ಎ ಫಾರ್ ಆನಂದ್ ಸಿನಿಮಾವನ್ನು ಎಂ ಜಿ ಶ್ರೀನಿವಾಸ್ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ನಾಯಕನಾಗಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಶಿವಣ್ಣ ಶಿಕ್ಷಕನ ಪಾತ್ರ ನಿರ್ವಹಿಸಲಿದ್ದು, ಗೀತಾ ಶಿವರಾಜ್‌ಕುಮಾರ್ ಗೀತಾ ಪಿಚ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಲಿದ್ದಾರೆ.