twitter
    For Quick Alerts
    ALLOW NOTIFICATIONS  
    For Daily Alerts

    ಶಬರಿಮಲೆಗೆ ಬರುವ ಮಹಿಳೆಯರನ್ನ ಕತ್ತರಿಸಿ ಎಂದ ನಟ

    |

    ಶಬರಿಮಲೆಗೆ ಮಹಿಳೆಯರು ಹೋಗಬಹುದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಆದೇಶವನ್ನ ಕೆಲ ಭಕ್ತವರ್ಗ ವಿರೋಧಿಸುತ್ತಿದೆ. ಯಾವುದೇ ಕಾರಣಕ್ಕೂ ಮಹಿಳೆಯರು ಶಬರಿಮಲೆ ಪ್ರವೇಶಿಸಬಾರದು ಎನ್ನುತ್ತಿದೆ.

    ಹೀಗಿರುವಾಗ ಮಲಯಾಳಂ ನಟ ಕೊಲ್ಲಂ ತುಳಸಿ ವಿವಾದಾತ್ಮಕ ಹೇಳಿಕೆ ನೀಡಿ ಗಮನ ಸೆಳೆದಿದ್ದಾರೆ. 'ಕೇರಳದ ಶಬರಿಮಲೆಯ ಅಯ್ಯಪ್ಪ ದೇವಾಲಯಕ್ಕೆ ಬರುವ ಮಹಿಳೆಯರನ್ನು ಕತ್ತರಿಸಿ, ಒಂದು ಭಾಗವನ್ನು ದೆಹಲಿಗೆ, ಇನ್ನೊಂದು ಭಾಗವನ್ನು ಕೇರಳ ಮುಖ್ಯಮಂತ್ರಿ ಕಚೇರಿಗೆ ಕಳಿಸಿ' ಎಂದು ಕೊಲ್ಲಂ ಜಿಲ್ಲೆಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಭಾಷಣ ಮಾಡಿದ್ದಾರೆ.

    Actor Kollam Thulasi controversial statements on sabarimala

    ಶಬರಿಮಲೆ ದೇವಳಕ್ಕೆ ಮಹಿಳೆಯರ ಪ್ರವೇಶ ನಿಷೇಧಕ್ಕೆ ಕಾರಣ ಗೊತ್ತೆ?

    ಶಬರಿಮಲೆಗೆ ಮಹಿಳೆಯರಿಗೆ ಪ್ರವೇಶ ನೀಡಬಾರದು, ಅದರಿಂದ ದೇವಾಲಯದ ಪಾವಿತ್ರ್ಯಕ್ಕೆ ಧಕ್ಕೆ ಬರುತ್ತದೆ ಎಂಬ ಕಾರಣಕ್ಕೆ ಈ ಪದ್ಧತಿಯನ್ನು ಎಷ್ಟೋ ಶತಮಾನಗಳಿಂದ ನಡೆಸಿಕೊಂಡು ಬಂದಿದ್ದೇವೆ. ಆದರೆ ಸುಪ್ರೀಂ ಕೋರ್ಟ್ ಇದ್ಯಾವುದನ್ನೂ ಪರಿಗಣಿಸದೆ, ಮಹಿಳೆಯರಿಗೆ ಪ್ರವೇಶ ನೀಡಲು ಅನುಮತಿ ನೀಡಿದೆ. ಇದು ಸರಿಯಲ್ಲ. ಸುಪ್ರೀಂ ಕೋರ್ಟ್ ತೀರ್ಪನ್ನು ಕೇಳಿ ಯಾವುದಾದರೂ ಮಹಿಳೆಯರು ಶಬರಿಮಲೆಯ ಅಯ್ಯಪ್ಪ ದೇವಾಲಯಕ್ಕೆ ಬಂದರೆ ಅವರನ್ನು ಎರಡು ಭಾಗವಾಗಿ ಸೀಳಿ ಎಂದು ಕರೆ ನೀಡಿದ್ದಾರೆ.

    ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಅನುಮತಿ: ಸುಪ್ರೀಂನಿಂದ ಐತಿಹಾಸಿಕ ತೀರ್ಪು

    800 ವರ್ಷಗಳಿಂದ ಮಹಿಳೆಯರ ಪ್ರವೇಶಕ್ಕೆ ನಿರ್ಬಂಧ ಹೇರಿದ್ದ ಶಬರಿಮಲೆ ದೇವಾಲಯದ ಆಡಳಿತ ಮಂಡಳಿಯ ನಿಯಮಕ್ಕೆ ಬದಲಾಗಿ, ಮಹಿಳೆಯರಿಗೆ ಪ್ರವೇಶಕ್ಕೆ ಅನುಮತಿ ನೀಡಿ ಸೆಪ್ಟೆಂಬರ್ 28 ರಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿತ್ತು.

    English summary
    Women coming to Sabarimala temple should be ripped in half. One half should be sent to Delhi and the other half should be thrown to Chief Minister's office in Thiruvananthapuram: Actor Kollam Thulasi, in Kollam.
    Wednesday, October 30, 2019, 17:53
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X