ಅಲ್ಲು ಅರ್ಜುನ್, ಕಮಲ್ ಹಾಸನ್ ಬಳಿಕ ಮತ್ತೋರ್ವ ಸ್ಟಾರ್ ನಟನಿಗೆ ವಿಲನ್ ಆದ ಫಹಾದ್

ನಟ ಫಹಾದ್ ಫಾಸಿಲ್ ಭಾರತ ಚಿತ್ರರಂಗದ ಪ್ರಸ್ತುತ ಅತ್ಯದ್ಭುತ ನಟರಲ್ಲಿ ಒಬ್ಬರು. ಮಲಯಾಳಂ ಸಿನಿಮಾದ ಈ ನಟ ತಮ್ಮ ಅತ್ಯದ್ಭುತ ನಟನೆಯಿಂದ ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತು ಪಡೆದುಕೊಂಡಿದ್ದಾರೆ. ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾಗಳನ್ನು ನೀಡುತ್ತಿರುವ ಫಹಾದ್ ಮಲಯಾಳಂ ಮಾತ್ರವಲ್ಲದೆ ಬೇರೆ ಬೇರೆ ಭಾಷೆಗಳಲ್ಲೂ ಬಹುಬೇಡಿಕೆ ಹೊಂದಿರುವ ನಟ. ಸದ್ಯ ತಮಿಳು ಮತ್ತು ತೆಲುಗು ಸಿನಿಮಾರಂಗದಲ್ಲಿ ಫಹಾದ್ ಬ್ಯುಸಿಯಾಗಿದ್ದಾರೆ.

ಅಲ್ಲು ಅರ್ಜುನ್ ನಟನೆಯ ಪುಷ್ಪ ಸಿನಿಮಾಗೆ ವಿಲನ್ ಆಗಿ ಎಂಟ್ರಿ ಕೊಟ್ಟಿರುವ ಫಹಾದ್ ಇದರ ಬೆನ್ನಲ್ಲೇ ತಮಿಳು ಸ್ಟಾರ್ ನಟ ಕಮಲ್ ಹಾಸನ್ ನಟನೆಯ ಹೊಸ ಸಿನಿಮಾ ವಿಕ್ರಂ ಚಿತ್ರಕ್ಕೂ ಫಹಾದ್ ವಿಲನ್ ಆಗಿ ಆಯ್ಕೆಯಾಗಿದ್ದಾರೆ. ಈ ಎರಡು ಸಿನಿಮಾಗಳ ಜೊತೆಗೆ ಈಗ ಮತ್ತೊಂದು ಬಿಗ್ ಬಜೆಟ್ ಸಿನಿಮಾಗೆ ಫಹಾದ್ ಹೆಸರು ಕೇಳಿಬರುತ್ತಿದೆ. ತಮಿಳಿನ ಸ್ಟಾರ್ ನಿರ್ದೇಶಕನ ಸಿನಿಮಾದಲ್ಲಿ ಫಹಾದ್ ನಟಿಸುವುದು ಬಹತೇಕ ಖಚಿತ ಎನ್ನುವ ಮಾತು ಕೇಳಿಬರುತ್ತಿದೆ.

ಅಂದಹಾಗೆ ಆ ಸ್ಟಾರ್ ನಿರ್ದೇಶಕ ಮತ್ತು ಸ್ಟಾರ್ ಮತ್ಯಾರು ಅಲ್ಲ ನಿರ್ದೇಶಕ ಶಂಕರ್ ಮತ್ತು ರಾಮ್ ಚರಣ್ ಚರಣ್. ನಿರ್ದೇಶಕ ಶಂಕರ್ ಮತ್ತು ರಾಮ್ ಚರಣ್ ಕಾಂಬಿನೇಷನ್ ನಲ್ಲಿ ಹೊಸ ಸಿನಿಮಾ ಮೂಡಿಬರುತ್ತಿದೆ. ಈಗಾಗಲೇ ಸಿನಿಮಾ ಅನೌನ್ಸ ಆಗಿದ್ದು, ಇನ್ನು ಚಿತ್ರಕ್ಕೆ ಟೈಟಲ್ ಫೈನಲ್ ಆಗಿಲ್ಲ. ಸದ್ಯ ಚಿತ್ರದ ಕಲಾವಿದರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಚಿತ್ರದ ಪ್ರಮುಖ ವಿಲನ್ ಪಾತ್ರಕ್ಕೆ ನಿರ್ದೇಶಕ ಶಂಕರ್ ಮಲಯಾಳಂ ಖ್ಯಾತ ನಟ ಫಹಾದ್ ಅವರನ್ನು ಸಂಪರ್ಕ ಮಾಡಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ.

