ಖ್ಯಾತ ನಿರ್ದೇಶಕ ದಿನೇಶ್ ಬಾಬು ನಿರ್ದೇಶನದಲ್ಲಿ ಮೂಡಿ ಬಂದಿರುವ ಅಭ್ಯಂಜನ ಚಿತ್ರದಲ್ಲಿ ಉಪ್ಪಿನ ಕಾಗದ ಖ್ಯಾತಿಯ ನಟಿ ಅಪೂರ್ವ ಭಾರದ್ವಾಜ್ ಮತ್ತು ಕರಿ ಸುಬ್ಬು ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ನಾಗೇಶ್ವರ ರಾವ್ ,ನಾಗರಾಜ್ ಶಾಂಡಿಲ್ಯ ಮತ್ತು ಮಂಜುನಾಥ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಇದೊಂದು ನೈಜ ಘಟನೆ ಆಧಾರಿತ ಚಿತ್ರವಾಗಿದೆ. 2020 ರ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದಲ್ಲಿ ಕನ್ನಡ ಚಲನಚಿತ್ರಗಳ ವಿಭಾಗದಲ್ಲಿ ಈ ಚಿತ್ರ ಪ್ರದರ್ಶನಗೊಂಡಿತು.
ಈ ಚಿತ್ರ 2020 ರ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನ ಕಂಡಿತು.