ಚಿತ್ರೀಕರಣದ ವೇಳೆ ಎಡವಟ್ಟು; ನಟ ಫಹಾದ್ ಫಾಸಿಲ್ ವಿರುದ್ಧ ದೂರು

ಮಲಯಾಳಂ ನಟ, ನಿರ್ಮಾಪಕ ಫಹಾದ್ ಫಾಸಿಲ್ ತೆಲುಗು, ತಮಿಳು ಸಿನಿಮಾಗಳಲ್ಲಿ ಕೂಡ ನಟಿಸಿದ್ದಾರೆ. ಮಲಯಾಳಂ ಹಾಗೂ ಕನ್ನಡದಲ್ಲಿ ನಿರ್ಮಾಣವಾಗಿದ್ದ 'ಧೂಮಂ' ಚಿತ್ರದ ಲೀಡ್ ರೋಲ್‌ನಲ್ಲಿ ವಿಲಕ್ಷಣ ನಟ ಹೀರೊ ಆಗಿ ಮಿಂಚಿದ್ದರು. ಈ ಚಿತ್ರವನ್ನು ಹೊಂಬಾಳೆ ಸಂಸ್ಥೆ ನಿರ್ಮಿಸಿತ್ತು.

ತೆಲುಗಿನ 'ಪುಷ್ಪ' ಚಿತ್ರದ ಮೂಲಕ ಫಹಾದ್ ಗಮನ ಸೆಳೆದಿದ್ದರು. ಬಳಿಕ ಪ್ಯಾನ್ ಇಂಡಿಯಾ ಸಿನಿಮಾಗಳಲ್ಲಿ ಹೆಚ್ಚು ನಟಿಸೋಕೆ ಆರಂಭಿಸಿದರು. ಬಣ್ಣ ಹಚ್ಚುವುದು ಮಾತ್ರವಲ್ಲ ಮಲಯಾಳಂನಲ್ಲಿ ಒಂದಷ್ಟು ಸಿನಿಮಾಗಳನ್ನು ನಿರ್ಮಿಸಿದ್ದಾರೆ. ಇತ್ತೀಚೆಗೆ ಫಹಾದ್ ನಿರ್ಮಾಣದ 'ಪೇಯ್ನ್‌ಕಿಲಿ' ಚಿತ್ರದ ಚಿತ್ರೀಕರಣ ಕೇರಳದ ಆಸ್ಪತ್ರೆಯಲ್ಲಿ ನಡೆದಿತ್ತು. ಆದರೆ ಚಿತ್ರತಂಡ ಅಲ್ಲಿದ್ದವರಿಗೆ ತೊಂದರೆ ಕೊಟ್ಟ ಮಾನವ ಹಕ್ಕುಗಳ ಆಯೋಗ ಫಹಾದ್ ವಿರುದ್ಧ ದೂರು ದಾಖಲಿಸಿಕೊಂಡಿದೆ.

kerala Human Rights Commission registers case against Fahadh Faasil s film

ಆಸ್ಪತ್ರೆ ಸನ್ನಿವೇಶವನ್ನು ಸೆಟ್ ಹಾಕಿ ಚಿತ್ರೀಕರಣ ಮಾಡದೇ ನೈಜವಾಗಿ ಚಿತ್ರೀಕರಿಸಲು ಚಿತ್ರತಂಡ ಮುಂದಾಗಿದೆ. ಈ ವೇಳೆ ಅಚಾತುರ್ಯ ನಡೆದಿದೆ. ಕೇರಳದ ಎರ್ನಾಕುಲಂನ ಅಂಗಮಲೈ ತಾಲೂಕು ಆಸ್ಪತ್ರೆಯಲ್ಲಿ ಶೂಟಿಂಗ್ ನಡೆದಿದೆ. ಇಲ್ಲಿ ಚಿತ್ರದ ಪ್ರಮುಖ ದೃಶ್ಯಗಳ ಚಿತ್ರೀಕರಣದ ವೇಳೆ ಅಲ್ಲಿರುವ ರೋಗಿಗಳು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ ಎನ್ನಲಾಗಿದೆ.

