Don't Miss!
- Sports
ನ್ಯೂಜಿಲೆಂಡ್ ಕೇಂದ್ರೀಯ ಒಪ್ಪಂದದಿಂದ ಹೊರ ನಡೆದ ಟ್ರೆಂಟ್ ಬೌಲ್ಟ್! ಏಕೆ ಈ ನಿರ್ಧಾರ?
- News
ತುಂಗಭದ್ರಾ ಡ್ಯಾಂನಿಂದ ನೀರು ಬಿಡುಗಡೆ: ಕೃಷಿಭೂಮಿ, ಹುಲಿಗೆಮ್ಮಾ ದೇವಾಲಯ ಜಲಾವೃತ
- Technology
ಸ್ಯಾಮ್ಸಂಗ್ ಗ್ಯಾಲಕ್ಸಿ Z ಫೋಲ್ಡ್ 4 ಮತ್ತು ಗ್ಯಾಲಕ್ಸಿ Z ಫ್ಲಿಪ್ 4 ಫೋನ್ ಬಿಡುಗಡೆ!
- Lifestyle
ಚೀನಾದಲ್ಲಿ ಹೊಸ ಲಂಗ್ಯಾ ವೈರಸ್ ಪತ್ತೆ..! ಇದು ಸಾಂಕ್ರಾಮಿಕವೇ..? ಮಾರಣಾಂತಿಕವೇ..?
- Automobiles
ನಮ್ಮ ಬೆಂಗಳೂರಿನಲ್ಲಿ ಬ್ಯಾಟರಿ ವಿನಿಮಯ ಕೇಂದ್ರಕ್ಕೆ ಚಾಲನೆ ನೀಡಿದ ಹೋಂಡಾ
- Finance
ಸೆನ್ಸೆಕ್ಸ್ ಕುಸಿತ, ನಿಫ್ಟಿ ಏರಿಕೆ: ಬುಧವಾರ ವಹಿವಾಟಿನ ಅಂತ್ಯ ಹೀಗಿದೆ
- Travel
ಭಾರತದಲ್ಲಿಯ 10 ಪ್ರಸಿದ್ದ ಹನುಮಂತ ದೇವರ ದೇವಾಲಯಗಳು
- Education
CAT 2022 Preparation Tips : ಕ್ಯಾಟ್ ಪರೀಕ್ಷೆಗೆ ಸಿದ್ಧತೆ ನಡೆಸಲು ಸಲಹೆಗಳು ಇಲ್ಲಿವೆ
ಮಲಯಾಳಂ ಯುವನಟ ಅನುಮಾನಾಸ್ಪದ ಸಾವು
ಮಲಯಾಳಂ ಯುವನಟ ಶರತ್ ಚಂದ್ರ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಅವರಿಗೆ 37 ವರ್ಷ ವಯಸ್ಸಾಗಿತ್ತು. ಅವರ ಮೃತದೇಹ ಅವರ ನಿವಾಸದಲ್ಲಿ ಪತ್ತೆಯಾಗಿದೆ. ಹೃದಯಾಘಾತದಿಂದ ಶರತ್ ಚಂದ್ರ ಸಾವನ್ನಪ್ಪಿದ್ದಾರೆ ಎಂದು ಅನುಮಾನಿಸಲಾಗಿದೆ.
'ಅನೀಸ್ಯ' ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಶರತ್ ಚಂದ್ರ ಆ ನಂತರ 'ಅಂಗಮಲೈ ಡೈರೀಸ್', ದುಲ್ಕರ್ ಸಲ್ಮಾನ್ ಜೊತೆಗೆ 'ಸಿಐಎ', 'ಕೂಡೆ', 'ತಾತ್ವಿಕ ಅವಲೋಕನಂ' ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿದ್ದರು.
ಸಿನಿಮಾ ರಂಗಕ್ಕೆ ಬರುವ ಮುನ್ನ ಐಟಿ ಉದ್ಯೋಗಿಯಾಗಿ ಶರತ್ ಚಂದ್ರ ಕೆಲಸ ಮಾಡಿದ್ದರು. ಬಳಿಕ ಡಬ್ಬಿಂಗ್ ಕಲಾವಿದರಾಗಿಯೂ ಕೆಲಸ ಮಾಡಿದ್ದರು. ಆ ಬಳಿಕ ಸಿನಿಮಾಗಳಲ್ಲಿ ನಟಿಸುವ ಅವಕಾಶ ದೊರಕಿತ್ತು. 'ಅಂಗಮಲೈ ಡೈರೀಸ್' ಸಿನಿಮಾದಲ್ಲಿ ಅವರ ನಟನೆಗೆ ಬಹು ಮೆಚ್ಚುಗೆ ವ್ಯಕ್ತವಾಗಿತ್ತು.
ನಟ ಆಂಟೊನಿ ವರ್ಗೀಸ್ ಸೇರಿದಂತೆ ಹಲವು ಮಂದಿ ಮಲಯಾಳಂ ಸ್ಟಾರ್ ನಟರು ಶರತ್ ಚಂದ್ರ ಅವರ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಶರತ್ ಚಂದ್ರರ ಹಲವು ಅಭಿಮಾನಿಗಳು ತಮ್ಮ ಮೆಚ್ಚಿನ ನಟನ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಮಲಯಾಳಂನ ಹಲವು ನಟರು, ಶರತ್ ಚಂದ್ರ ಜೊತೆಗೆ ನಟಿಸಿದ್ದ ನಟರು ಸಾಮಾಜಿಕ ಜಾಲತಾಣದ ಮೂಲಕ ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.
ಕೊಚ್ಚಿಯವರಾಗಿದ್ದ ಶರತ್ ಚಂದ್ರ ಅವರ ಅಂತಿಮ ಕಾರ್ಯ ಕೊಚ್ಚಿಯಲ್ಲಿಯೇ ನಡೆಯಲಿದೆ.