ಅಭಿರಾಮಚಂದ್ರ ಸಿನಿಮಾವನ್ನು ನಾಗೇಂದ್ರ ಗಾಣಿಗ ನಿರ್ದೇಶನ ಮಾಡಿದ್ದಾರೆ. ಕಿರಿಕ್ ಪಾರ್ಟಿ ಸಿನಿಮಾಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದ ಇವರು, ಅಭಿರಾಮ ಸಿನಿಮಾ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ಚಿತ್ರದಲ್ಲಿ ರಥ ಕಿರಣ್, ಸಿದ್ದು ಮೂಲಿಮನಿ, ಶಿವಾನಿ ರೈ, ನಾಟ್ಯ ರಂಗರಂಗ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಉಳಿದಂತೆ ಸುಂದರ್ ವೀಣಾ, ವೀಣಾ ಸುಂದರ್, ಎಸ್ ನಾರಾಯಣ್, ಪ್ರಕಾಶ್ ತುಮಿನಾಡು ಸೇರಿದಂತೆ ಹಲವರು ನಟಿಸಿದ್ದಾರೆ. ಅಭಿರಾಮಚಂದ್ರನಿಗೆ ರವಿಬಸ್ರೂರು ಸಂಗೀತ ನೀಡಿದ್ದು, ಇವರ ಪುತ್ರ ಪವನ್ ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಎ.ಜಿ.ಸುರೇಶ್ ಹಾಗೂ ಮಲ್ಲೇಶ್ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.
ಬಿಡುಗಡೆ: ಅಭಿರಾಮಚಂದ್ರ ಮೇ ತಿಂಗಳಿನಲ್ಲಿ ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.