ಎರ್ನಾಕುಲಂ ಸ್ಥಳೀಯ ಮಾಧ್ಯಮ ವರದಿಗಳ ಆಧಾರದ ಮೇಲೆ ಅಲ್ಲಿ ಪ್ರಕರಣ ದಾಖಲಿಸಲಾಗಿದೆ. ಚಿತ್ರೀಕರಣದ ವೇಳೆ ತುರ್ತು ಚಿಕಿತ್ಸಾ ಕೊಠಡಿಯನ್ನೂ ನಿರ್ಲಕ್ಷಿಸಿ ಶೂಟಿಂಗ್ ಹೆಸರಲ್ಲಿ ಚಿತ್ರತಂಡ ಗಲಾಟೆ ಮಾಡಿದೆ, ದೊಡ್ಡ ದೊಡ್ಡ ಲೈಟ್‌ಗಳನ್ನು ಹಾಕಿದ್ದಾರೆ. ತುರ್ತು ಚಿಕಿತ್ಸಾ ಕೊಠಡಿಯಲ್ಲಿ ಕೆಲವು ನಿರ್ಬಂಧಗಳನ್ನು ಹಾಕಿ ಅಲ್ಲಿನ ಸಿಬ್ಬಂದಿ ಹಾಗೂ ರೋಗಿಗಳಿಗೆ ತೊಂದರೆ ಕೊಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಘಟನೆ ಸಂಬಂಧ ಕೇರಳ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯೆ ವಿ.ಕೆ.ಬೀನಾ ಕುಮಾರಿ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ 7 ದಿನಗಳ ಓಲಗೆ ವಿವರಣೆ ನೀಡುವಂತೆ ಎರ್ನಾಕುಲಂ ಜಿಲ್ಲಾ ವೈದ್ಯಾಧಿಕಾರಿ ಮತ್ತು ಅಂಗಮಲೈ ತಾಲೂಕು ಆಸ್ಪತ್ರೆ ಸೂಪರ್ ಡೆಂಟ್‌ಗೆ ಸೂಚಿಸಲಾಗಿದೆ.

'ಪೇಯ್ನ್‌ಕಿಲಿ' ಚಿತ್ರಕ್ಕೆ ಫಹಾದ್ ಫಾಸಿಲ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಹಾಗಾಗಿ ಅವರ ವಿರುದ್ಧವೇ ದೂರು ದಾಖಲಾಗಿದೆ. ತುರ್ತು ನಿಗಾ ಘಟಕದಲ್ಲಿ ಸ್ಥಳಾವಕಾಶ ಕಮ್ಮಿ. ಗಂಭೀರ ಸ್ಥಿತಿಯಲ್ಲಿದ್ದ ರೋಗಿ ಸೇರಿಸುವ ಸಾಧ್ಯವಿಲ್ಲ ಎಂದರು. ಮುಖ್ಯ ದ್ವಾರದಿಂದ ಯಾರನ್ನೂ ಒಳಗೆ ಬಿಡಲಿಲ್ಲ. ಚಿತ್ರೀಕರಣದ ವೇಳೆ ಯಾರು ಅತ್ತಿಂದಿತ್ತ ಓಡಾಡಬೇಡಿ, ಯಾರು ಮಾತನಾಡಬೇಡಿ, ಶೂಟಿಂಗ್‌ಗೆ ತೊಂದರೆಯಾಗುತ್ತದೆ ಎಂದು ಹೇಳಿದು ಎನ್ನಲಾಗ್ತಿದೆ.

ಪ್ರಕರಣದ ಬಗ್ಗೆ ಫಹಾದ್ ಫಾಸಿಲ್ ಇನ್ನು ಪ್ರತಿಕ್ರಿಯಿಸಿಲ್ಲ. ಭಾರತೀಯ ಚಿತ್ರರಂಗದಲ್ಲಿ ಬಹುಬೇಡಿಕೆಯ ನಟನಾಗಿ ಅವರು ಗುರ್ತಿಸಿಕೊಂಡಿದ್ದಾರೆ. ದಿನಕ್ಕೆ 12 ಲಕ್ಷ ಸಂಭಾವನೆ ಪಡೆಯುತ್ತಾರೆ ಎನ್ನುವ ಚರ್ಚೆ ಚಿತ್ರರಂಗಲ್ಲಿದೆ. ಇನ್ನು ಇತ್ತೀಚೆಗೆ 'ಆವೇಶಂ' ಚಿತ್ರದಲ್ಲಿ ನಟಿಸಿ ಅಬ್ಬರಿಸಿದ್ದರು. ಸಿನಿಮಾ ಬ್ಲಾಕ್‌ಬಸ್ಟರ್ ಹಿಟ್ ಆಗಿತ್ತು.

ಸದ್ಯ 'ಪುಷ್ಪ'-2 ಚಿತ್ರದಲ್ಲಿ ಬನ್ವರ್‌ ಸಿಂಗ್ ಶೇಖಾವತ್ ಆಗಿ ಮುಂದುವರೆದಿದ್ದಾರೆ. ಡಿಸೆಂಬರ್‌ನಲ್ಲಿ ಸಿನಿಮಾ ತೆರೆಗೆ ಬರಲಿದೆ. ಪುಷ್ಪರಾಜ್ ಹಾಗೂ ಬನ್ವರ್‌ ಆರ್ಭಟ ನೋಡಲು ಪ್ರೇಕ್ಷಕರು ಕಾಯುತ್ತಿದ್ದಾರೆ. ಇನ್ನುಳಿದಂತೆ 'ಮಾರೀಸನ್', 'ವೆಟ್ಟೆಯಾನ್', 'ಓದುಂ ಕುಠೀರ ಚದುಂ ಕುತೀರಾ', 'ಬೌಗೆನ್ವಿಲ್ಲಾ' ಹಾಗೂ 'ಡೋಂಟ್ ಟ್ರಬಲ್ ದಿ ಟ್ರಬಲ್' ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದಾರೆ.

More from Filmibeat

English summary
Suo Motu Case Filed on Fahadh Faasil's Painkili Movie unit.
Read more about: fahadh faasil malayalam mollywood
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X