13 ಸಿನಿಮಾವನ್ನು ನರೇಂದ್ರ ಬಾಬು ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ರಾಘವೇಂದ್ರ ರಾಜ್‌ಕುಮಾರ್ ಹಾಗೂ ಶ್ರುತಿ ಮುಖ್ಯಪಾತ್ರದಲ್ಲಿ ನಟಿಸಿದ್ದಾರೆ. ಉಳಿದಂತೆ ಪ್ರಮೋದ್ ಶೆಟ್ಟಿ, ದಿಲೀಪ್ ಪೈ, ಸೂರಜ್ ಕಾಮಿಡಿ ಕಿಲಾಡಿಗಳು, ಲೋಕೇಶ್ ಕಾಮಿಡಿ ಕಿಲಾಡಿ ಫೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ. ಮನುಷ್ಯ ಸಂಬಂಧಗಳನ್ನು ಬೆಸೆಯುವ ಸಂದೇಶ ಹೊಂದಿರುವ ಈ ಸಿನಿಮಾವನ್ನು ಯು.ವಿ ಪ್ರೊಡಕ್ಷನ್ಸ್ ಅಡಿಯಲ್ಲಿ ಕೆ ಸಂಪತ್ ಕುಮಾರ್, ಎಚ್.ಎಸ್.ಮಂಜುನಾಥ್, ಮಂಜುನಾಥ್ ಗೌಡ ಹಾಗೂ ಸಿ ಕೇಶವಮೂರ್ತಿ ನಿರ್ಮಾಣ ಮಾಡಿದ್ದಾರೆ ಮಂಜುನಾಥ ನಾಯ್ಡು ಛಾಯಾಗ್ರಹಣ ಮತ್ತು ಸೋಹನ್ ಬಾಬು ಸಂಗೀತ ಚಿತ್ರಕ್ಕಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಭಾಗದಲ್ಲಿ ನಡೆದ ಒಂದು ನೈಜ ಘಟನೆಯನ್ನು ಸ್ಪೂರ್ತಿಯಾಗಿ ಇಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ. ಚಿತ್ರದಲ್ಲಿ ಅಂತರಧರ್ಮೀಯ ಪ್ರೇಮಕಥೆಯಿದ್ದು, ಗಂಡ-ಹೆಂಡತಿ ಅಂದರೆ ಹೀಗಿರಬೇಕು ಎನ್ನುವಂತಿದ್ದ ದಂಪತಿಯಿಬ್ಬರು ತಮ್ಮದಲ್ಲದ ತಪ್ಪಿಗೆ ಇಡೀ ಜೀವನ ಯಾವ ರೀತಿ ಕಷ್ಟ ಅನುಭವಿಸುತ್ತಾರೆ ಎಂಬುದನ್ನು ತೋರಿಸಲಾಗಿದೆ.