ಕ್ರಿಸ್‌ಮಸ್‌ಗೆ ಥಿಯೇಟರ್‌ಗೆ ಲಗ್ಗೆ ಇಡ್ತಿದೆ ಮೋಹನ್ ಲಾಲ್-ನಂದ ಕಿಶೋರ್ ಸಿನಿಮಾ
ಕನ್ನಡದ ನಿರ್ದೇಶಕ ನಂದ ಕಿಶೋರ್ ಮಾಲಿವುಡ್‌ಗೆ ಕಾಲಿಟ್ಟಿರೋದು ಗೊತ್ತೇ ಇದೆ. ಮಲಯಾಳಣ ಸೂಪರ್‌ಸ್ಟಾರ್‌ಗೆ ಆಕ್ಷನ್ ಕಟ್ ಹೇಳಿದ್ದಾರೆ. ಅದುವೇ ಮೋಸ್ಟ್ ಎಕ್ಸ್‌ಪೆಕ್ಟೆಡ್ ಸಿನಿಮಾ 'ವೃಷಭ'. ಹಲವು ದಿನಗಳಿಂದ ಈ ಸಿನಿಮಾದ ಚಿತ್ರೀಕರಣ ನಡೆಯುತ್ತಲೇ ಇತ್ತು. ಕೊನೆಗೂ ಬಿಡುಗಡೆಯ ಹಂತಕ್ಕೆ ಬಂದಿದೆ. ನಂದ ಕಿಶೋರ್ ಮಲಯಾಳಂ ಸಿನಿಮಾ ಬಿಡುಗಡೆಗೆ ವೇದಿಕೆ ರೆಡಿಯಾಗಿದೆ.
ಮಲಯಾಳಂ ಸಿನಿಮಾ 'ವೃಷಭ' ಕೇವಲ ಒಂದು ಭಾಷೆಯಲ್ಲಿ ರಿಲೀಸ್ ಆಗುತ್ತಿಲ್ಲ. ಈ ಮೋಹನ್ ಲಾಲ್ ಸಿನಿಮಾ ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ. ಮೋಹನ್‌ಲಾಲ್ ಅಂತಹ ಸೂಪರ್‌ಸ್ಟಾರ್‌ಗೆ ಆಕ್ಷನ್ ಕಟ್ ಹೇಳಿರುವ ನಂದ ಕಿಶೋರ್ ಸಿನಿಮಾ ಇದೇ ಕ್ರಿಸ್‌ಮಸ್ ಹಬ್ಬಕ್ಕೆ ಅದ್ಧೂರಿಯಾಗಿ ರಿಲೀಸ್ ಆಗುತ್ತಿದೆ.

ಸೂಪರ್‌ಸ್ಟಾರ್ ಮೋಹನ್‌ಲಾಲ್ ಕೇವಲ ಮಲಯಾಳಂ ಚಿತ್ರರಂಗಕ್ಕಷ್ಟೇ ಅಲ್ಲ ಫೇಮಸ್ ಅಲ್ಲ. ದಕ್ಷಿಣ ಭಾರತದ ಎಲ್ಲಾ ಭಾಷೆಯ ಪ್ರೇಕ್ಷಕರಿಗೂ ಪರಿಚಯ. ಐದು ಪ್ರಮುಖ ಪ್ಯಾನ್ ಇಂಡಿಯಾ ಭಾಷೆಗಳಲ್ಲಿ ನಟಿಸಿರುವುದರಿಂದ ಸಹಜವಾಗಿಯೇ ನಿರೀಕ್ಷೆ ದುಪ್ಪಟ್ಟಾಗಿದೆ. 'ವೃಷಭ' ಸಿನಿಮಾ ತೆಲುಗು ಹಾಗೂ ಮಲೆಯಾಳಂ ಭಾಷೆಯಲ್ಲಿ ಏಕಕಾಲಕ್ಕೆ ನಿರ್ಮಾಣ ಆಗಿದೆ. ಇನ್ನು ಉಳಿದ ಭಾಷೆಗಳಿಗೆ ಡಬ್ ಆಗಿ ಬಿಡುಗಡೆಯಾಗುತ್ತಿದೆ. ಈ ಮೂಲಕ ಎಲ್ಲ ಭಾಷೆಯ ಸಿನಿಮಾ ಪ್ರೇಮಿಗಳು ಈ ಚಿತ್ರ ನೋಡಬಹುದು.
'ವೃಷಭ' ಸಿನಿಮಾದಲ್ಲಿ ಮೋಹನ್‌ಲಾಲ್ ಜೊತೆಗೆ ಕನ್ನಡದ ನಟಿ ರಾಗಿಣಿ ನಟಿಸಿದ್ದಾರೆ. ಹಾಗೇ ಕನ್ನಡದ ಸ್ಟೈಲಿಶ್ ಡೈರೆಕ್ಟರ್ ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಲಂಕೇಶ್ ಕೂಡ ನಟಿಸಿದ್ದಾರೆ. ಈ ಸಿನಿಮಾದಲ್ಲಿ ಸಮರ್ಜಿತ್ ಮೋಹನ್‌ಲಾಲ್ ಪುತ್ರನಾಗಿ ಕಾಣಿಸಿಕೊಳ್ಳಲಿದ್ದಾರೆ. ರಾಗಿಣಿ ದ್ವಿವೇದಿ ಜೊತೆ ನಯನ್ ಸಾರಿಕಾ, ಅಜಯ್ ಮತ್ತು ನೇಹಾ ಸಕ್ಸೇನಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಇನ್ನು ಬಹು ನಿರೀಕ್ಷಿತ 'ವೃಷಭ' ಸಿನಿಮಾಗೆ ಸ್ಯಾಮ್ ಸಿಎಸ್ ಸಂಗೀತ ನಿರ್ದೇಶನ ಮಾಡಿದ್ದಾರೆ. ರೆಸುಲ್ ಪೂಕುಟ್ಟಿ ಸೌಂಡ್ ಡಿಸೈನ್ ಮಾಡಿದ್ದಾರೆ. ಜನಾರ್ಧನ್ ಮಹರ್ಷಿ ಹಾಗೂ ಕಾರ್ತಿಕ್ ಈ ಸಿನಿಮಾ ಸಂಭಾಷಣೆ ಬರೆದಿದ್ದಾರೆ. ಇನ್ನು ಜನಪ್ರಿಯ ಆಕ್ಷನ್ ಡೈರೆಕ್ಟರ್ ಪೀಟರ್ ಹೈನ್, ಸ್ಟಂಟ್ ಸಿಲ್ವಾ ಹಾಗೂ ನಿಖಿಲ್ ಸಾಹಸ ದೃಶ್ಯಗಳನ್ನು ನಿರ್ದೇಶನ ಮಾಡಿದ್ದಾರೆ.