Fahadh Faasil likely to play in Tamil Director Shankars next movie with Ram Charan

ಶಂಕರ್ ಮುಂದಿನ ಸಿನಿಮಾ ಪೊಲಿಟಿಕಲ್ ಥ್ರಿಲ್ಲರ್ ಸಿನಿಮಾವಾಗಿದ್ದು, ರಾಮ್ ಚರಣ್ ಮತ್ತು ಫಹಾದ್ ನಡುವಿನ ದೃಶ್ಯಗಳೇ ಹೈಲೆಟ್ ಅನ್ನಲಾಗುತ್ತಿದೆ. ಪಾತ್ರದ ಬಗ್ಗೆ ಕೇಳಿ ಫಹಾದ್ ತುಂಬಾ ಇಷ್ಟಪಟ್ಟಿದ್ದು, ಚಿತ್ರದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಸಿನಿಮಾತಂಡ ಇನ್ನು ಅಧಿಕೃತ ಮಾಹಿತಿ ಬಹಿರಂಗ ಬಡಿಸಿಲ್ಲ. ಸದ್ಯದಲ್ಲೇ ಈ ಬಗ್ಗೆ ಮಾಹಿತಿ ಹಂಚಿಕೊಳ್ಳುವ ಸಾಧ್ಯತೆ ಇದೆ.

ಅಂದಹಾಗೆ ಇತ್ತೀಚಿಗಷ್ಟೆ ಚಿತ್ರದ ನಾಯಕಿ ಹೆಸರು ಬಹಿರಂಗ ಪಡಿಸಿದ್ದು, ರಾಮ್ ಚರಣ್ ಎದುರು ನಟಿಸಲು ಬಾಲಿವುಡ್ ನಿಂದ ನಾಯಕಿಯನ್ನು ಕರೆತಂದಿದ್ದಾರೆ. ಬಾಲಿವುಡ್ ಸುಂದರಿ ಕಿಯಾರಾ ಅಡ್ವಾಣಿ ತೆಲುಗು ಸ್ಟಾರ್ ರಾಮ್ ಚರಣ್ ಜೊತೆ ನಾಯಕಿಯಾಗಿ ನಟಿಸುತ್ತಿದ್ದಾರೆ. ಇನ್ನು ನಟಿ ತಮನ್ನಾ ಕೂಡ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ. ಇದೀಗ ಫಹಾದ್ ಎಂಟ್ರಿ ಚಿತ್ರದ ಮೇಲಿನ ನಿರೀಕ್ಷೆ ಮತ್ತು ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.

ತೆಲುಗಿನ ಖ್ಯಾತ ನಿರ್ಮಾಪಕ ದಿಲ್ ರಾಜು ನಿರ್ಮಾಣದಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಅಂದಹಾಗೆ ಈ ಸಿನಿಮಾ ರಾಮ್ ಚರಣ್ ನಟನೆಯ 15ನೇ ಸಿನಿಮಾವಾಗಿದೆ. ದೊಡ್ಡ ಮಟ್ಟದಲ್ಲಿ ಸಿನಿಮಾ ಮೂಡಿಬರುತ್ತಿದ್ದು, ಪ್ಯಾನ್ ಇಂಡಿಯಾ 3ಡಿ ಸಿನಿಮಾ ಇದಾಗಿದೆ.

Fahadh Faasil likely to play in Tamil Director Shankars next movie with Ram Charan

ರಾಮ್ ಚರಣ್ ಸದ್ಯ ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಚಿತ್ರೀಕರಣ ಸದ್ಯ ಉಕ್ರೇನ್ ನಲ್ಲಿ ನಡೆಯುತ್ತಿದ್ದು, ಇಂದು ಶೂಟಿಂಗ್ ಮುಗಿಸಿದ್ದಾರೆ. ಆರ್ ಆರ್ ಆರ್ ಸಂಪೂರ್ಣವಾಗಿ ಮುಗಿಯುತ್ತಿದ್ದಂತೆ ರಾಮ್ ಚರಣ್ ತಮಿಳು ನಿರ್ದೇಶಕ ಶಂಕರ್ ಜೊತೆ ಸೇರಿಕೊಳ್ಳಲಿದ್ದಾರೆ. ಇತ್ತೀಚ ಫಹಾದ್ ಕೂಡ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಪುಷ್ಪ ಜೊತೆಗೆ ಕಮಲ್ ಹಾಸನ್ ನಟನೆಯ ವಿಕ್ರಮ ಸಿನಿಮಾದ ಚಿತ್ರೀಕರಣ ಸಹ ನಡೆಯತ್ತಿದೆ. ಡೇಟ್ ಹೊಂದಾಣಿಕೆ ಮಾಡಿಕೊಂಡು ಶಂಕರ್ ಸಿನಿಮಾ ಸೇರುವ ಸಾಧ್ಯತೆ ಇದೆ.

ಕಮಲ್ ಹಾಸನ್ ನಟನೆಯ ವಿಕ್ರಮ್ ಸಿನಿಮಾದಲ್ಲಿ ಫಹಾದ್ ಜೊತೆಗೆ ಮತ್ತೋರ್ವ ಖ್ಯಾತ ನಟ ವಿಜಯ್ ಸೇತುಪತಿ ಕೂಡ ನಟಿಸುತ್ತಿದ್ದಾರೆ. ದಕ್ಷಿಣ ಭಾರತದ ಮೂವರು ಘಟಾನುಘಟಿ ಕಲಾವಿದರು ಒಂದೇ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿರುವುದು ಚಿತ್ರದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ. ಚಿತ್ರದಲ್ಲಿ ಮೂವರ ಕಾದಾಟ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ.

More from Filmibeat

English summary
Malayalam Actor Fahadh Faasil likely to play in Tamil Director Shankar's next movie with Ram Charan.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X