಬಿಡುಗಡೆ ದಿನಾಂಕ ಘೋಷಿಸಿದ್ದ ಚಿತ್ರಗಳ ಲೆಕ್ಕಾಚಾರ ತಲೆಕೆಳಗಾಗಿದೆ. ಕೊರೊನಾ ನಿಯಂತ್ರಣಕ್ಕೆ ಬಂದು, ಮತ್ತೆ ಹೊಸ ದಿನಾಂಕ ಘೋಷಣೆ ಮಾಡಲು ನಿರ್ಮಾಪಕರು ತಯಾರಿ ನಡೆಸಬೇಕಾಗಿದೆ.


Click it and Unblock the Notifications