ಮೋಹನ್ ಲಾಲ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ಈ ಸಿನಿಮಾವನ್ನು ಕನೆಕ್ಟ್ ಮೀಡಿಯಾ ಮತ್ತು ಬಾಲಾಜಿ ಟೆಲಿಫಿಲ್ಮ್ಸ್ ಜಂಟಿಯಾಗಿ ನಿರ್ಮಾಣ ಮಾಡುತ್ತಿದೆ. ಈ ಎರಡು ಸಂಸ್ಥೆಗಳ ಜೊತೆಗೆ ಅಭಿಷೇಕ್ ಎಸ್ ವ್ಯಾಸ್ ಸ್ಟುಡಿಯೋಸ್ ಪ್ರಸ್ತುತಪಡಿಸುತ್ತಿದೆ. 'ವೃಷಭ' ಸಿನಿಮಾವನ್ನು ಶೋಭಾ ಕಪೂರ್, ಏಕ್ತಾ ಕಪೂರ್, ಸಿ.ಕೆ.ಪದ್ಮ ಕುಮಾರ್, ವರುಣ್ ಮಾಥುರ್, ಸೌರಭ್ ಮಿಶ್ರಾ, ಅಭಿಷೇಕ್ ಎಸ್ ವ್ಯಾಸ್, ಪ್ರವೀರ್ ಸಿಂಗ್, ವಿಶಾಲ್ ಗುರ್ನಾನಿ ಮತ್ತು ಜೂಹಿ ಪರೇಖ್ ಮೆಹ್ತಾ ಸೇರಿ ಈ ಮೂರು ಬ್ಯಾನರ್‌ಗಳ ಅಡಿಯಲ್ಲಿ ನಿರ್ಮಿಸಿದ್ದಾರೆ.
'ವೃಷಭ' ಭಾರೀ ಬಜೆಟ್‌ನಲ್ಲಿ ನಿರ್ಮಾಣ ಮಾಡಿರುವ ಸಿನಿಮಾ. ಈ ಸಿನಿಮಾ ಅಂದುಕೊಂಡಿದ್ದಕ್ಕಿಂತ ತಡವಾಗಿ ರಿಲೀಸ್ ಆಗುತ್ತಿದೆ. ಇದಕ್ಕೆ ಕಾರಣ ಗ್ರಾಫಿಕ್ಸ್. 'ವೃಷಭ' ಸಿನಿಮಾದಲ್ಲಿ ಗ್ರಾಫಿಕ್ಸ್ ಹೆಚ್ಚು ಒತ್ತು ನೀಡಿದ್ದರಿಂದ ಗುಣಮಟ್ಟದ ಪ್ರಾಜೆಕ್ಟ್ ನೀಡುವುದಕ್ಕೆ ಮುಂದಾಗಿತ್ತು. ಪ್ರೇಕ್ಷಕರಿಗೆ ಅತ್ಯುತ್ತಮವಾದ ಸಿನಿಮಾ ಅನುಭವವನ್ನು ನೀಡುವುದು ನಮ್ಮ ಬದ್ಧತೆಯಾಗಿದೆ. ಆದ್ದರಿಂದ, ನಾವು 2025 ರ ಕ್ರಿಸ್‌ಮಸ್‌ಗೆ ಬಿಡುಗಡೆ ಮಾಡಲು ನಿರ್ಧರಿಸಿದ್ದೇವೆ ನಂದ ಕಿಶೋರ್ ಟೀಮ್ ಹಾಗೂ ಅವರ ಚಿತ್ರತಂಡ ಹೇಳಿಕೊಂಡಿದೆ.


Click it and Unblock the Notifications











